ಮಾರ್ನಿಂಗ್ ಡೈಜೆಸ್ಟ್ | ಇಂದು ಗಮನಿಸಬೇಕಾದ 5 ಪ್ರಮುಖ ಸುದ್ದಿಗಳು   

ಇಂದು ಗಮನಿಸಬೇಕಾದ ಪ್ರಮುಖ ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳು

ಪ್ರವಾಹಪೀಡಿತ ಕೊಡಗಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ

ಭಾರಿ ಮಳೆ ಹಾಗೂ ಪ್ರವಾಹದಿಂದ ತತ್ತರಿಸಿರುವ ಕೊಡಗಿನ ವಿವಿಧ ಸ್ಥಳಗಳಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದು, ಸಂತ್ರಸ್ತರಿಗೆ ಸಾಂತ್ವನ ಹೇಳಲಿದ್ದಾರೆ. ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಗುಂಡೂ ರಾವ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಸಾಥ್ ನೀಡಲಿದ್ದಾರೆ.

ಗುಜರಾತ್‌ಗೆ ಭೇಟಿ ನೀಡಲಿದ್ದಾರೆ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಇಂದು ಗುಜರಾತ್‌ಗೆ ಭೇಟಿ ನೀಡಲಿದ್ದಾರೆ. ಮೊದಲಿಗೆ ಸೋಮನಾಥ ದೇವಸ್ಥಾನಕ್ಕೆ ಭೇಟಿ ನೀಡಲಿರುವ ಪ್ರಧಾನಿ, ಬಳಿಕ ವಿಧಿವಿಜ್ಞಾನ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಅಷ್ಟೇ ಅಲ್ಲದೆ, ಇಂದು ಬೆಳಗ್ಗೆ ವಲ್ಸಾದ್ ಪಟ್ಟಣದ ಜುಜ್ವಾ ಗ್ರಾಮದಲ್ಲಿ ಆಯೋಜಿಸಿರುವ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡು ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಫಲಾನುಭವಿಗಳೊಂದಿಗೆ ಮಾತುಕತೆ ನಡೆಸಲಿದ್ದಾರೆ.

ಬರ್ಲಿನ್‌ ಸಾರ್ವಜನಿಕ ಸಭೆಯಲ್ಲಿ ರಾಹುಲ್ ಭಾಗಿಯಾಗಲಿದ್ದಾರೆ ರಾಹುಲ್

ಎರಡು ದಿನಗಳ ಜರ್ಮನಿ ಪ್ರವಾಸದಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಗುರುವಾರ ಜರ್ಮನ್‌ನ ಬರ್ಲಿನ್‌ನಲ್ಲಿ ಸಾಗರೋತ್ತರ ಕಾಂಗ್ರೆಸ್ ವತಿಯಿಂದ ಆಯೋಜಿಸಲಾಗಿರುವ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಭಾರತೀಯ ಕಾಲಮಾನ ರಾತ್ರಿ 9.30ಕ್ಕೆ ಈ ಕಾರ್ಯಕ್ರಮ ಆರಂಭವಾಗಲಿದೆ ಎಂದು ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ತಿಳಿಸಿದ್ದಾರೆ.

ಕೊಡಗಿನಲ್ಲಿ ಇಂದಿನಿಂದ ಶಾಲಾ-ಕಾಲೇಜು ಪುನರಾರಂಭ

ಕೊಡಗಿನಲ್ಲಿ ಮಳೆ ಪ್ರಮಾಣ ತಗ್ಗಿದ್ದು, ಜನಜೀವನ ಯಥಾಸ್ಥಿತಿಯತ್ತ ಮರಳುತ್ತಿದೆ. ಕಳೆದ 20 ದಿನಗಳಿಂದ ಮುಚ್ಚಿದ್ದ ಶಾಲಾ-ಕಾಲೇಜುಗಳು ಇಂದಿನಿಂದ ಪುನರಾರಂಭವಾಗಲಿವೆ ಎಂದು ಜಿಲ್ಲಾಡಳಿತ ತಿಳಿಸಿದೆ. ರಸ್ತೆ ಸಂಪರ್ಕವಿಲ್ಲದ, ಹಾನಿಗೊಳಗಾಗಿರುವ ಶಾಲಾ ಕಾಲೇಜುಗಳು ಹಾಗೂ ಪುನರ್ವಸತಿ ಕೇಂದ್ರಗಳಾಗಿ ಪರಿವರ್ತನೆಯಾಗಿರುವ ಶಾಲೆಗಳನ್ನು ಹೊರತುಪಡಿಸಿ ಎಲ್ಲ ಶಾಲಾ ಕಾಲೇಜುಗಳು ಇಂದಿನಿಂದ ಪುನರಾರಂಭವಾಗಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಇಂದು ಸೈನಾ-ಸಿಂಧು, ಅಂಕಿತಾ ರೈನಾ ಮತ್ತಿತರರು ಕಣಕ್ಕೆ

ಪ್ರತಿಷ್ಠಿತ ಹದಿನೆಂಟನೇ ಏಷ್ಯಾ ಕ್ರೀಡಾಕೂಟದಲ್ಲಿಂದು ಭಾರತ ಶೂಟಿಂಗ್, ಜಿಮ್ನಾಸ್ಟಿಕ್, ಟೆನಿಸ್, ರೋಯಿಂಗ್ ಮುಂತಾದ ಕ್ರೀಡೆಯಲ್ಲಿ ಭಾಗವಹಿಸಲಿದೆ. ಸೆಮಿಫೈನಲ್‌ನಲ್ಲಿ ಅಂಕಿತಾ ರೈನಾ ಕಣಕ್ಕಿಳಿಯುತ್ತಿದ್ದು, ಈಗಾಗಲೇ ಕಂಚಿನ ಪದಕ ಖಚಿತಪಡಿಸಿರುವ ಆಕೆ, ಫೈನಲ್ ತಲುಪುವ ಗುರಿ ಹೊತ್ತಿದ್ದಾರೆ. ಅಂತೆಯೇ, ಪುರುಷರ ಡಬಲ್ಸ್‌ನಲ್ಲಿ ರೋಹನ್ ಬೋಪಣ್ಣ ಮತ್ತು ದಿವಿಜ್ ಜೋಡಿ ಕೂಡಾ ಫೈನಲ್ ತಲುಪುವ ವಿಶ್ವಾಸದಲ್ಲಿದೆ. ಏತನ್ಮಧ್ಮೆ, ತಂಡ ವಿಭಾಗದಲ್ಲಿ ಪರಾಭವಗೊಂಡ ಭಾರತದ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಪಿ ವಿ ಸಿಂಧು ಸಿಂಗಲ್ಸ್ ವಿಭಾಗದಲ್ಲಿಂದು ಮೊದಲ ಸುತ್ತಿನಲ್ಲಿ ಸೆಣಸಲಿದ್ದಾರೆ. ಮಧ್ಯಾಹ್ನ ೧೨.೦೦ರಿಂದ ಶುರುವಾಗಲಿರುವ ಪಂದ್ಯಗಳಲ್ಲಿ  ಸಿಂಧು, ಸೈನಾ ತಮ್ಮ ಪ್ರತಿಸ್ಪರ್ಧಿಗಳ ವಿರುದ್ಧ ಸೆಣಸಲಿದ್ದರೆ, ಸ್ಕ್ವಾಶ್ ವಿಭಾಗದ ಪ್ರೀಕ್ವಾರ್ಟರ್‌ಫೈನಲ್‌ನಲ್ಲಿ ದೀಪಿಕಾ ಪಳ್ಳೀಕಲ್ ಮತ್ತು ಜೋಶ್ನಾ ಚಿನ್ನಪ್ಪ ಸಂಜೆ ೭.೦೦ರ ನಂತರ ಆರಂಭವಾಗಲಿರುವ ಪಂದ್ಯದಲ್ಲಿ ಕಾದಾಡಲಿದ್ದಾರೆ.

ಗಣಿಗಾರಿಕೆ ಅನುಮತಿಗೆ ಲಂಚ; ಐಎಫ್‌ಎಸ್‌, ಐಎಎಸ್‌ ಅಧಿಕಾರಿಗೆ ಎಸಿಬಿ ಕ್ಲೀನ್‌ಚಿಟ್‌?
ಕಬ್ಬನ್‌ ಪಾರ್ಕ್‌ ಠಾಣೆಗೆ ಶ್ರುತಿ ದೂರು; ಅರ್ಜುನ್ ಸರ್ಜಾ‌ ವಿರುದ್ಧ ಎಫ್‌ಐಆರ್
ಶ್ರೀಲಂಕಾ ರಾಜಕೀಯ ಬಿಕ್ಕಟ್ಟು| ಪಕ್ಸೆ ಮತ್ತೆ ಪ್ರಧಾನಿ, ಭಾರತಕ್ಕೆ ಆಘಾತ
Editor’s Pick More