ಮಾರ್ನಿಂಗ್ ಡೈಜೆಸ್ಟ್ | ಇಂದು ಗಮನಿಸಬೇಕಾದ 4 ಪ್ರಮುಖ ಸುದ್ದಿಗಳು

ಇಂದು ಗಮನಿಸಬೇಕಾದ ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಪ್ರಮುಖ ಸುದ್ದಿಗಳು

ಪ್ರಧಾನಿ ಭೇಟಿ ಮಾಡಲಿದೆ ಸಿಎಂ ನಿಯೋಗ

ಅತಿವೃಷ್ಟಿಯಿಂದ ಸಾಕಷ್ಟು ನಷ್ಟ ಅನುಭವಿಸಿರುವ ಕೊಡಗು ಹಾಗೂ ಕರಾವಳಿ ಜಿಲ್ಲೆಗಳ ಮರು ನಿರ್ಮಾಣಕ್ಕೆ ಅಗತ್ಯ ಪರಿಹಾರ ನೀಡುವಂತೆ ಮನವಿ ಮಾಡಲು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದ ರಾಜ್ಯ ನಾಯಕರು ಹಾಗೂ ಸಂಸದರ ಸರ್ವ ಪಕ್ಷ ನಿಯೋಗವು ಸೋಮವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಲಿದೆ. ನಿಯೋಗದಲ್ಲಿ ಬಿ ಎಸ್ ಯಡಿಯೂರಪ್ಪ ಪಾಲ್ಗೊಳ್ಳುವುದಿಲ್ಲ ಎನ್ನಲಾಗಿದೆ.

ಭಾರತ್ ಬಂದ್, ಜನಜೀವನ‌ ಅಸ್ತವ್ಯಸ್ತ ಸಾಧ್ಯತೆ

ಪೆಟ್ರೋಲ್, ಡೀಸೆಲ್, ಅಡುಗೆ ಅನಿಲದ ಬೆಲೆ ಗಗನಮುಖಿಯಾಗುತ್ತಿದ್ದರೂ ಕೇಂದ್ರ ಸರ್ಕಾರ ಅದರ ನಿಯಂತ್ರಣಕ್ಕೆ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ‌ ಎಂದು ಆರೋಪಿಸಿ ಕಾಂಗ್ರೆಸ್ ಭಾರತ್ ಬಂದ್ಗೆ ಕರೆ ನೀಡಿದೆ. ಇದಕ್ಕೆ ಹಲವು ವಿರೋಧ ಪಕ್ಷಗಳು ಬೆಂಬಲ ಸೂಚಿಸಿವೆ. ಬಂದ್ ಹಿನ್ನೆಲೆಯಲ್ಲಿ ಜನಜೀವನಕ್ಕೆ ಹೊಡೆತ ಬೀಳಲಿದ್ದು, ಬೆಳಗ್ಗೆ 10ರಿಂದ ಸಂಜೆ 6ರವರೆಗೆ ವೈದ್ಯಕೀಯ ಸೇವೆ ಹೊರತುಪಡಿಸಿ ಬಹುತೇಕ ಸೇವೆಗಳು ಸ್ಥಗಿತಗೊಳ್ಳುವ ಸಾಧ್ಯತೆ ಇದೆ. ದೇಶಾದ್ಯಂತ್ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

ಸೊಹ್ರಾಬುದ್ದೀನ್ ಎನ್‌ಕೌಂಟರ್‌ ಪ್ರಕರಣ; ಇಂದು ತೀರ್ಪು

ಸೊಹ್ರಾಬುದ್ದೀನ್ ಶೇಖ್ ಎನ್‌ಕೌಂಟರ್‌ ಪ್ರಕರಣ ಸಂಬಂಧಿಸಿದಂತೆ ಮುಂಬೈ ಹೈಕೋರ್ಟ್ ಸೋಮವಾರ ತೀರ್ಪು ನೀಡಲಿದೆ. ೨೦೦೫-೦೬ ರಲ್ಲಿ ಸೊಹ್ರಾಬುದ್ದೀನ್ ಶೇಖ್, ಪತ್ನಿ ಕೌಸರ್ ಬೀ ಹಾಗೂ ಸಹಚರ ತುಳಸೀರಾಂ ಪ್ರಜಾಪತಿಯನ್ನು ಗುಜರಾತ್ ಹಾಗೂ ರಾಜಸ್ಥಾನ ಪೊಲೀಸರು ನಕಲಿ ಎನ್‌ಕೌಂಟರ್ ಹತ್ಯೆ ನಕಲಿ ಎನ್ ಕೌಂಟರ್ ಮೂಲಕ ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಅಲಸ್ಟೇರ್ ಕುಕ್ ವಿದಾಯಕ್ಕೆ ಕ್ಷಣಗಣನೆ

ಇಂಗ್ಲೆಂಡ್‌ ಕ್ರಿಕೆಟ್ ಕಂಡ ಸಾರ್ವಕಾಲಿಕ ಗರಿಷ್ಠ ಸ್ಕೋರ್‌ಧಾರಿ ಅಲಸ್ಟೇರ್ ಕುಕ್ ವಿದಾಯಕ್ಕೆ ಕ್ಷಣಗಣನೆ ಶುರುವಾಗಿದೆ. ಲಂಡನ್‌ನ ಕೆನ್ನಿಂಗ್ಟನ್ ಓವಲ್‌ನಲ್ಲಿ ನಡೆಯುತ್ತಿರುವ ಭಾರತ ವಿರುದ್ಧದ ಐದನೇ ಹಾಗೂ ಕೊನೆಯ ಟೆಸ್ಟ್ ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್ ಮುಗಿಸಿದ ಕುಕ್, ಎರಡನೇ ಇನ್ನಿಂಗ್ಸ್‌ನಲ್ಲಿ ೪೬ ರನ್ ಗಳಿಸಿ ಔಟಾಗದೆ ಉಳಿದಿದ್ದಾರೆ. ಪಂದ್ಯದ ನಾಲ್ಕನೇ ದಿನವಾದ ಇಂದು ಆಟ ಮುಂದುವರೆಸಲಿರುವ ಅವರು ಶತಕದ ಮೇಲೆ ಕಣ್ಣಿಟ್ಟಿದ್ದಾರೆ. ಇತ್ತ, ೧೫೪ ರನ್ ಮುನ್ನಡೆಯಲ್ಲಿರುವ ಇಂಗ್ಲೆಂಡ್, ತನ್ನ ನೆಚ್ಚಿನ ನಾಯಕನಿಗೆ ಜಯದ ಬೀಳ್ಕೊಡುಗೆ ನೀಡಲು ಮುಂದಾಗಿದೆ. ೩ನೇ ದಿನಾಂತ್ಯಕ್ಕೆ ಜೋ ರೂಟ್ (೨೯) ಮತ್ತು ಕುಕ್ ಔಟಾಗದೆ ಉಳಿದಿದ್ದು, ಪಂದ್ಯ ಕುತೂಹಲದತ್ತ ಸಾಗಿದೆ.

ಗಣಿಗಾರಿಕೆ ಅನುಮತಿಗೆ ಲಂಚ; ಐಎಫ್‌ಎಸ್‌, ಐಎಎಸ್‌ ಅಧಿಕಾರಿಗೆ ಎಸಿಬಿ ಕ್ಲೀನ್‌ಚಿಟ್‌?
ಕಬ್ಬನ್‌ ಪಾರ್ಕ್‌ ಠಾಣೆಗೆ ಶ್ರುತಿ ದೂರು; ಅರ್ಜುನ್ ಸರ್ಜಾ‌ ವಿರುದ್ಧ ಎಫ್‌ಐಆರ್
ಶ್ರೀಲಂಕಾ ರಾಜಕೀಯ ಬಿಕ್ಕಟ್ಟು| ಪಕ್ಸೆ ಮತ್ತೆ ಪ್ರಧಾನಿ, ಭಾರತಕ್ಕೆ ಆಘಾತ
Editor’s Pick More