ಮಾರ್ನಿಂಗ್ ಡೈಜೆಸ್ಟ್ | ಇಂದು ನೀವು ಗಮನಿಸಬೇಕಾದ ಪ್ರಮುಖ ಸುದ್ದಿಗಳು

ಇಂದು ಗಮನಿಸಬೇಕಾದ ಪ್ರಮುಖ ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಸುದ್ದಿಗಳು

ಸಿಎಂ ಕು‌ಮಾರಸ್ವಾಮಿ- ಅಜೀಂ ಪ್ರೇಮ್ ಜಿ ಭೇಟಿ

ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರನ್ನು ವಿಪ್ರೊ ಮುಖ್ಯಸ್ಥ ಅಜೀಂ ಪ್ರೇಮ್ ಜಿ ಅವರು ಮಂಗಳವಾರ ಭೇಟಿ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಬೆಂಗಳೂರಿನ ಅಭಿವೃದ್ಧಿ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ. ಈಚೆಗೆ ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿ ಅವರು ಮೆಟ್ರೊ ನಿಲ್ದಾಣ ನಿರ್ಮಾಣ ಮತ್ತು ನಿರ್ವಹಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಜೊತೆ ಒಡಂಬಡಿಕೆಗೆ ಸಹಿ ಹಾಕಿದ್ದರು. ಬಯೋಕಾ‌ನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಸಹ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ, ಇದೇ ತೆರನಾದ ಪ್ರಸ್ತಾವ ಮಂಡಿಸಿದ್ದರು. ಈಗ ಅಜೀಂ ಪ್ರೇಮ್ ಜಿ ಭೇಟಿ ಕುತೂಹಲ ಮೂಡಿಸಿದೆ‌.

ಲೋಕಪಾಲ ಆಯ್ಕೆ ವಿಚಾರ; ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ

ಭ್ರಷ್ಟಾಚಾರ ಮತ್ತು ಲಂಚಾವತಾರ ನಿಗ್ರಹದ ಉದ್ದೇಶದ ಲೋಕಪಾಲರನ್ನು ನೇಮಿಸುವ ವಿಚಾರವಾಗಿ ಇಂದು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯಲಿದೆ. ಕಳೆದ ಜುಲೈ 19ರಂದು ಶೋಧ ಸಮಿತಿ ರಚಿಸುವ ಉದ್ದೇಶದಿಂದ ಲೋಕಪಾಲ ಆಯ್ಕೆ ಸಮಿತಿ ಸಭೆ ಸೇರಿತ್ತು, ಆಯ್ಕೆ ಸಮಿತಿಯ ಸಭೆ ನಡೆಯಲಿರುವುದರಿಂದ ಯಾವುದೇ ಆದೇಶ ಹೊರಡಿಸಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿಗಳಾದ ರಂಜನ್ ಗೊಗೊಯ್ ಅವರ ನೇತೃತ್ವದ ನ್ಯಾಯಪೀಠ ಅಭಿಪ್ರಾಯ ವ್ಯಕ್ತಪಡಿಸಿ, ಮುಂದಿನ ವಿಚಾರಣೆಯನ್ನು ಜುಲೈ 24ಕ್ಕೆ ಕಾಯ್ದಿರಿಸಿತ್ತು.

ವಿಶೇಷ ಸ್ಥಾನಮಾನಕ್ಕೆ ಆಗ್ರಹಿಸಿ ಆಂಧ್ರಪ್ರದೇಶ ಬಂದ್

ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಬೇಕೆಂದು ಆಗ್ರಹಿಸಿ ಇಂದು ಆಂಧ್ರಪ್ರದೇಶ ಬಂದ್‌ಗೆ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ವೈ ಎಸ್ ಜಗನ್ ಮೋಹನ್ ರೆಡ್ಡಿ ಕರೆ ನೀಡಿದ್ದಾರೆ. ಕೇಂದ್ರ ಸರ್ಕಾರದಿಂದ ಆಂಧ್ರಪ್ರದೇಶಕ್ಕೆ ಅನ್ಯಾಯವಾಗುತ್ತಿರುವುದನ್ನು ಖಂಡಿಸಿ ಬಂದ್ ಕರೆ ನೀಡಿರುವುದಾಗಿ ಜಗನ್ ತಿಳಿಸಿದ್ದಾರೆ. ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವಲ್ಲಿ ಬಿಜೆಪಿ ನಿರ್ಲಕ್ಷ್ಯ ಮಾಡುತ್ತಿದೆ ಎಂದು ಅವರು ಈ ಹಿಂದಿನಿಂದಲೂ ಆರೋಪಿಸುತ್ತಲೇ ಬಂದಿದ್ದಾರೆ.

ಇಂದು ದಕ್ಷಿಣ ಆಫ್ರಿಕಾಗೆ ಮೋದಿ

ನಾಳೆ ನಡೆಯಲಿರುವ ಬ್ರಿಕ್ಸ್ ಜಾಗತಿಕ ಸಮಾವೇಶದಲ್ಲಿ ಪಾಲ್ಗೊಳ್ಳುವ ಸಲುವಾಗಿ ಆಫ್ರಿಕಾ ತೆರಳಿರುವ ಪ್ರಧಾನಿ ನರೇಂದ್ರ ಮೋದಿ, ದಕ್ಷಿಣ ಆಫ್ರಿಕಾ ಪ್ರಧಾನಿ ಸಿರಿಲ್ ರಾಮಪೋಸಾ ಅವರ ಜೊತೆ ಮಾತುಕತೆ ನಡೆಸಲಿದ್ದಾರೆ. ಇದು ಕಳೆದ 21 ವರ್ಷಗಳಲ್ಲಿ ಭಾರತದ ಪ್ರಧಾನ ಮಂತ್ರಿಯ ಮೊದಲ ದ್ವಿಪಕ್ಷೀಯ ಭೇಟಿಯಾಗಿದೆ. ಭಾರತ ಮತ್ತು ಉಗಾಂಡಾ ನಡುವಿನ ರಕ್ಷಣಾ ಸಹಕಾರ ಹೆಚ್ಚಿಸುವಲ್ಲಿ ಮುಖ್ಯ ಹೆಜ್ಜೆಯಾಗಲಿದೆ.

ವನಿತಾ ವಿಶ್ವಕಪ್ ಹಾಕಿ: ಜಪಾನ್-ನ್ಯೂಜಿಲೆಂಡ್ ಸೆಣಸಾಟ

ಲಂಡನ್‌ನಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ವನಿತಾ ವಿಶ್ವಕಪ್ ಹಾಕಿ ಪಂದ್ಯಾವಳಿಯಲ್ಲಿಂದು ಜಪಾನ್ ಮತ್ತು ನ್ಯೂಜಿಲೆಂಡ್ ತಂಡಗಳು ಸೆಣಸಾಡಲಿವೆ. ಡಿ ಗುಂಪಿನ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ಎದುರು ೨-೩ ಗೋಲುಗಳಿಂದ ಸೋತಿದ್ದ ಜಪಾನ್, ನ್ಯೂಜಿಲೆಂಡ್ ಎದುರು ಜಯ ಸಾಧಿಸುವ ಗುರಿ ಹೊತ್ತಿದೆ. ಇತ್ತ, ಮೊದಲ ಪಂದ್ಯದಲ್ಲಿ ಬೆಲ್ಜಿಯಂ ಅನ್ನು ೪-೨ ಗೋಲುಗಳಿಂದ ಹಣಿದು ಗುಂಪಿನಲ್ಲಿ ಅಗ್ರಸ್ಥಾನದಲ್ಲಿರುವ ನ್ಯೂಜಿಲೆಂಡ್ ಸತತ ಎರಡನೇ ಗೆಲುವಿನ ಲೆಕ್ಕಾಚಾರದಲ್ಲಿದೆ. ಮೇಲ್ನೋಟಕ್ಕೆ ನ್ಯೂಜಿಲೆಂಡ್ ಬಲಿಷ್ಠ ತಂಡವಾಗಿದ್ದು, ಜಪಾನ್ ಯಾವ ರಣತಂತ್ರ ಅನುಸರಿಸುತ್ತದೆ ಎಂಬುದು ಕುತೂಹಲ ಕೆರಳಿಸಿದೆ

ಗಣಿಗಾರಿಕೆ ಅನುಮತಿಗೆ ಲಂಚ; ಐಎಫ್‌ಎಸ್‌, ಐಎಎಸ್‌ ಅಧಿಕಾರಿಗೆ ಎಸಿಬಿ ಕ್ಲೀನ್‌ಚಿಟ್‌?
ಕಬ್ಬನ್‌ ಪಾರ್ಕ್‌ ಠಾಣೆಗೆ ಶ್ರುತಿ ದೂರು; ಅರ್ಜುನ್ ಸರ್ಜಾ‌ ವಿರುದ್ಧ ಎಫ್‌ಐಆರ್
ಶ್ರೀಲಂಕಾ ರಾಜಕೀಯ ಬಿಕ್ಕಟ್ಟು| ಪಕ್ಸೆ ಮತ್ತೆ ಪ್ರಧಾನಿ, ಭಾರತಕ್ಕೆ ಆಘಾತ
Editor’s Pick More