ಸಚಿವ ಸ್ಥಾನದ ಆಕಾಂಕ್ಷೆ ಕುರಿತು ಮೌನ ಮುರಿದ ಶಾಸಕ ಎಚ್ ಕೆ ಪಾಟೀಲ್‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍

ಇನ್ನು ಬಾಕಿ ಉಳಿದಿರುವ 6 ಸಚಿವ ಸ್ಥಾನಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, “ಉಳಿದ 6 ಸ್ಥಾನದಲ್ಲಿ ಸಚಿವ ಸ್ಥಾನ ಸಿಗಬಹುದೆಂಬ ನಿರೀಕ್ಷೆಯಲ್ಲಿ ನಾನಿಲ್ಲ. ನಾನೂ ಸಚಿವ ಸ್ಥಾನದ ನಿರೀಕ್ಷೆಯಲ್ಲೂ ಇಲ್ಲ. ಈ ಬಗ್ಗೆ ಟಿಪ್ಪಣಿನೂ ಮಾಡಲ್ಲ,” ಎಂದು ಸಚಿವ ಸ್ಥಾನದ ಕುರಿತು ಮೌನ ಮುರಿದಿದ್ದಾರೆ ಪಾಟೀಲ್

ಸಚಿವ ಸ್ಥಾನ ವಿಚಾರ ಸೂಕ್ಷ್ಮ ಹಾಗೂ ಮಹತ್ವದ ವಿಚಾರ. ಸಚಿವ ಸ್ಥಾನ ಒತ್ತಾಯ ಪೂರ್ವಕವಾಗಿ ಪಡೆದುಕೊಳ್ಳುವುದಲ್ಲ. ರಾಜೀನಾಮೆ, ಪ್ರತಿಭಟನೆ ಮೂಲಕ ಒತ್ತಡ ಹೇರುವುದು ಸೂಕ್ತವಲ್ಲ. ಪಕ್ಷ ಹಾಗೂ ಪ್ರಜಾಪ್ರಭುತ್ವದ ಹಿತ ದೃಷ್ಟಿಯಿಂದ ಸಚಿವ ಸ್ಥಾನಕ್ಕೆ ಪ್ರತಿಭಟನೆ ಮಾಡುವುದು ಒಳ್ಳೆಯದಲ್ಲ. ನನ್ನ ಮೇಲಿನ ಅಭಿಮಾನದಿಂದ ರಾಜಿನಾಮೆ ಮೂಲಕ ಪ್ರತಿಭಟನೆ ವ್ಯಕ್ತವಾಗಿದೆ. ಹೀಗಾಗಿ ರಾಜಿನಾಮೆ ನೀಡಿದವರು ಹಿಂಪಡೆದುಕೊಳ್ಳಲು ಕೈಮುಗಿದು ವಿನಂತಿಸಿಕೊಳ್ಳುವೆ...”

-ಸಚಿವ ಸ್ಥಾನ ವಂಚಿತ ಎಚ್ ಕೆ ಪಾಟೀಲರ ಮಾತುಗಳಿವು. “ಒತ್ತಾಯದ ಮೂಲಕ ಸಚಿವ ಸ್ಥಾನ ಪಡೆದುಕೊಳ್ಳುವುದು ನಮ್ಮ ಸಂಪ್ರದಾಯವಲ್ಲ. ಸಚಿವ ಸ್ಥಾನ ಸಿಗದಿದ್ದರೂ ಸೇವಾ ಅವಕಾಶ ಸಿಕ್ಕ ಸಮಾಧಾನ ನನ್ನದು. ಮಂತ್ರಿಗಿರಿಗಿಂತ ಎತ್ತರ ಸ್ಥಾನದಲ್ಲಿ ನನ್ನ ಜನ ನನ್ನನ್ನು ನೋಡುತ್ತಾರೆ. ನನಗೆ ಸಚಿವ ಸ್ಥಾನ ಸಿಗದಿರುವ ಬಗ್ಗೆ ವರಿಷ್ಠರೆ ಉತ್ತರಿಸಬೇಕು ಎಂದು. ಇನ್ನು ಬಾಕಿ ಉಳಿದಿರುವ 6 ಸಚಿವ ಸ್ಥಾನಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ಉಳಿದ 6 ಸ್ಥಾನದಲ್ಲಿ ಸಚಿವ ಸ್ಥಾನ ಸಿಗಬಹುದೆಂಬ ನಿರೀಕ್ಷೆಯಲ್ಲಿ ನಾನಿಲ್ಲ. ನಾನೂ ಸಚಿವ ಸ್ಥಾನದ ನಿರೀಕ್ಷೆಯಲ್ಲೂ ಇಲ್ಲ. ಈ ಬಗ್ಗೆ ಟಿಪ್ಪಣೆನೂ ಮಾಡಲ್ಲ,” ಎಂದಿದ್ದಾರೆ ಪಾಟೀಲ್.

ಇದನ್ನೂ ಓದಿ : ಶಾಸಕ ಎಚ್ ಕೆ ಪಾಟೀಲ್‌ಗೆ ಸಚಿವ ಸ್ಥಾನಕ್ಕೆ ಆಗ್ರಹಿಸಿ ‘ರಾಜಿನಾಮೆ ಪ್ರತಿಭಟನೆ’

ರಾಜ್ಯದಲ್ಲಿ ಕಾಂಗ್ರೆಸ್, ಜೆಡಿಎಸ್ ದೋಸ್ತಿ ಸರ್ಕಾರದಲ್ಲಿ ಗದಗ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಎಚ್ ಕೆ ಪಾಟೀಲ್ ಅವರಿಗೆ ಸಚಿವ ಸ್ಥಾನ ಸಿಗುವ ಬಗ್ಗೆ ಜಿಲ್ಲೆಯ ಜನರಲ್ಲಿ ವಿಶ್ವಾಸವಿತ್ತು. ಆದರೆ ಸಂಪುಟದಲ್ಲಿ ಸ್ಥಾನಮಾನ ಸಿಗದಿರುವುದು ಸಾಮಾನ್ಯವಾಗಿ ಅವರ ಅಭಿಮಾನಿ ಹಾಗೂ ಪಕ್ಷದ ಕಾರ್ಯಕರ್ತರಲ್ಲಿ ಅಸಮಾಧಾನ ಹಾಗೂ ಆಕ್ರೋಶ ಮೂಡಿಸಿತ್ತು. ಈ ಬಗ್ಗೆ ಗದಗ ಜಿಲ್ಲೆಯಲ್ಲಿ ಪ್ರತಿಭಟನೆಗಳು ಕೂಡ ನಡೆದಿದ್ದವು. ಕಳೆದ ಎರಡು ದಿನಗಳ ಹಿಂದಷ್ಟೆ ಪಕ್ಷದ ಪದಾಧಿಕಾರಿಗಳು ಹಾಗೂ ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾದ ಚುನಾಯಿತ ಜನಪ್ರತಿನಿಧಿಗಳು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡುವ ಮೂಲಕ ಪ್ರತಿಭಟಿಸಿದ್ದರು. ಇಷ್ಟೆಲ್ಲ ಬೆಳವಣಿಗೆಗಳಾದರೂ ಶಾಸಕ ಎಚ್ ಕೆ ಪಾಟೀಲ್ ಮಾತ್ರ ಪ್ರತಿಕ್ರಿಯಿಸಿರಲಿಲ್ಲ. ಆದರೆ ಇಂದು ಈ ಬಗ್ಗೆ ಪ್ರತಿಕ್ರಿಯೇ ನೀಡುವ ಮೂಲಕ ಎಚ್ ಕೆ ಪಾಟೀಲ್ ಮೌನ ಮುರಿದಿದ್ದಾರೆ.

ಅವಿವಾಹಿತ ಯುವತಿಯರಿಗೆ ಬಂಧಿಖಾನೆಗಳಾಗಿರುವ ಹಾಸನ ಗಾರ್ಮೆಂಟ್ ಹಾಸ್ಟೆಲ್‌ಗಳು
ಹೆಗ್ಡೆ ಬಿಜೆಪಿ ತೊರೆವ ವದಂತಿ; ಉಡುಪಿ- ಚಿಕ್ಕಮಗಳೂರು ಕ್ಷೇತ್ರದಲ್ಲಿ ಸಂಚಲನ
ವಿಡಿಯೋ ಸ್ಟೋರಿ | ಮುಂಗಾರು ಮುಗಿಯುವ ಮುನ್ನವೇ ಸೊರಗಿದ ಜೋಗ ಜಲಪಾತ!
Editor’s Pick More