ಮಾರ್ನಿಂಗ್ ಡೈಜೆಸ್ಟ್ | ಇಂದು ಗಮನಿಸಬೇಕಾದ 3 ಪ್ರಮುಖ ಸುದ್ದಿಗಳು

ಇಂದು ಗಮನಿಸಬೇಕಾದ ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಪ್ರಮುಖ ಸುದ್ದಿಗಳು

ರಸ್ತೆ ಗುಂಡಿ ಮುಚ್ಚಲು ಬಿಬಿಎಂಪಿಗೆ ಹೈಕೋರ್ಟ್ ನೀಡಿದ ಗಡುವು ಇಂದಿಗೆ ಅಂತ್ಯ

ಬೆಂಗಳೂರಿನ ರಸ್ತೆಗಳಲ್ಲಿರುವ ಗುಂಡಿಗಳನ್ನು ಮಚ್ಚಲು ಬಿಬಿಎಂಪಿಗೆ ಹೈಕೋರ್ಟ್ ಇಂದು ಸಂಜೆಯವರೆಗೆ ಗಡುವು ನೀಡಿದೆ. ರಸ್ತೆ ಗುಂಡಿ ವಿಚಾರಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಾಮೂರ್ತಿ ದಿನೇಶ್ ಮಾಹೇಶ್ವರಿ ನೇತೃತ್ವದ ವಿಭಾಗೀಯ ಪೀಠ, ರಸ್ತೆ ಗುಂಡಿ ವಿಚಾರವಾಗಿ ಬಿಬಿಎಂಪಿಯನ್ನು ತೀವ್ರತರಾಟೆಗೆ ತೆಗೆದುಕೊಂಡಿದ್ದಲ್ಲದೆ. ಗುರುವಾರ ಸಂಜೆಯೊಳಗೆ ಎಲ್ಲ ಗುಂಡಿಗಳನ್ನು ಮುಚ್ಚುವಂತೆ ಎಚ್ಚರಿಕೆ ನೀಡಿದೆ

ವಿಜಯ್ ಹಜಾರೆ ಟ್ರೋಫಿ: ಕರ್ನಾಟಕಕ್ಕೆ ಮಹಾರಾಷ್ಟ್ರ ಸವಾಲು

ಹಾಲಿ ಚಾಂಪಿಯನ್ ಕರ್ನಾಟಕ ತಂಡ ಇಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಎಲೈಟ್ 'ಎ' ಗುಂಪಿನ ಪಂದ್ಯದಲ್ಲಿ ಮಹಾರಾಷ್ಟ್ರದ ವಿರುದ್ಧ  ಆಡಲಿದೆ. ವಿಜಯ್ ಹಜಾರೆ ಏಕದಿನ ಕ್ರಿಕೆಟ್ ಟೂರ್ನಿಯಲ್ಲಿ ಮೂರು ಸಲ ಟ್ರೋಫಿ ಗೆದ್ದು ದಾಖಲೆ ಬರೆದಿರುವ ಕರ್ನಾಟಕ, ಈ ಬಾರಿಯೂ ಪ್ರಶಸ್ತಿ ಮೇಲೆ ಕಣ್ಣಿಟ್ಟಿದ್ದು,ಶುಭಾರಂಭದ ನಿರೀಕ್ಷೆಯಲ್ಲಿದೆ.ಅಂದಹಾಗೆ, ಮಾಜಿ ಆಟಗಾರರಾದ ಮುಖ್ಯ ಕೋಚ್ ಯರೇಗೌಡ ಮತ್ತು ಬೌಲಿಂಗ್ ಕೋಚ್ ಶ್ರೀನಾಥ್ ಅರವಿಂದ್ ಅವರಿಗೆ ತರಬೇತುದಾರರಾಗಿ ಮೊದಲ ಪರೀಕ್ಷೆ ಎದುರಾಗಿದ್ದು, ವಿನಯ್ ಕುಮಾರ್ ನಾಯಕತ್ವದ ಕರ್ನಾಟಕ ಗೆಲುವಿನ ನಿರೀಕ್ಷೆಯಲ್ಲಿದೆ.

ಚೀನಾ ಓಪನ್ ಬ್ಯಾಡ್ಮಿಂಟನ್: ಸಿಂಧು, ಶ್ರೀಕಾಂತ್ ಕಣಕ್ಕೆ

ಪ್ರತಿಷ್ಠಿತ ಚೀನಾ ಓಪನ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ವನಿತೆಯರ ಮತ್ತು ಪುರುಷರ ಸಿಂಗಲ್ಸ್ ವಿಭಾಗದ ಪ್ರೀಕ್ವಾರ್ಟರ್‌ಫೈನಲ್ ಇಂದು ನಡೆಯಲಿದ್ದು, ಪಿ ವಿ ಸಿಂಧು ಮತ್ತು ಕಿಡಾಂಬಿ ಶ್ರೀಕಾಂತ್ ಕಣಕ್ಕಿಳಿಯಲಿದ್ದಾರೆ. ವಿಶ್ವ ಚಾಂಪಿಯನ್‌ಶಿಪ್ ಮತ್ತು ಏಷ್ಯಾಡ್‌ನಲ್ಲಿ ಬೆಳ್ಳಿ ಪದಕ ಜಯಿಸಿದ ಸಿಂಧು, ಥಾಯ್ಲೆಂಡ್ ಆಟಗಾರ್ತಿ ಬುಸಾನನ್ ಒಂಗ್‌ಬಮ್ರುನ್‌ಫಾನ್ ವಿರುದ್ಧ ಕಾದಾಡಲಿದ್ದಾರೆ. ಅಂತೆಯೇ, ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಕಿಡಾಂಬಿ ಶ್ರೀಕಾಂತ್ ಥಾಯ್ಲೆಂಡ್ ಆಟಗಾರ ಸುಪುನ್ಯು ಅವಿಹಿನ್‌ಸನೋನ್ ವಿರುದ್ಧ ಸೆಣಸಲಿದ್ದಾರೆ. ಶ್ರೀಕಾಂತ್ ಪಂದ್ಯ ಮಧ್ಯಾಹ್ನ ೩.೩೦ಕ್ಕೆ ಶುರುವಾಗಲಿದ್ದರೆ, ಸಿಂಧು ಬೆಳಿಗ್ಗೆ ೧೧.೦೦ ಗಂಟೆ ಸುಮಾರಿಗೆ ಕಣಕ್ಕಿಳಿಯುವ ಸಂಭವವಿದೆ.

ಗಣಿಗಾರಿಕೆ ಅನುಮತಿಗೆ ಲಂಚ; ಐಎಫ್‌ಎಸ್‌, ಐಎಎಸ್‌ ಅಧಿಕಾರಿಗೆ ಎಸಿಬಿ ಕ್ಲೀನ್‌ಚಿಟ್‌?
ಕಬ್ಬನ್‌ ಪಾರ್ಕ್‌ ಠಾಣೆಗೆ ಶ್ರುತಿ ದೂರು; ಅರ್ಜುನ್ ಸರ್ಜಾ‌ ವಿರುದ್ಧ ಎಫ್‌ಐಆರ್
ಶ್ರೀಲಂಕಾ ರಾಜಕೀಯ ಬಿಕ್ಕಟ್ಟು| ಪಕ್ಸೆ ಮತ್ತೆ ಪ್ರಧಾನಿ, ಭಾರತಕ್ಕೆ ಆಘಾತ
Editor’s Pick More