ಮಾರ್ನಿಂಗ್ ಡೈಜೆಸ್ಟ್ | ಇಂದು ಗಮನಿಸಬೇಕಾದ 3 ಪ್ರಮುಖ ಸುದ್ದಿಗಳು

ಇಂದು ಗಮನಿಸಬೇಕಾದ ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಪ್ರಮುಖ ಸುದ್ದಿಗಳು

ಸಿಎಂ ಕುಮಾರಸ್ವಾಮಿ ಉಡುಪಿ ಜಿಲ್ಲಾ ಪ್ರವಾಸ

ಭಾರಿ ಮಳೆಯಿಂದ ಹಾನಿಗೀಡಾಗಿದ್ದ ಕರಾವಳಿ ಭಾಗದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಶುಕ್ರವಾರ ಪ್ರವಾಸ ಕೈಗೊಳ್ಳಲಿದ್ದಾರೆ. ಉಡುಪಿ ಮತ್ತು ದಕ್ಷಿಣ ಕನ್ನಡದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಲಿರುವ ಅವರು, ಪರಿಸ್ಥಿತಿಯ ಅವಲೋಕನ ನಡೆಸಲಿದ್ದಾರೆ.

ಲಕ್ಷ್ಮಿ-ಜಾರಕಿಹೊಳಿ ಸಹೋದರರ ಜೊತೆ ದಿನೇಶ್ ಗುಂಡೂ ರಾವ್ ಸಭೆ?

ಪಿಎಲ್ಡಿ ಬ್ಯಾಂಕ್‌ನ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ವಿಚಾರವು ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಪ್ರಭಾವಿ ನಾಯಕರಾದ ರಮೇಶ್, ಸತೀಶ್ ಜಾರಕಿಹೊಳಿ ನಡುವೆ ಪ್ರತಿಷ್ಠೆಯ ಪ್ರಶ್ನೆಯಾಗಿ ಮಾರ್ಪಾಡಾಗಿದೆ. ವಿವಾದ ಬಗೆಹರಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಡಿ ಕೆ ಶಿವಕುಮಾರ್ ಸೇರಿದಂತೆ ಬೆಳಗಾವಿ ನಾಯಕರ ಜೊತೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂ ರಾವ್ ಶುಕ್ರವಾರ ಸಭೆ ನಡೆಸುವ ಸಾಧ್ಯತೆ ಇದೆ.

ಇಂಡೋ-ಇಂಗ್ಲೆಂಡ್ ಸರಣಿಯ ಕೊನೇ ಪಂದ್ಯ ಇಂದಿನಿಂದ

ಪ್ರವಾಸಿ ಭಾರತ ತಂಡ ಮತ್ತು ಆತಿಥೇಯ ಇಂಗ್ಲೆಂಡ್ ನಡುವಣ ಐದನೇ ಹಾಗೂ ಕೊನೆಯ ಟೆಸ್ಟ್ ಪಂದ್ಯವು ಲಂಡನ್‌ನ ದಿ ಓವಲ್ ಕ್ರೀಡಾಂಗಣದಲ್ಲಿ ಶುರುವಾಗಲಿದೆ. ಇಂಗ್ಲೆಂಡ್‌ನ ಸಾರ್ವಕಾಲಿಕ ಗರಿಷ್ಠ ರನ್ ಸ್ಕೋರರ್ ಅಲೆಸ್ಟೈರ್ ಕುಕ್‌ಗೆ ಇದು ಜೀವಿತದ ಕಟ್ಟಕಡೆಯ ಅಂತಾರಾಷ್ಟ್ರೀಯ ಪಂದ್ಯವಾಗಿದ್ದು, ತಂಡ ಅವರಿಗೆ ಜಯದ ಬೀಳ್ಕೊಡುಗೆ ನೀಡಲು ನಿರ್ಧರಿಸಿದೆ. ಐದು ಪಂದ್ಯಗಳ ಸರಣಿಯನ್ನು ಭಾರತ ತಂಡ ೧-೩ರಿಂದ ಈಗಾಗಲೇ ಕೈಚೆಲ್ಲಿದ್ದು, ಪ್ರವಾಸವನ್ನು ಗೆಲುವಿನೊಂದಿಗೆ ಮುಕ್ತಾಯಗೊಳಿಸುವ ದೃಷ್ಟಿಯಲ್ಲಿ ಈ ಪಂದ್ಯವನ್ನು ಗಂಭೀರವಾಗಿ ಪರಿಗಣಿಸಿದೆ. ಅಂದಹಾಗೆ, ಈ ಪಂದ್ಯದಲ್ಲಿ ಭಾರತ ತಂಡದ ನಾಯಕ ಶತಕ ದಾಖಲಿಸಿದ್ದೇ ಆದರೆ, ವಿವಿಯನ್ ರಿಚರ್ಡ್ಸ್ ಅವರ ೨೪ ಟೆಸ್ಟ್ ಶತಕಗಳ ದಾಖಲೆಯನ್ನು ಸರಿಗಟ್ಟಲಿದ್ದಾರೆ.

ಗಣಿಗಾರಿಕೆ ಅನುಮತಿಗೆ ಲಂಚ; ಐಎಫ್‌ಎಸ್‌, ಐಎಎಸ್‌ ಅಧಿಕಾರಿಗೆ ಎಸಿಬಿ ಕ್ಲೀನ್‌ಚಿಟ್‌?
ಕಬ್ಬನ್‌ ಪಾರ್ಕ್‌ ಠಾಣೆಗೆ ಶ್ರುತಿ ದೂರು; ಅರ್ಜುನ್ ಸರ್ಜಾ‌ ವಿರುದ್ಧ ಎಫ್‌ಐಆರ್
ಶ್ರೀಲಂಕಾ ರಾಜಕೀಯ ಬಿಕ್ಕಟ್ಟು| ಪಕ್ಸೆ ಮತ್ತೆ ಪ್ರಧಾನಿ, ಭಾರತಕ್ಕೆ ಆಘಾತ
Editor’s Pick More