ಚಂಡಮಾರುತ; ಕೇರಳ, ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ ಭಾರಿ ಮಳೆಯ ಎಚ್ಚರಿಕೆ

ಕೇರಳ, ಕೊಡಗು ಭೀಕರ ಮಳೆ ಮತ್ತು ಪ್ರವಾಹದಿಂದ ಚೇತರಿಸಿಕೊಳ್ಳಲು ಯತ್ನಿಸುತ್ತಿವೆ. ಈ ಬೆನ್ನಲ್ಲೇ, ಹವಾಮಾನ ಇಲಾಖೆಯು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಸೆಪ್ಟೆಂಬರ್‌ ೨೬ರಿಂದ ೨೯ರವರೆಗೆ ಭಾರಿ ಮಳೆ ಬೀಳುವ ಸಾಧ್ಯತೆ ಇದ್ದು, ಮುನ್ನೆಚ್ಚರಿಕೆ ತೆಗೆದುಕೊಳ್ಳುವಂತೆ ಸೂಚಿಸಿದೆ

ಬಂಗಾಳ ಕೊಲ್ಲಿಯ ಈಶಾನ್ಯ ಭಾಗ ಹಾಗೂ ಅರಬ್ಬೀ ಸಮುದ್ರದ ಮಹಾರಾಷ್ಟ್ರ-ಗೋವಾ ಕರಾವಳಿಯಲ್ಲಿ ಚಂಡಮಾರುತ ಬೀಸುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡುಗಳಲ್ಲಿ ಭಾರಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ತೀವ್ರ ಮಳೆ ಮತ್ತು ಪ್ರವಾಹದಿಂದ ಈಗ ಚೇತರಿಸಿಕೊಳ್ಳುತ್ತಿರುವ ಕೇರಳದಲ್ಲೂ ಮತ್ತೆ ಭಾರಿ ಮಳೆಯಾಗುವ ಸಾಧ್ಯತೆಯನ್ನು ಇಲಾಖೆ ತಿಳಿಸಿದೆ.

ದಕ್ಷಿಣ ಭಾರತದಲ್ಲಿ ಅಷ್ಟೇ ಅಲ್ಲದೆ, ಜಮ್ಮು-ಕಾಶ್ಮೀರ, ಪಂಜಾಬ್, ಹರ್ಯಾಣ, ಈಶಾನ್ಯ ರಾಜ್ಯಗಳಲ್ಲಿ ಪ್ರಮುಖವಾಗಿ ಅಸ್ಸಾಂನಲ್ಲಿ ಭಾರಿ ಮಳೆಯಾಗಲಿದೆ. ಹಿಮಾಚಲ ಪ್ರದೇಶದಲ್ಲಿ ಈಗಾಗಲೇ ಮೂರು ದಿನಗಳಿಂದ ಭಾರಿ ಮಳೆ ಸುರಿಯುತ್ತಿದ್ದು, ಪ್ರವಾಹ ಸೃಷ್ಟಿಯಾಗಿದೆ. ಮಳೆಯೊಂದಿಗೆ ಹಿಮಪಾತವೂ ಆಗುತ್ತಿದ್ದು, ಇದುವರೆಗೆ ೮ ಮಂದಿ ಸಾವನ್ನಪ್ಪಿದ್ದಾರೆ.

ಸೆಪ್ಟೆಂಬರ್‌ ೨೫ರಿಂದ ೨೮ರವರೆಗೆ ಮಳೆಯ ಎಚ್ಚರಿಕೆ ನೀಡಲಾಗಿದ್ದು; ಸೆ.೨೫ರಂದು ಕರ್ನಾಟಕದ ಕೆಲ ಭಾಗ, ಹಿಮಾಚಲಯ ಪ್ರದೇಶ, ಪಶ್ಚಿಮ ಬಂಗಾಳ, ಸಿಕ್ಕಿಂ, ಅಸ್ಸಾಂ, ಮೇಘಾಲಯ, ರಾಯಲ್‌ಸೀಮಾ, ತೆಲಂಗಾಣಗಳಲ್ಲಿ ಭಾರಿ ಮಳೆಯಾಗಲಿದೆ ಎನ್ನಲಾಗಿದೆ.

ಸೆ.೨೬ರಂದು ಅರುಣಾಚಲ ಪ್ರದೇಶ, ತಮಿಳುನಾಡು, ಮೇಘಾಲಯ, ಕೇರಳದಲ್ಲಿ; ಸೆ.೨೭ರಂದು ತಮಿಳುನಾಡು ಭಾರಿ ಪ್ರಮಾಣದ ಮಳೆಯನ್ನು ಕಾಣಲಿದ್ದು; ಗೋವಾ, ಮಹಾರಾಷ್ಟ್ರ, ಉತ್ತರ ಕರ್ನಾಟಕ, ಅಸ್ಸಾಂ, ಮೇಘಾಲಯಗಳಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯ ವರದಿ ಹೇಳಿದೆ.

ಸೆ.೨೮ರಂದು ಮಳೆ ಬಹುತೇಕ ಎಲ್ಲ ಭಾಗಗಳಲ್ಲಿ ಮಳೆ ಮುಂದುವರಿಯಲಿದ್ದು, ಕೇರಳ, ದಕ್ಷಿಣ ಕರ್ನಾಟಕ, ತಮಿಳುನಾಡಿನಲ್ಲಿ ಹೆಚ್ಚು ಮಳೆ ಸುರಿಯಲಿದೆ ಎನ್ನಲಾಗಿದೆ.

ಇದನ್ನೂ ಓದಿ : ಸ್ಟೇಟ್‌ಮೆಂಟ್‌ | ಕೇರಳ, ಕೊಡಗು, ಪ್ರವಾಹ, ಪ್ಯಾರಿಸ್‌

ಗೃಹ ಖಾತೆಯ ವರದಿಯ ಪ್ರಕಾರ, ಈ ವರ್ಷದ ಮುಂಗಾರಿನಲ್ಲಿ ೧,೪೦೦ ಮಂದಿ ಜೀವ ಕಳೆದುಕೊಂಡಿದ್ದಾರೆ. ಮಳೆಯಿಂದಾಗುವ ಅಪಾಯ, ಅನಾಹುತಗಳಿಗೆ ಸಂಬಂಧಿಸಿದಂತೆ ಯಾವುದೇ ಮುನ್ನೆಚ್ಚರಿಕೆ ವಹಿಸದೆ ಇದ್ದುದೇ ಇದಕ್ಕೆ ಕಾರಣ. ಈಗ ಮಳೆ ಇನ್ನೂ ಕೆಲವು ದಿನಗಳ ಕಾಲ ಮುಂದುವರಿಯಲಿದ್ದು, ಇನ್ನಷ್ಟು ಜೀವ ಹಾನಿ ಮತ್ತು ಆಸ್ತಿ ಹಾನಿಗೆ ಕಾರಣವಾಗಲಿದೆ ಎಂಬ ಆತಂಕವಿದೆ.

ಕಳೆದ ನೂರು ವರ್ಷಗಳ ಅವಧಿಯಲ್ಲಿ ಕಾಣದ ಮಳೆಯನ್ನು ಕೆಲವು ರಾಜ್ಯಗಳು ಕಂಡಿವೆ. ಕಳೆದು ಒಂದು ತಿಂಗಳ ಅವಧಿಯಲ್ಲಿ ಕೇರಳ ರಾಜ್ಯ ಸೇರಿದಂತೆ ದಕ್ಷಿಣ ಭಾರತ ಕಂಡಿರುವ ಮಳೆಯ ಪ್ರಮಾಣ ಕಳೆದೊಂದು ಶತಮಾನದಲ್ಲಿ ಕಾಣದೇ ಇದ್ದಂಥದ್ದು ಎಂದು ತಜ್ಞರು ಹೇಳಿದ್ದಾರೆ. ಈಗ ಮತ್ತೆ ಹವಾಮಾನ ಇಲಾಖೆ ಎಚ್ಚರಿಸಿರುವುದು ಆತಂಕ ಹೆಚ್ಚಿಸಿದೆ.

ಗಣಿಗಾರಿಕೆ ಅನುಮತಿಗೆ ಲಂಚ; ಐಎಫ್‌ಎಸ್‌, ಐಎಎಸ್‌ ಅಧಿಕಾರಿಗೆ ಎಸಿಬಿ ಕ್ಲೀನ್‌ಚಿಟ್‌?
ಕಬ್ಬನ್‌ ಪಾರ್ಕ್‌ ಠಾಣೆಗೆ ಶ್ರುತಿ ದೂರು; ಅರ್ಜುನ್ ಸರ್ಜಾ‌ ವಿರುದ್ಧ ಎಫ್‌ಐಆರ್
ಶ್ರೀಲಂಕಾ ರಾಜಕೀಯ ಬಿಕ್ಕಟ್ಟು| ಪಕ್ಸೆ ಮತ್ತೆ ಪ್ರಧಾನಿ, ಭಾರತಕ್ಕೆ ಆಘಾತ
Editor’s Pick More