ಆರು ಕ್ಷೇತ್ರಗಳ ಪರಿಷತ್ ಚುನಾವಣೆ ಮುಕ್ತಾಯ; ಉತ್ತಮ ಮತದಾನ

ಮೂರು ಪದವೀಧರ ಕ್ಷೇತ್ರ ಹಾಗೂ ಮೂರು ಶಿಕ್ಷಕರ ಕ್ಷೇತ್ರ ಸೇರಿ ಒಟ್ಟು ಆರು ವಿಧಾನ ಪರಿಷತ್‌ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಉತ್ತಮ ಮತದಾನವಾಗಿದೆ. ಬೆಳಗ್ಗೆ 7 ಗಂಟೆಗೆ ಆರಂಭವಾದ ಮತದಾನ ಪ್ರಕ್ರಿಯೆ ಮಧ್ಯಾಹ್ನದ ವೇಳೆಗೆ ಕೆಲವೆಡೆ ಸುರಿದ ಮಳೆ ನಡುವೆಯೂ ಚುರುಕಿನಿಂದ ನಡೆಯಿತು

ಮೂರು ಪದವೀಧರ ಕ್ಷೇತ್ರ ಹಾಗೂ ಮೂರು ಶಿಕ್ಷಕರ ಕ್ಷೇತ್ರ ಸೇರಿ ಒಟ್ಟು ಆರು ವಿಧಾನ ಪರಿಷತ್‌ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಉತ್ತಮ ಮತದಾನವಾಗಿದೆ. ಬೆಳಗ್ಗೆ 7 ಗಂಟೆಗೆ ಆರಂಭವಾದ ಮತದಾನ ಪ್ರಕ್ರಿಯೆ ಮಧ್ಯಾಹ್ನದ ವೇಳೆಗೆ ಕೆಲವೆಡೆ ಸುರಿದ ಮಳೆ ನಡುವೆಯೂ ಚುರುಕಿನಿಂದ ನಡೆಯಿತು.

ಕ್ಷೇತ್ರವಾರು ಮತದಾನವನ್ನು ಗಮನಿಸುವುದಾದರೆ, ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ 19,402 ಮತದಾರರಿದ್ದು, ಶೇ.91.84ರಷ್ಟು ಮತದಾನವಾಗಿದೆ. ದಕ್ಷಿಣ ಕ್ಷೇತ್ರದಲ್ಲಿ 20,678 ಮತದಾರರಿದ್ದು, ಶೇ.79.91 ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ 20,482 ಮತದಾರರಿದ್ದು, ಶೇ.80.45ರಷ್ಟು ಮತದಾನವಾಗಿದೆ. ಹಾಗೆಯೇ ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ 63,354 ಮತದಾರರಿದ್ದು, ಶೇ.64.11 ನೈರುತ್ಯ ಪದವೀಧರ ಕ್ಷೇತ್ರದಲ್ಲಿ 67,306 ಮತದಾರರಿದ್ದು, ಶೇ.70.04 ಹಾಗೂ ಈಶಾನ್ಯ ಪದವೀಧರ ಕ್ಷೇತ್ರದಲ್ಲಿ 82,054 ಮತದಾರರಿದ್ದು, ಶೇ.70.13ರಷ್ಟು ಮತದಾನವಾಗಿದೆ.

ಮೂರು ಶಿಕ್ಷಕರ ಕ್ಷೇತ್ರಗಳಾದ ಆಗ್ನೇಯ, ದಕ್ಷಿಣ ಹಾಗೂ ನೈಋತ್ಯ ಶಿಕ್ಷಕರ ಕ್ಷೇತ್ರದಲ್ಲಿ ಮೂರು ಪಕ್ಷಗಳಿಂದಲೂ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಎಂ ರಾಮಪ್ಪ, ಬಿಜೆಪಿಯಿಂದ ವೈ ಎ ನಾರಾಯಣಸ್ವಾಮಿ ಹಾಗೂ ಜೆಡಿಎಸ್‌ನಿಂದ ಎಂ ಎ ರಮೇಶ್ ಬಾಬು ಸ್ಪರ್ಧೆಯಲ್ಲಿದ್ದಾರೆ.

ಇತ್ತ, ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಎಂ ಲಕ್ಷ್ಮಣ, ಬಿಜೆಪಿಯಿಂದ ಬಿ ನಿರಂಜನಮೂರ್ತಿ ಹಾಗೂ ಜೆಡಿಎಸ್‌ನಿಂದ ಮರಿತಿಬ್ಬೇಗೌಡ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆ ಕೆ ಮಂಜುನಾಥ್, ಬಿಜೆಪಿ ಅಭ್ಯರ್ಥಿಯಾಗಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹಾಗೂ ಜೆಡಿಎಸ್ ಅಭ್ಯರ್ಥಿಯಾಗಿ ಎಸ್ ಎಲ್ ಭೋಜೇಗೌಡ ಕಣದಲ್ಲಿದ್ದಾರೆ.

ಇದನ್ನೂ ಓದಿ : ವಿಧಾನಸಭೆ ಬೆನ್ನಲ್ಲೇ ಪರಿಷತ್ ಚುನಾವಣೆ; ಮೂರೂ ಪಕ್ಷಗಳಲ್ಲಿ ಚಟುವಟಿಕೆ ಬಿರುಸು

ಹಾಗೆಯೇ, ನೈರುತ್ಯ ಪದವೀಧರರ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಎಸ್ ಪಿ ದಿನೇಶ್, ಬಿಜೆಪಿಯಿಂದ ಆಯನೂರು ಮಂಜುನಾಥ್ ಜೆಡಿಎಸ್‌ನಿಂದ ಅರುಣಕುಮಾರ್ ಹಾಗೂ ಬೆಂಗಳೂರು ಪದವೀಧರರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಮೋಜಿ ಗೌಡ, ಬಿಜೆಪಿ ಅಭ್ಯರ್ಥಿಯಾಗಿ ಅ ದೇವೇಗೌಡ, ಜೆಡಿಎಸ್ ಅಭ್ಯರ್ಥಿಯಾಗಿ ಅಚ್ಚೇಗೌಡ ಶಿವಣ್ಣ ಮತ್ತು ಈಶಾನ್ಯ ಪದವೀಧರರ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಚಂದ್ರಶೇಖರ್ ಪಾಟೀಲ್, ಬಿಜೆಪಿಯಿಂದ ಕೆ ಬಿ ಶ್ರೀನಿವಾಸ್, ಜೆಡಿಎಸ್‌ನಿಂದ ಪ್ರತಾಪ ರೆಡ್ಡಿ ಸ್ಪರ್ಧೆಯಲ್ಲಿದ್ದು, ಜೂನ್ 12ರಂದು ಆರು ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಲಿದೆ.

ಗಣಿಗಾರಿಕೆ ಅನುಮತಿಗೆ ಲಂಚ; ಐಎಫ್‌ಎಸ್‌, ಐಎಎಸ್‌ ಅಧಿಕಾರಿಗೆ ಎಸಿಬಿ ಕ್ಲೀನ್‌ಚಿಟ್‌?
ಕಬ್ಬನ್‌ ಪಾರ್ಕ್‌ ಠಾಣೆಗೆ ಶ್ರುತಿ ದೂರು; ಅರ್ಜುನ್ ಸರ್ಜಾ‌ ವಿರುದ್ಧ ಎಫ್‌ಐಆರ್
ಶ್ರೀಲಂಕಾ ರಾಜಕೀಯ ಬಿಕ್ಕಟ್ಟು| ಪಕ್ಸೆ ಮತ್ತೆ ಪ್ರಧಾನಿ, ಭಾರತಕ್ಕೆ ಆಘಾತ
Editor’s Pick More