ಮಾರ್ನಿಂಗ್ ಡೈಜೆಸ್ಟ್ | ಇಂದು ನೀವು ಗಮನಿಸಬೇಕಾದ ಪ್ರಮುಖ ಸುದ್ದಿಗಳು

ಇಂದು ನೀವು ಗಮನಿಸಬೇಕಾದ ಪ್ರಮುಖ ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಸುದ್ದಿಗಳು  

ರಾಜ್ಯ ಸಂಪುಟ ಸಭೆ ಇಂದು

ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ಗುರುವಾರ ನಡೆಯಲಿದೆ. ಸರ್ಕಾರಿ ಉದ್ಯೋಗಿಗಳಿಗೆ ವಾರದಲ್ಲಿ ಐದು ದಿನ ರಜೆ, ಬರ ಕಾಮಗಾರಿ, ಸಾಲಮನ್ನಾ ಗೊಂದಲ ಸೇರಿದಂತೆ ಹಲವು ಪ್ರಮುಖ ವಿಚಾರಗಳ ಬಗ್ಗೆ ಗಂಭೀರ ಚರ್ಚೆ ನಡೆಯುವ ಸಾಧ್ಯತೆ ಇದೆ.

ಇಂದು ಭಾರತಕ್ಕೆ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್

ಎರಡು ದಿನಗಳ ಭಾರತ ಪ್ರವಾಸ ಕೈಗೊಂಡಿರುವ ರಷ್ಯಾ ಅಧ್ಯಕ್ಷ ವಾಡ್ಲಿಮಿರ್ ಪುಟಿನ್ ಗುರುವಾರ ದೆಹಲಿಗೆ ಆಗಮಿಸಲಿದ್ದಾರೆ. ಪ್ರಧಾನಿ ಮೋದಿಯವರ ಜತೆ ರಕ್ಷಣಾ ವ್ಯವಹಾರಗಳ ಕುರಿತು ಮಾತುಕತೆ ನಡೆಸಲಿದ್ದು ಸುಮಾರು ರು.೩೬ ಸಾವಿರ ಕೋಟಿ ಕ್ಷಿಪಣಿ ನಿರೋಧಕ ವಾಯು ರಕ್ಷಣಾ ವ್ಯವಸ್ಥೆಯ ಖರೀದಿ ಒಪ್ಪಂದಕ್ಕೆ ಭಾರತಕ್ಕೆ ಅಮೆರಿಕ ನಿರ್ಬಂಧ ಹೇರಿದ್ದಾಗಿಯೂ ಭಾರತ ಎಸ್-೪೦೦ ಕ್ಷಿಪಣಿ ರಕ್ಷಣಾ ವ್ಯವಸ್ಥೆಗೆ ಮುಂದಾಗಿದೆ. ಇದು ಭಾರತ ಹಾಗೂ ರಷ್ಯಾ ದೇಶಗಳ ನಡುವಿನ ೧೯ ನೇ ದ್ವಿಪಕ್ಷೀಯ ಮಾತುಕತೆಯಾಗಿದೆ.

ರೇಲ್ವೇಸ್ ಮಣಿಸುವ ವಿಶ್ವಾಸದಲ್ಲಿ ಕರ್ನಾಟಕ

ನಾಕೌಟ್ ಬಾಗಿಲು ಬಹುತೇಕ ಮುಚ್ಚಿದ್ದರೂ, ಪವಾಡದ ನಿರೀಕ್ಷೆಯೊಂದಿಗೆ ಹೋರಾಟ ಮುಂದುವರೆಸಿರುವ ಹಾಲಿ ಚಾಂಪಿಯನ್ ಕರ್ನಾಟಕ ತಂಡವು ವಿಜಯ್ ಹಜಾರೆ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಯಲ್ಲಿ ಮತ್ತೊಂದು ಜಯದ ಮೇಲೆ ಕಣ್ಣಿಟ್ಟಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಂದು ನಡೆಯಲಿರುವ ಎಲೀಟ್ 'ಎ' ಗುಂಪಿನ ಪಂದ್ಯದಲ್ಲಿ ಕರ್ನಾಟಕ ತಂಡ ರೈಲ್ವೆಸ್ ವಿರುದ್ಧ ಸೆಣಸಲಿದೆ. ಪ್ರಸಕ್ತ ಟೂರ್ನಿಯಲ್ಲಿ ಐದು ಪಂದ್ಯಗಳನ್ನು ಆಡಿರುವ ಕರ್ನಾಟಕ ಮೂರರಲ್ಲಿ ಸೋತಿದ್ದು, ಒಂದು ಪಂದ್ಯ ಮಳೆಯಿಂದ ರದ್ದಾಗಿದೆ. ಸತತ ಸೋಲಿನ ಕಾರಣ ಸೆ.30 ರಂದು ನಡೆದಿದ್ದ ವಿದರ್ಭ ಎದುರಿನ ಪಂದ್ಯಕ್ಕೆ ತಂಡದ ನಾಯಕತ್ವ ಬದಲಿಸಿ ಆರ್ ವಿನಯ್ ಕುಮಾರ್ ಬದಲಿಗೆ ಮನೀಷ್ ಪಾಂಡೆಗೆ ನಾಯಕತ್ವ ವಹಿಸಲಾಗಿತ್ತು. ಶ್ರೇಯಸ್ ಗೋಪಾಲ್ ಆಲ್ರೌಂಡ್ ಆಟದೊಂದಿಗೆ ಕರ್ನಾಟಕ ವಿದರ್ಭ ವಿರುದ್ಧ ಗೆಲುವು ಸಾಧಿಸಿ ಟೂರ್ನಿಯಲ್ಲಿ ಜಯದ ಖಾತೆ ತೆರೆದಿತ್ತು.

ಗಣಿಗಾರಿಕೆ ಅನುಮತಿಗೆ ಲಂಚ; ಐಎಫ್‌ಎಸ್‌, ಐಎಎಸ್‌ ಅಧಿಕಾರಿಗೆ ಎಸಿಬಿ ಕ್ಲೀನ್‌ಚಿಟ್‌?
ಕಬ್ಬನ್‌ ಪಾರ್ಕ್‌ ಠಾಣೆಗೆ ಶ್ರುತಿ ದೂರು; ಅರ್ಜುನ್ ಸರ್ಜಾ‌ ವಿರುದ್ಧ ಎಫ್‌ಐಆರ್
ಶ್ರೀಲಂಕಾ ರಾಜಕೀಯ ಬಿಕ್ಕಟ್ಟು| ಪಕ್ಸೆ ಮತ್ತೆ ಪ್ರಧಾನಿ, ಭಾರತಕ್ಕೆ ಆಘಾತ
Editor’s Pick More