ಕಟುವಾ ಅತ್ಯಾಚಾರ ಪ್ರಕರಣಕ್ಕೆ ವಿಶ್ವಸಂಸ್ಥೆ ಖಂಡನೆ, ನ್ಯಾಯ ಸಿಗುವ ವಿಶ್ವಾಸ

ಜಮ್ಮು-ಕಾಶ್ಮೀರದ ಕಟುವಾ ಜಿಲ್ಲೆಯಲ್ಲಿ ನಡೆದಿರುವ ಎಂಟು ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಭಯಾನಕ ಘಟನೆ ಎಂದು ಆತಂಕ ವ್ಯಕ್ತಪಡಿಸಿರುವ ವಿಶ್ವಸಂಸ್ಥೆ, ಇಂತಹ ಹೇಯ ಕೃತ್ಯ ಎಸಗಿದವರಿಗೆ ನ್ಯಾಯ ಸಿಗುವ ಭರವಸೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದೆ

ದೇಶಾದ್ಯಂತ ಭಾರಿ ಆಕ್ರೋಶಕ್ಕೆ ಕಾರಣವಾಗಿರುವ, ಜಮ್ಮು-ಕಾಶ್ಮೀರದ ಕಟುವಾ ಜಿಲ್ಲೆಯ ಎಂಟು ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಭಯಾನಕ ಘಟನೆ ಎಂದಿದೆ ವಿಶ್ವಸಂಸ್ಥೆ. ಜೊತೆಗೆ, ಇಂತಹ ಹೇಯ ಕೃತ್ಯ ಎಸಗಿದವರಿಗೆ ತಕ್ಕ ಶಿಕ್ಷೆಯಾಗುವ ವಿಶ್ವಾಸ ವ್ಯಕ್ತಪಡಿಸಿದೆ.

ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೊನಿಯೋ ಗುಟೆರಸ್ ಈ ಕುರಿತಂತೆ ವಿಷಾದ ವ್ಯಕ್ತಪಡಿಸಿದ್ದು, “ಪುಟ್ಟ ಬಾಲಕಿಯ ಅತ್ಯಾಚಾರ ಮತ್ತು ಕೊಲೆಯ ವಿಚಾರಗಳ ಕುರಿತ ಮಾಧ್ಯಮ ವರದಿಗಳನ್ನು ನೋಡಿದ್ದೇವೆ. ಇದು ಅತ್ಯಂತ ಹೇಯ, ಅಮಾನವೀಯ ಹಾಗೂ ಭಯಾನಕ ಘಟನೆ. ಇಂತಹ ಕೃತ್ಯ ಎಸಗಿದವರ ವಿರುದ್ಧ ಕಠಿಣ ಶಿಕ್ಷೆ ವಿಧಿಸಲು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂಬ ವಿಶ್ವಾಸವಿದೆ,” ಎಂದಿದ್ದಾರೆ.

ಇದನ್ನೂ ಓದಿ : ಜಮ್ಮುವಿನಲ್ಲಿ ದ್ವೇಷಕ್ಕೆ ಬಲಿಯಾದ ಬಾಲಕಿ; ಅಸಲಿಗೆ ಅಲ್ಲಿ ನಡೆದದ್ದೇನು?

ಬಕರ್‌ವಾಲ್ ಸಮುದಾಯಕ್ಕೆ ಸೇರಿದ ಬಾಲಕಿಯನ್ನು ಅಪಹರಿಸಿ, ದೇವಾಲಯದಲ್ಲಿ ಬಂಧಿಸಿ, ಅತ್ಯಂತ ಕ್ರೂರವಾಗಿ ಅತ್ಯಾಚಾರ ಎಸಗಿ ಕೊಲೆಗೈಯಲಾಗಿತ್ತು. ಇದರಲ್ಲಿ ಪೊಲೀಸರೂ ಭಾಗಿಯಾಗಿದ್ದರೆಂಬ ಆರೋಪವಿದೆ. ಈ ಪ್ರಕರಣಕ್ಕೆ ದೇಶಾದ್ಯಂತ ತೀವ್ರ ಖಂಡನೆ ವ್ಯಕ್ತವಾಗುತ್ತಿದೆ.

ಗಣಿಗಾರಿಕೆ ಅನುಮತಿಗೆ ಲಂಚ; ಐಎಫ್‌ಎಸ್‌, ಐಎಎಸ್‌ ಅಧಿಕಾರಿಗೆ ಎಸಿಬಿ ಕ್ಲೀನ್‌ಚಿಟ್‌?
ಕಬ್ಬನ್‌ ಪಾರ್ಕ್‌ ಠಾಣೆಗೆ ಶ್ರುತಿ ದೂರು; ಅರ್ಜುನ್ ಸರ್ಜಾ‌ ವಿರುದ್ಧ ಎಫ್‌ಐಆರ್
ಶ್ರೀಲಂಕಾ ರಾಜಕೀಯ ಬಿಕ್ಕಟ್ಟು| ಪಕ್ಸೆ ಮತ್ತೆ ಪ್ರಧಾನಿ, ಭಾರತಕ್ಕೆ ಆಘಾತ
Editor’s Pick More