ಮಾರ್ನಿಂಗ್ ಡೈಜೆಸ್ಟ್ | ಇಂದು ಗಮನಿಸಬೇಕಾದ 3 ಪ್ರಮುಖ ಸುದ್ದಿಗಳು

ಇಂದು ಗಮನಿಸಬೇಕಾದ ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಪ್ರಮುಖ ಸುದ್ದಿಗಳು

ಪ್ರಧಾನಿ ನರೇಂದ್ರ ಮೋದಿ ಒಡಿಶಾ, ಚತ್ತೀಸ್‌ಗಢ ಭೇಟಿ

ಒಡಿಶಾ ಮತ್ತು ಚತ್ತೀಸ್‌ಗಢಕ್ಕೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ, ಜಾರ್ಸಗುಡಾ ವಿಮಾನ ನಿಲ್ದಾಣವನ್ನು ಲೋಕಾರ್ಪಣೆ ಮಾಡಲಿದ್ದಾರೆ. ಅಲ್ಲದೆ, ಗರ್ಜನ್ಬಾಹಲ್ ಕಲ್ಲಿದ್ದಲು ಗಣಿಯನ್ನು ಉದ್ಘಾಟಿಸಲಿದ್ದಾರೆ. ಇದೇ ವೇಳೆ, ತಲ್ಚರ್ ರಸಗೊಬ್ಬರ ಸ್ಥಾವರದ ಪುನಶ್ಚೇತನಕ್ಕೆ ಸಂಬಂಧಿಸಿದ ಕೆಲಸಕ್ಕೂ ಚಾಲನೆ ನೀಡಲಿದ್ದಾರೆ. ಇದು ಕಲ್ಲಿದ್ದಲು ಅನಿಲೀಕರಣ ಆಧಾರಿತ ರಸಗೊಬ್ಬರ ಘಟಕವನ್ನು ಹೊಂದಿರುವ ಭಾರತದಲ್ಲಿ ಮೊದಲ ಸ್ಥಾವರವಾಗಿದೆ.

ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಒಕ್ಕೂಟ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ. “ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಚುನಾವಣೆ ಪೂರ್ವದಲ್ಲಿ ನಿವೃತ್ತ ಕಾರ್ಯಕರ್ತೆಯರಿಗೆ 6 ಸಾವಿರ ಪಿಂಚಣಿಯ ಭರವಸೆ ನೀಡಿದ್ದರು. ಆದರೆ, ಇದೀಗ ಅದನ್ನು ಮರೆತಿದ್ದಾರೆ,” ಎಂದು ದೂರಿರುವ ಸಂಘಟನೆಯ ರಾಜ್ಯಾಧ್ಯಕ್ಷ ಎಚ್ ಕೆ ರಾಮಚಂದ್ರಪ್ಪ, ಅಂಗನವಾಡಿ ಕಾರ್ಯಕರ್ತೆಯರಿಗೆ ಕನಿಷ್ಠ 18 ಸಾವಿರ ರುಪಾಯಿ ವೇತನ ನೀಡದೆ ಕೇಂದ್ರ ಸರ್ಕಾರ ಕೂಡ ಅನ್ಯಾಯ ಮಾಡಿದೆ. ಹೀಗಾಗಿ ಪ್ರತಿಭಟನೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.

ಫೈನಲ್‌ನತ್ತ ನವೊಮಿ ಒಸಾಕ ಚಿತ್ತ

ಜಪಾನ್ ಆಟಗಾರ್ತಿ ನವೊಮಿ ಒಸಾಕ ಪ್ಯಾನ್ ಪೆಸಿಫಿಕ್ ಓಪನ್ ಟೆನಿಸ್ ಪಂದ್ಯಾವಳಿಯ ಸೆಮಿಫೈನಲ್‌ನಲ್ಲಿ ಇಂದು ಸೆಣಸುತ್ತಿದ್ದು, ಫೈನಲ್ ತಲುಪುವ ವಿಶ್ವಾಸದಲ್ಲಿದ್ದಾರೆ. ೨೩ ಗ್ರಾಂಡ್‌ಸ್ಲಾಮ್ ವಿಜೇತೆ ಸೆರೆನಾ ವಿಲಿಯಮ್ಸ್ ವಿರುದ್ಧ ಇತ್ತೀಚಿನ ಯುಎಸ್ ಓಪನ್ ಫೈನಲ್‌ನಲ್ಲಿ ಅದ್ಭುತ ಆಟವಾಡಿ ಜಯಭೇರಿ ಬಾರಿಸಿದ ಒಸಾಕ, ಇಂದು ಭಾರತೀಯ ಕಾಲಮಾನ ಸುಮಾರು ಬೆಳಗ್ಗೆ ೯.೩೦ಕ್ಕೆ ಶುರುವಾಗಲಿರುವ ಪಂದ್ಯದಲ್ಲಿ ಇಟಲಿ ಆಟಗಾರ್ತಿ ಕೆಮಿಲಾ ಜಿಯೋರ್ಗಿ ವಿರುದ್ಧ ಸೆಣಸಲಿದ್ದಾರೆ. ಅಂತೆಯೇ ವನಿತೆಯರ ಸಿಂಗಲ್ಸ್ ವಿಭಾಗದ ಇನ್ನೊಂದು ಪಂದ್ಯದಲ್ಲಿ ಜೆಕ್ ಆಟಗಾರ್ತಿ ಕರೊಲಿನಾ ಪ್ಲಿಸ್ಕೋವಾ ಕ್ರೊವೇಷ್ಯಾ ಆಟಗಾರ್ತಿ ಡೊನ್ನಾ ವೆಕಿಕ್ ವಿರುದ್ಧ ಕಾದಾಡಲಿದ್ದಾರೆ.

ಗಣಿಗಾರಿಕೆ ಅನುಮತಿಗೆ ಲಂಚ; ಐಎಫ್‌ಎಸ್‌, ಐಎಎಸ್‌ ಅಧಿಕಾರಿಗೆ ಎಸಿಬಿ ಕ್ಲೀನ್‌ಚಿಟ್‌?
ಕಬ್ಬನ್‌ ಪಾರ್ಕ್‌ ಠಾಣೆಗೆ ಶ್ರುತಿ ದೂರು; ಅರ್ಜುನ್ ಸರ್ಜಾ‌ ವಿರುದ್ಧ ಎಫ್‌ಐಆರ್
ಶ್ರೀಲಂಕಾ ರಾಜಕೀಯ ಬಿಕ್ಕಟ್ಟು| ಪಕ್ಸೆ ಮತ್ತೆ ಪ್ರಧಾನಿ, ಭಾರತಕ್ಕೆ ಆಘಾತ
Editor’s Pick More