ಮಾರ್ನಿಂಗ್ ಡೈಜೆಸ್ಟ್ | ಇಂದು ಗಮನಿಸಬೇಕಾದ ಪ್ರಮುಖ ಸುದ್ದಿಗಳು

ಇಂದು ಗಮನಿಸಬೇಕಾದ ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಪ್ರಮುಖ ಸುದ್ದಿಗಳು

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಭೆ

ರಫೇಲ್ ಯುದ್ದ ವಿಮಾನ ಖರೀದಿ ಹಗರಣ, ಕೃಷಿ ಬಿಕ್ಕಟ್ಟು, ನಿರುದ್ಯೋಗದ ನಂತರ ಪೆಟ್ರೋಲ್, ಡೀಸೆಲ್ ಹಾಗೂ ಹೆಚ್ಚುತ್ತಿರುವ ಅಗತ್ಯ ವಸ್ತುಗಳ ಬೆಲೆಗಳನ್ನು ನಿಯಂತ್ರಣಕ್ಕೆ ತರಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಈ ಸಂಬಂಧ ದೇಶಾದ್ಯಂತ ಹೋರಾಟ ನಡೆಸಲು ರೂಪುರೇಷೆ ಸಿದ್ಧಪಡಿಸಲು ಗುರುವಾರ ಸಭೆ ಆಯೋಜಿಸಿದೆ. ಪಕ್ಷದ ಪ್ರಧಾನ ಕಾರ್ಯದರ್ಶಿಗಳು, ರಾಜ್ಯ ಉಸ್ತುವಾರಿಗಳು ಹಾಗೂ ಎಲ್ಲ ರಾಜ್ಯ ಘಟಕಗಳ ಅಧ್ಯಕ್ಷರು ಸಭೆಯಲ್ಲಿ ಭಾಗವಹಿಸಲಿದ್ದಾರೆ.

ರಾಜ್ಯ ಸಚಿವ ಸಂಪುಟ ಸಭೆ

ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಗುರುವಾರ ಸಂಜೆ ರಾಜ್ಯ ಸಂಪುಟ ಸಭೆ ನಡೆಯಲಿದೆ. ಕೇಂದ್ರ ಸರ್ಕಾರದ ‘ಆಯುಷ್ಮಾನ್ ಭಾರತ’ ಹಾಗೂ ರಾಜ್ಯ ಸರ್ಕಾರದ ‘ಆರೋಗ್ಯ ಕರ್ನಾಟಕ’ ಯೋಜನೆ ವಿಲೀನಗೊಳಿಸುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗುವುದು ಎಂದು ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ. ಕೊಡಗು ಪರಿಹಾರ ಕಾರ್ಯಕ್ರಮ ಸೇರಿದಂತೆ ಹಲವು ಮಹತ್ವದ ವಿಚಾರಗಳ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ ನಡೆಯಲಿದೆ‌ ಎನ್ನಲಾಗಿದೆ.

ವರಿಷ್ಠರ ಜೊತೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂ ರಾವ್ ಚರ್ಚೆ

ಲೋಕಸಭೆ ಕ್ಷೇತ್ರವಾರು ರಾಜಕೀಯ ಸ್ಥಿತಿಗತಿ ಕುರಿತು ಇತ್ತೀಚೆಗೆ ಪ್ರಮುಖರ ಸಭೆ ನಡೆಸಿದ ಬಳಿಕ ಸಿದ್ಧಪಡಿಸಿರುವ ವರದಿಗೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಪಕ್ಷದ ವರಿಷ್ಠರ ಜೊತೆ ಗುರುವಾರ ದೆಹಲಿಯಲ್ಲಿ ವಿಚಾರ ವಿನಿಮಯ ನಡೆಸಲಿದ್ದಾರೆ. ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ, ಜೆಡಿಎಸ್ ಜೊತೆಗಿನ ಮೈತ್ರಿ, ಲೋಕಸಭೆ ಚುನಾವಣೆಯಲ್ಲಿ ಕ್ಷೇತ್ರಗಳ ಹಂಚಿಕೆ ಹಾಗೂ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಡಿಸೆಂಬರ್ ಅಂತ್ಯದೊಳಗೆ ಅಂತಿಮಗೊಳಿಸುವ ಬಗ್ಗೆ ಈಗಾಗಲೇ ವರಿಷ್ಠರು ಸುಳಿವು ನೀಡಿದ್ದಾರೆ.

ಸಲಿಂಗಕಾಮ ಕುರಿತು ತೀರ್ಪು ನೀಡಲಿದೆ ಸುಪ್ರೀಂ ಕೋರ್ಟ್‌

ಸಲಿಂಗಕಾಮವನ್ನು ಅಪರಾಧೀಕರಿಸುವ ಐಪಿಸಿ ಸೆಕ್ಷನ್ 377ರ ಸಾಂವಿಧಾನಿಕ ಮಾನ್ಯತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ಕುರಿತ ಮಹತ್ವದ ತೀರ್ಪನ್ನು ಸುಪ್ರೀಂ ಕೋರ್ಟ್ ಇಂದು ಪ್ರಕಟಿಸಲಿದೆ. ಸೆಕ್ಷನ್ 377ರ ಅನ್ವಯ ಯಾವುದೇ ವ್ಯಕ್ತಿ ನಿಸರ್ಗಕ್ಕೆ ವಿರುದ್ಧವಾಗಿ ಲೈಂಗಿಕ ಕ್ರಿಯೆ ನಡೆಸಿದರೆ ಅದು ಅಪರಾಧ. ಅಂಥ ಅಪರಾಧಕ್ಕೆ ಕಠಿಣ ಶಿಕ್ಷೆ ವಿಧಿಸಬಹುದಾಗಿದೆ. ಇದರ ರದ್ದತಿ ಕೋರಿ ಸಲಿಂಗಕಾಮಿ ಹಕ್ಕುಗಳ ಕಾರ್ಯಕರ್ತರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿರುವ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠ ಇಂದು ತೀರ್ಪು ಪ್ರಕಟಿಸಲಿದೆ.

ಇಂದು ಕೆಪಿಎಲ್ ಫೈನಲ್; ಪ್ರಶಸ್ತಿಗಾಗಿ ಉತ್ತಪ್ಪ-ಚಿಪ್ಲಿ ಪೈಪೋಟಿ

ಕರ್ನಾಟಕ ಪ್ರೀಮಿಯರ್ ಲೀಗ್ (ಕೆಪಿಎಲ್) ಏಳನೇ ಆವೃತ್ತಿಯ ಫೈನಲ್ ಪಂದ್ಯಕ್ಕೆ ಕ್ಷಣಗಣಣನೆ ಶುರುವಾಗಿದೆ. ಮೈಸೂರಿನ ಗಂಗೋತ್ರಿ ಗ್ಲೇಡ್ಸ್‌ ಕ್ರೀಡಾಮೈದಾನದಲ್ಲಿ ನಡೆಯಲಿರುವ ಈ ಪ್ರಶಸ್ತಿ ಸುತ್ತಿನಲ್ಲಿ ರಾಬಿನ್ ಉತ್ತಪ್ಪ ಸಾರಥ್ಯದ ಬೆಂಗಳೂರು ಬ್ಲಾಸ್ಟರ್ಸ್ ಮತ್ತು ಭರತ್ ಚಿಪ್ಲಿ ನಾಯಕತ್ವದ ಬಿಜಾಪುರ ಬುಲ್ಸ್ ಸೆಣಸಲಿವೆ. ನಿನ್ನೆ ನಡೆದ ನಿರ್ಣಾಯಕ ಪಂದ್ಯದಲ್ಲಿ ಆರ್ ವಿನಯ್ ಕುಮಾರ್ ಪಡೆಯನ್ನು ಬುಲ್ಸ್‌ ೯ ವಿಕೆಟ್‌ಗಳಿಂದ ಮಣಿಸಿ ಫೈನಲ್ ತಲುಪಿತು. 2015/16ನೇ ಸಾಲಿನಲ್ಲಿ ಒಮ್ಮೆ ಪ್ರಶಸ್ತಿ ಜಯಿಸಿರುವ ಬುಲ್ಸ್‌ ಎರಡನೇ ಟ್ರೋಫಿ ಮೇಲೆ ಕಣ್ಣಿಟ್ಟಿದೆ. ಸಂಜೆ ೬.೩೦ಕ್ಕೆ ಶುರುವಾಗಲಿರುವ ಪಂದ್ಯದಲ್ಲಿ ಅಜೇಯ ಬ್ಲಾಸ್ಟರ್ಸ್ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡವಾಗಿದ್ದು, ಬುಲ್ಸ್‌ ಮಾಡು ಇಲ್ಲವೇ ಮಡಿ ಹೋರಾಟಕ್ಕೆ ಮುಂದಾಗಿದೆ.

ಗಣಿಗಾರಿಕೆ ಅನುಮತಿಗೆ ಲಂಚ; ಐಎಫ್‌ಎಸ್‌, ಐಎಎಸ್‌ ಅಧಿಕಾರಿಗೆ ಎಸಿಬಿ ಕ್ಲೀನ್‌ಚಿಟ್‌?
ಕಬ್ಬನ್‌ ಪಾರ್ಕ್‌ ಠಾಣೆಗೆ ಶ್ರುತಿ ದೂರು; ಅರ್ಜುನ್ ಸರ್ಜಾ‌ ವಿರುದ್ಧ ಎಫ್‌ಐಆರ್
ಶ್ರೀಲಂಕಾ ರಾಜಕೀಯ ಬಿಕ್ಕಟ್ಟು| ಪಕ್ಸೆ ಮತ್ತೆ ಪ್ರಧಾನಿ, ಭಾರತಕ್ಕೆ ಆಘಾತ
Editor’s Pick More