ಮಾರ್ನಿಂಗ್ ಡೈಜೆಸ್ಟ್ | ಇಂದು ಗಮನಿಸಬೇಕಾದ 4 ಪ್ರಮುಖ ಸುದ್ದಿಗಳು

ಇಂದು ಗಮನಿಸಬೇಕಾದ ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಪ್ರಮುಖ ಸುದ್ದಿಗಳು

ತೆಲಂಗಾಣ ವಿಧಾನಸಭಾ ಚುನಾವಣಾ ಅಭಿಯಾನಕ್ಕೆ ಅಮಿತ್ ಶಾ ಚಾಲನೆ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಮುಂಬರುವ ತೆಲಂಗಾಣ ವಿಧಾನಸಭಾ ಚುನಾವಣಾ ಸಿದ್ಧತೆಗೆ ಶನಿವಾರ ಅಧಿಕೃತ ಚಾಲನೆ ನೀಡಲಿದ್ದು, ಚುನಾವಣಾ ಅಭಿಯಾನವನ್ನು ಹೈದರಾಬಾದಿನ ಮೆಹಬೂಬ್‌ ನಗರದಿಂದ ಆರಂಭಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಒಂದು ಲಕ್ಷಕ್ಕೂ ಅಧಿಕ ಜನರು ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ. ಇದೇ ತಿಂಗಳ ಕೊನೆಯಲ್ಲಿ ಕರೀಂ ನಗರದಲ್ಲಿ ಸಾರ್ವಜನಿಕ ಸಭೆಯನ್ನು ಅಮಿತ್ ಶಾ ನಡೆಸಲಿದ್ದಾರೆ.

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಬೆಳಗಾವಿಗೆ

ಬೆಳಗಾವಿಯ ಕರ್ನಾಟಕ ಕಾನೂನು ಸಂಸ್ಥೆ ಹಾಗೂ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಶನಿವಾರ ರಾಷ್ಟ್ರಪತಿ ರಾಮನಾಥ್‌ ಕೋವಿಂದ ಭಾಗವಹಿಸಲಿದ್ದಾರೆ. ಇವರೊಂದಿಗೆ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ, ಅಟಾರ್ನಿ ಜನರಲ್‌ ಕೆ ಕೆ ವೇಣುಗೋಪಾಲ್‌, ನ್ಯಾಯಮೂರ್ತಿಗಳಾದ ಮೋಹನ ಶಾಂತನಗೌಡರ, ಎಸ್‌ ಅಬ್ದುಲ್‌ ನಜೀರ್‌, ವಿನೀತ್ ಸರಣ್, ರಾಜ್ಯಪಾಲ ವಜುಭಾಯಿ ವಾಲಾ, ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಉಪಸ್ಥಿತರಿರಲಿದ್ದಾರೆ.

ಸ್ಯಾಫ್ ಫುಟ್ಬಾಲ್ ಫೈನಲ್‌ನಲ್ಲಿ ಭಾರತಕ್ಕೆ ಮಾಲ್ಡೀವ್ಸ್ ಸವಾಲು

ಅಜೇಯವಾಗಿ ಫೈನಲ್‌ ತಲುಪಿರುವ ಭಾರತ ತಂಡ ಸ್ಯಾಫ್ ಕಪ್‌ ಫುಟ್‌ಬಾಲ್ ಪಂದ್ಯಾವಳಿಯಲ್ಲಿ ಇಂದು ಪ್ರಶಸ್ತಿಗಾಗಿ ಮಾಲ್ಡಿವ್ಸ್ ಸವಾಲನ್ನು ಎದುರಿಸಲಿದೆ. ಪಂದ್ಯ ಢಾಕಾದ ಬಂಗಬಂಧು ಕ್ರೀಡಾಂಗಣದಲ್ಲಿ ನಡೆಯಲಿದೆ. ಗುಂಪು ಹಂತದಲ್ಲಿ ಶ್ರೀಲಂಕಾ ಮತ್ತು ಮಾಲ್ಡಿವ್ಸ್‌ ತಂಡವನ್ನು ಕ್ರಮವಾಗಿ 2–0 ಗೋಲುಗಳಿಂದ ಮಣಿಸಿದ್ದ ಭಾರತ, ಸೆಮಿಫೈನಲ್‌ನಲ್ಲಿ 3–1ರಿಂದ ಪಾಕಿಸ್ತಾನವನ್ನು ಸೋಲಿಸಿ ಪ್ರಶಸ್ತಿ ಸುತ್ತಿನ ಹಣಾಹಣಿಗೆ ಸಜ್ಜಾಗಿದೆ. ಒಟ್ಟು 12 ಟೂರ್ನಿಗಳಲ್ಲಿ ಏಳು ಬಾರಿ ಪ್ರಶಸ್ತಿ ಗೆದ್ದಿರುವ ಭಾರತ ಇದೀಗ ಹ್ಯಾಟ್ರಿಕ್ ಗುರಿ ಹೊತ್ತಿದೆ. ಕಳೆದ ಮೂರು ಬಾರಿ ಸೆಮಿಫೈನಲ್‌ನಲ್ಲಿ ಸೋತಿದ್ದ ಮಾಲ್ಡಿವ್ಸ್‌ ಈ ಬಾರಿ ಪ್ರಶಸ್ತಿ ಗೆಲ್ಲಲು ಶತಾಯಗತಾಯ ಪ್ರಯತ್ನಿಸಲಿದೆ. ಆದರೆ 11 ಆವೃತ್ತಿಗಳಲ್ಲಿ ಫೈನಲ್‌ ಪ್ರವೇಶಿಸಿರುವ ಭಾರತ ಆತ್ಮವಿಶ್ವಾಸದಿಂದ ಕೂಡಿದೆ. ಪಂದ್ಯ ಸಂಜೆ ೬.೩೦ಕ್ಕೆ ಆರಂಭವಾಗಲಿದ್ದು, ‘ಡಿ ಸ್ಪೋರ್ಟ್’ನಲ್ಲಿ ನೇರಪ್ರಸಾರವಾಗಲಿದೆ.

ಇಂದಿನಿಂದ ಏಷ್ಯಾಕಪ್ ಕ್ರಿಕೆಟ್: ಬಾಂಗ್ಲಾದೇಶ-ಶ್ರೀಲಂಕಾ ಹಣಾಹಣಿ

ಪ್ರತಿಷ್ಠಿತ ಏಷ್ಯಾ ಕಪ್ ಕ್ರಿಕೆಟ್ ಪಂದ್ಯಾವಳಿಯು ಇಂದಿನಿಂದ ದುಬೈನಲ್ಲಿ ಆರಂಭವಾಗುತ್ತಿದ್ದು, ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ ಮತ್ತು ಶ್ರೀಲಂಕಾ ತಂಡಗಳು ಸೆಣಸುತ್ತಿವೆ. 'ಬಿ' ಗುಂಪಿನ ಮೊದಲ ಪಂದ್ಯಕ್ಕೆ ದುಬೈ ಇಂಟರ್‌ನ್ಯಾಷನಲ್‌ ಕ್ರಿಕೆಟ್‌ ಮೈದಾನ ಸಜ್ಜುಗೊಂಡಿದೆ. ಸಿಂಹಳೀಯರು 1986, 1997, 2004, 2008 ಮತ್ತು 2014ರಲ್ಲಿ ನಡೆದ ಟೂರ್ನಿಗಳಲ್ಲಿ ಚಾಂಪಿಯನ್‌ ಪಟ್ಟ ಅಲಂಕರಿಸಿದ್ದರೆ, ಬಾಂಗ್ಲಾ ತಂಡ 2012 ಮತ್ತು 2016ರಲ್ಲಿ ಫೈನಲ್‌ನಲ್ಲಿ ಎಡವಿತ್ತು. ಇನ್ನು, ಈ ವರ್ಷದ ಜನವರಿಯಲ್ಲಿ ನಡೆದಿದ್ದ ತ್ರಿಕೋನ ಏಕದಿನ ಕ್ರಿಕೆಟ್‌ ಸರಣಿಯ ಫೈನಲ್‌ನಲ್ಲಿ ಲಂಕಾ ತಂಡ ಬಾಂಗ್ಲಾದೇಶವನ್ನು ಮಣಿಸಿ ‍ಪ್ರಶಸ್ತಿ ಜಯಿಸಿದರೆ, ಫೆಬ್ರವರಿಯಲ್ಲಿ ನಡೆದಿದ್ದ ಟೆಸ್ಟ್‌ ಮತ್ತು ಟ್ವೆಂಟಿ–20 ಕ್ರಿಕೆಟ್‌ ಸರಣಿಗಳಲ್ಲೂ ಲಂಕಾ ಪ್ರಾಬಲ್ಯ ಮೆರೆದಿತ್ತು. ಆದರೆ, ನಿದಾಸ್‌ ಟ್ರೋಫಿಯಲ್ಲಿ ಬಾಂಗ್ಲಾ ತಿರುಗೇಟು ನೀಡಿತ್ತು. ಪಂದ್ಯ ಸಂಜೆ ೫ ಗಂಟೆಗೆ ಆರಂಭವಾಗಲಿದ್ದು, ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್‌ನಲ್ಲಿ ನೇರಪ್ರಸಾರವಾಗಲಿದೆ.

ಗಣಿಗಾರಿಕೆ ಅನುಮತಿಗೆ ಲಂಚ; ಐಎಫ್‌ಎಸ್‌, ಐಎಎಸ್‌ ಅಧಿಕಾರಿಗೆ ಎಸಿಬಿ ಕ್ಲೀನ್‌ಚಿಟ್‌?
ಕಬ್ಬನ್‌ ಪಾರ್ಕ್‌ ಠಾಣೆಗೆ ಶ್ರುತಿ ದೂರು; ಅರ್ಜುನ್ ಸರ್ಜಾ‌ ವಿರುದ್ಧ ಎಫ್‌ಐಆರ್
ಶ್ರೀಲಂಕಾ ರಾಜಕೀಯ ಬಿಕ್ಕಟ್ಟು| ಪಕ್ಸೆ ಮತ್ತೆ ಪ್ರಧಾನಿ, ಭಾರತಕ್ಕೆ ಆಘಾತ
Editor’s Pick More