ಮಾರ್ನಿಂಗ್ ಡೈಜೆಸ್ಟ್‌ | ಇಂದು ನೀವು ಗಮನಿಸಬೇಕಾದ 3 ಪ್ರಮುಖ ಸುದ್ದಿಗಳು

ನೀವು ಗಮನಿಸಲೇಬೇಕಾದ ಇಂದಿನ ರಾಷ್ಟ್ರೀಯ, ಅಂತಾರಾಷ್ಟ್ರೀಯ ಪ್ರಮುಖ ಸುದ್ದಿಗಳ ಸಂಕ್ಷಿಪ್ತ ನೋಟ

ಉಪಚುನಾವಣೆ; ಶಿವಮೊಗ್ಗ‌, ಬಳ್ಳಾರಿ ಅಭ್ಯರ್ಥಿ ಆಯ್ಕೆಗೆ ಸಭೆ

ಶಿವಮೊಗ್ಗ ಮತ್ತು ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಯು ಕಗ್ಗಂಟಾಗಿ ಪರಿಣಮಿಸಿದ್ದು, ಗುರುವಾರವೂ ಸರಣಿ ಸಭೆಗಳು ನಡೆಯಲಿವೆ. ಮಂಡ್ಯದಲ್ಲಿ ಮೈತ್ರಿಕೂಟಕ್ಕೆ ಮುಖಭಂಗ ಉಂಟುಮಾಡಲು ಬಿಜೆಪಿ‌ ಪಣತೊಟ್ಟಿದ್ದು, ಕಾಂಗ್ರೆಸ್-ಜೆಡಿಎಸ್ನಲ್ಲಿ ಪ್ರಬಲ ನಾಯಕರನ್ನು ಸೆಳೆಯುವ ಯತ್ನ ನಡೆದಿದೆ. ಈ ಸಂಬಂಧ ಬಿಜೆಪಿ ಮುಖಂಡ ಸಿ ಪಿ ಯೋಗೇಶ್ವರ್ ಅವರ ಜೊತೆ ಬಿ ಎಸ್ ಯಡಿಯೂರಪ್ಪ ಸಭೆ ನಡೆಸಲಿದ್ದಾರೆ.

ಒಡಿಶಾಗೆ ಆಗಮಿಸಲಿದೆ ತಿತಲಿ ಚಂಡಮಾರುತ

ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ತಿತಲಿ ಚಂಡಮಾರುತ ಒಡಿಶಾ ರಾಜ್ಯದ ಕರಾವಳಿ ಭಾಗಕ್ಕೆ ಗುರುವಾರ ಅಪ್ಪಳಿಸಲಿದೆ. ಗಂಟೆಗೆ 140ರಿಂದ 150 ಕಿಮೀ ವೇಗದ ಗಾಳಿ ಹಾಗೂ ಧಾರಾಕಾರ ಮಳೆ ಸುರಿಯಲಿರುವ ಹಿನ್ನೆಲೆಯಲ್ಲಿ ಸಮುದ್ರದ ಅಲೆಗಳ ಎತ್ತರ ಒಂದು ಮೀಟರ್‌ಗಿಂತ ಹೆಚ್ಚಾಗುವ ಸಂಭವವಿದೆ. ಹಾಗಾಗಿ, ಒಡಿಶಾ ಕರಾವಳಿಯ ಐದು ಜಿಲ್ಲೆಗಳಲ್ಲಿ ತಗ್ಗುಪ್ರದೇಶಗಳ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗುತ್ತಿದೆ.

ಶಾಂಘೈ ಮಾಸ್ಟರ್ಸ್‌ನಲ್ಲಿಂದು ಪ್ರಮುಖರ ಕಾದಾಟ

ಶಾಂಘೈ ಮಾಸ್ಟರ್ಸ್ ಟೆನಿಸ್ ಪಂದ್ಯಾವಳಿಯಲ್ಲಿಂದು ವಿಶ್ವದ ಪ್ರಮುಖ ಆಟಗಾರರು ಕಣಕ್ಕಿಳಿಯುತ್ತಿದ್ದು, ಟೆನಿಸ್‌ಪ್ರಿಯರ ಆಸಕ್ತಿ ಕೆರಳಿಸಿದ್ದಾರೆ. ಪ್ರೀಕ್ವಾರ್ಟರ್‌ಫೈನಲ್‌ನಲ್ಲಿ ನೊವಾಕ್ ಜೊಕೊವಿಚ್, ರೋಜರ್ ಫೆಡರರ್, ಡೆಲ್ ಪೊಟ್ರೊ ಹಾಗೂ ಯುವ ಆಟಗಾರ ಅಲೆಕ್ಸಾಂಡರ್ ಜ್ವೆರೇವ್ ಕಣಕ್ಕಿಳಿಯುತ್ತಿದ್ದಾರೆ. ಬೆಳಗ್ಗೆ ೧೦.೩೦ರಿಂದಲೇ ಶುರುವಾಗಲಿರುವ ಪುರುಷರ ಸಿಂಗಲ್ಸ್ ವಿಭಾಗದ ಪಂದ್ಯಗಳಲ್ಲಿ ಜಪಾನ್ ಆಟಗಾರ ಕೀ ನಿಶಿಕೊರಿ ಕೂಡ ಕಣಕ್ಕಿಳಿಯುತ್ತಿದ್ದಾರೆ. ಋತುವಿನ ಕೊನೆಯ ಎರಡು ಗ್ರಾಂಡ್‌ಸ್ಲಾಮ್‌ಗಳಾದ ವಿಂಬಲ್ಡನ್ ಮತ್ತು ಯುಎಸ್ ಓಪನ್ ಗೆದ್ದ ನೊವಾಕ್ ಜೊಕೊವಿಚ್, ಇಟಲಿ ಆಟಗಾರ ಮಾರ್ಕೊ ಸೆಸಿನಾಟೊ ವಿರುದ್ಧ ಸೆಣಸಲಿದ್ದರೆ, ೨೦ ಗ್ರಾಂಡ್‌ಸ್ಲಾಮ್ ಪ್ರಶಸ್ತಿ ವಿಜೇತ ಫೆಡರರ್, ಸ್ಪೇನ್‌ನ ರಾಬೆರ್ಟೊ ಬೌಟಿಸ್ಟಾ ಆಗುಟ್ ವಿರುದ್ಧ ಕಾದಾಡಲಿದ್ದಾರೆ.

ಗಣಿಗಾರಿಕೆ ಅನುಮತಿಗೆ ಲಂಚ; ಐಎಫ್‌ಎಸ್‌, ಐಎಎಸ್‌ ಅಧಿಕಾರಿಗೆ ಎಸಿಬಿ ಕ್ಲೀನ್‌ಚಿಟ್‌?
ಕಬ್ಬನ್‌ ಪಾರ್ಕ್‌ ಠಾಣೆಗೆ ಶ್ರುತಿ ದೂರು; ಅರ್ಜುನ್ ಸರ್ಜಾ‌ ವಿರುದ್ಧ ಎಫ್‌ಐಆರ್
ಶ್ರೀಲಂಕಾ ರಾಜಕೀಯ ಬಿಕ್ಕಟ್ಟು| ಪಕ್ಸೆ ಮತ್ತೆ ಪ್ರಧಾನಿ, ಭಾರತಕ್ಕೆ ಆಘಾತ
Editor’s Pick More