ಮಾರ್ನಿಂಗ್ ಡೈಜೆಸ್ಟ್ | ಇಂದು ನೀವು ಗಮನಿಸಬೇಕಾದ ೪ ಪ್ರಮುಖ ಸುದ್ದಿಗಳು

ಇಂದು ನೀವು ಗಮನಿಸಬೇಕಾದ ಪ್ರಮುಖ ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಸುದ್ದಿಗಳು  

ಆಧಾರ್ ಕಡ್ಡಾಯ, ಇಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ವಿಶಿಷ್ಟ ಗುರುತಿನ ಸಂಖ್ಯೆ ಯೋಜನೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆ ಪೂರೈಸಿರುವ ಸುಪ್ರೀಂಕೋರ್ಟ್ ಸಾಂವಿಧಾನಿಕ ಪೀಠ ಇಂದು ತೀರ್ಪು ಪ್ರಕಟಿಸಲಿದೆ. ಆಧಾರ್‌ ಯೋಜನೆ ಮತ್ತು ಅದಕ್ಕೆ ಸಂಬಂಧಿಸಿದ ಕಾನೂನುಗಳ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ 27 ಅರ್ಜಿಗಳು ಸಲ್ಲಿಕೆಯಾಗಿದ್ದವು. 8 ದಿನಗಳ ಕಾಲ ಎಲ್ಲಾ ಅರ್ಜಿಗಳ ವಿಚಾರಣೆ ನಡೆಸಿರುವ ಮುಖ್ಯನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ  ಐವರು ನ್ಯಾಯಮೂರ್ತಿಗಳ ಸಂವಿಧಾನಿಕ ಪೀಠ ಇಂದು ಮಹತ್ವದ ತೀರ್ಪು ಪ್ರಕಟಿಸಲಿದೆ.

ಕೋರ್ಟ್ ಕಲಾಪ ನೇರ ಪ್ರಸಾರ; ಸುಪ್ರೀಂನಿಂದ ತೀರ್ಪು?

ನ್ಯಾಯಾಂಗದಲ್ಲಿ ಪಾರದರ್ಶಕತೆ ಹೆಚ್ಚಿಸುವ ನಿಟ್ಟಿನಲ್ಲಿ ನ್ಯಾಯಾಲಯ ಕಲಾಪಗಳ ನೇರ ಪ್ರಸಾರಕ್ಕೆ ಅನುಮತಿ ನೀಡುವ ಕುರಿತು ಬುಧವಾರ ಸುಪ್ರೀಂಕೋರ್ಟ್‌ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ. ಎಸ್ಸಿ/ಎಸ್ಟಿ ಬಡ್ತಿ ಮೀಸಲು ಕುರಿತು ಇಂದು ತೀರ್ಪು ಪ್ರಕಟವಾಗಲಿದೆ.

ಕೊರಿಯಾ ಓಪನ್ ಬ್ಯಾಡ್ಮಿಂಟನ್‌; ಸೈನಾ ನೆಹ್ವಾಲ್ ಇಂದು ಕಣಕ್ಕೆ

ಕೊರಿಯಾ ಓಪನ್ ಬ್ಯಾಡ್ಮಿಂಟನ್‌ನ ಪ್ರಧಾನ ಹಂತದ ಪಂದ್ಯಾವಳಿ ಇಂದಿನಿಂದ ಶುರುವಾಗುತ್ತಿದ್ದು, ಭಾರತದ ಸ್ಟಾರ್ ಆಟಗಾರ್ತಿ ಸೈನಾ ನೆಹ್ವಾಲ್ ಕಣಕ್ಕಿಳಿಯಲಿದ್ದಾರೆ. ಕೊರಿಯಾ ಆಟಗಾರ್ತಿ ಕಿಮ್ ಹ್ಯೊ ಮಿನ್ ವಿರುದ್ಧ ನಡೆಯಲಿರುವ ಮೊದಲ ಸುತ್ತಿನ ಪಂದ್ಯದಲ್ಲಿ ಸೈನಾ ಗೆಲುವು ಸಾಧಿಸುವ ವಿಶ್ವಾಸದಲ್ಲಿದ್ದಾರೆ. ಪಂದ್ಯ ಬೆಳಿಗ್ಗೆ ೧೦.೦೦ ಗಂಟೆಗೆ ಶುರುವಾಗುವ ಸಾಧ್ಯತೆ ಇದೆ. ಇನ್ನು, ವನಿತೆಯರ ಸಿಂಗಲ್ಸ್ ವಿಭಾಗದ ಮತ್ತೊಂದು ಮೊದಲ ಸುತ್ತಿನ ಪಂದ್ಯದಲ್ಲಿ ಅಮೆರಿಕದ ಬೀವೆನ್ ಝಾಂಗ್ ವಿರುದ್ಧ ವೈಷ್ಣವಿ ರೆಡ್ಡಿ ಕಾದಾಡಲಿದ್ದು, ಮಧ್ಯಾಹ್ನ ೧.೨೦ರ ಸುಮಾರಿಗೆ ಪಂದ್ಯ ಆರಂಭವಾಗಲಿದೆ. ಅಂತೆಯೇ, ಪುರುಷರ ಸಿಂಗಲ್ಸ್ ವಿಭಾಗದ ಮೊದಲ ಸುತ್ತಿನಲ್ಲಿ ಡೆನ್ಮಾರ್ಕ್ ಆಟಗಾರ ಆಂಡ್ರೆಸ್ ಆಂಟೋನ್ಸೆನ್ ವಿರುದ್ಧ ಸಮೀರ್ ವರ್ಮಾ ಮಧ್ಯಾಹ್ನ ೨.೦೦ ಗಂಟೆಯ ಹೊತ್ತಿಗೆ ಕಾದಾಡಲಿದ್ದಾರೆ.

ಮಾಡು ಇಲ್ಲವೇ ಮಡಿ ಹೋರಾಟಕ್ಕೆ ಬಾಂಗ್ಲಾ-ಪಾಕಿಸ್ತಾನ ಅಣಿ

ಪ್ರತಿಷ್ಠಿತ ಏಷ್ಯಾ ಕಪ್ ಪಂದ್ಯಾವಳಿಯ ಸೂಪರ್ ಫೋರ್ ಹಂತದ ಕೊನೇ ಪಂದ್ಯದಲ್ಲಿ ಇಂದು ಪಾಕಿಸ್ತಾನ ಹಾಗೂ ಬಾಂಗ್ಲಾದೇಶ ಮುಖಾಮುಖಿಯಾಗುತ್ತಿವೆ. ಈ ಹಿಂದಿನ ಪಂದ್ಯಗಳಲ್ಲಿ ಪಾಕಿಸ್ತಾನ ಮತ್ತು ಬಾಂಗ್ಲಾದೇಶ, ಆಫ್ಘಾನಿಸ್ತಾನ ವಿರುದ್ಧ ಕೊನೇ ಓವರ್‌ನಲ್ಲಿ ಗೆಲುವು ಸಾಧಿಸಿ ಟೂರ್ನಿಯಲ್ಲಿ ತನ್ನಾಸೆಯನ್ನು ಜೀವಂತವಾಗಿಟ್ಟಿವೆ. ಇಂದು ನಡೆಯಲಿರುವ ಪಂದ್ಯವು ಒಂದು ಬಗೆಯಲ್ಲಿ ಇತ್ತಂಡಗಳಿಗೂ ಸೆಮಿಫೈನಲ್ ಅಂತಿದ್ದು, ಗೆದ್ದ ತಂಡವು ಭಾರತದ ವಿರುದ್ಧ ನಡೆಯಲಿರುವ ಫೈನಲ್‌ನಲ್ಲಿ ಸೆಣಸಲಿದೆ. ಅಸ್ಥಿರ ಆಟವಾಡುತ್ತಾ ತಿಣುಕುತ್ತಿರುವ ಪಾಕಿಸ್ತಾನ, ಬಾಂಗ್ಲಾದೇಶದ ಸವಾಲನ್ನು ಗಂಭೀರವಾಗಿ ಪರಿಗಣಿಸದ ಹೊರತು, ಅದರ ಫೈನಲ್ ಬಯಕೆ ಕೈಗೂಡದು. ಇನ್ನು, ಬಾಂಗ್ಲಾದೇಶ ಕೂಡ ಫೈನಲ್ ಗುರಿ ಹೊತ್ತಿದ್ದು, ಪಾಕ್ ವಿರುದ್ಧ ಗೆಲುವು ಸಾಧಿಸುವ ಛಲ ತೊಟ್ಟಿದೆ.

ಪಂದ್ಯ ಆರಂಭ: ಸಂಜೆ ೫.೦೦ | ನೇರಪ್ರಸಾರ: ಸ್ಟಾರ್ ನೆಟ್ವರ್ಕ್

ಗಣಿಗಾರಿಕೆ ಅನುಮತಿಗೆ ಲಂಚ; ಐಎಫ್‌ಎಸ್‌, ಐಎಎಸ್‌ ಅಧಿಕಾರಿಗೆ ಎಸಿಬಿ ಕ್ಲೀನ್‌ಚಿಟ್‌?
ಕಬ್ಬನ್‌ ಪಾರ್ಕ್‌ ಠಾಣೆಗೆ ಶ್ರುತಿ ದೂರು; ಅರ್ಜುನ್ ಸರ್ಜಾ‌ ವಿರುದ್ಧ ಎಫ್‌ಐಆರ್
ಶ್ರೀಲಂಕಾ ರಾಜಕೀಯ ಬಿಕ್ಕಟ್ಟು| ಪಕ್ಸೆ ಮತ್ತೆ ಪ್ರಧಾನಿ, ಭಾರತಕ್ಕೆ ಆಘಾತ
Editor’s Pick More