ಜಾಲತಾಣದಲ್ಲಿ ಹರಿದಾಡಿತು ೧೩೧ ಕ್ಷೇತ್ರಗಳ ಕಾಂಗ್ರೆಸ್‌ ಅಭ್ಯರ್ಥಿಗಳ ಸುಳ್ಳು ಪಟ್ಟಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸೇರಿದಂತೆ 131 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ, ಗೊಂದಲವನ್ನೇ ಸೃಷ್ಟಿಸಿತು. ಈ ಕುರಿತು ಸ್ವತಃ ಸಿಎಂ ಸಿದ್ದರಾಮಯ್ಯ ಅವರು ಇದು ಸುಳ್ಳು ಸುದ್ದಿ ಎಂದು ಹೇಳಿ ಗೊಂದಲಕ್ಕೆ ತೆರೆಎಳೆದರು

ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಆಯ್ಕೆ ಸಭೆ ದೆಹಲಿಯಲ್ಲಿ ನಡೆಯುತ್ತಿರುವಂತೆಯೇ, ಮಂಗಳವಾರ ಸಂಜೆ ಹೊತ್ತಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿ ಗೊಂದಲ ಸೃಷ್ಟಿಯಾಯಿತು.

ಮಂಗಳವಾರ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ 131 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ, ಗೊಂದಲವನ್ನೇ ಸೃಷ್ಟಿಸಿತು. ಮೊದಲ ಪಟ್ಟಿಯಲ್ಲಿ ಹೆಸರಿರದ ಕಾರಣಕ್ಕಾಗಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ನಾಯಕರನ್ನು ಇಕ್ಕಟ್ಟಿಗೆ ಸಿಲುಕಿಸಿತು.

ಇದನ್ನೂ ಓದಿ : ಸಾವಿರಾರು ಕೋಟಿ ವಂಚಿಸಿ, ಪರಾರಿ ಆಗಿರುವ ನೀರವ್ ಮೋದಿ ಬಂಧನ ಸುದ್ದಿ ನಿಜವೇ?

ಈ ಕುರಿತಂತೆ ವ್ಯಾಪಕ ಚರ್ಚೆ ನಡೆಯುತ್ತಿದ್ದಂತೆ, ಟ್ವಿಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, “ಎಐಸಿಸಿ ಯಾವುದೇ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿಲ್ಲ. ಗೊಂದಲ ಸೃಷ್ಟಿಸುವ ಸಲುವಾಗಿ ಸುಳ್ಳು ಪಟ್ಟಿಯನ್ನು ಹರಿಬಿಡಲಾಗಿದೆ. ಫೇಕ್ ನ್ಯೂಸ್ ಹರಡುವವರನ್ನು ಉತ್ತೇಜಿಸಬೇಡಿ,” ಎನ್ನುವ ಮೂಲಕ ಕಾಂಗ್ರೆಸ್ ಪಟ್ಟಿ ಬಿಡುಗಡೆ ಕುರಿತಂತೆ ಹಬ್ಬಿದ ಸುಳ್ಳು ಸುದ್ದಿಗೆ ತೆರೆ ಎಳೆದರು.

ಸುಳ್ಳು ಪಟ್ಟಿಯ ಕುರಿತಂತೆ ಎಐಸಿಸಿ ಕೂಡ ಟ್ವಿಟರ್‌ನಲ್ಲಿ ಸ್ಪಷ್ಟನೆ ನೀಡಿದ್ದು, “ಎಐಸಿಸಿ ಯಾವುದೇ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿಲ್ಲ. ಸದ್ಯ ಸ್ಕ್ರೀನಿಂಗ್ ಕಮಿಟಿಯ ಸಭೆ ನಡೆಯುತ್ತಿದ್ದು, ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸಭೆಯ ಬಳಿಕವೇ ಪಟ್ಟಿ ಬಿಡುಗಡೆಯಾಗಲಿದೆ,” ಎಂದು ಸ್ಪಷ್ಟಪಡಿಸಿದೆ.

ವಿಡಿಯೋ ಸ್ಟೋರಿ | ಕೆಮರೂನ್ ದೇಶದ ಮುಖವಾಡ ಬಯಲಿಗೆಳೆದ ‘ಬಿಬಿಸಿ’ ತನಿಖಾ ವರದಿ
ವಾಟ್ಸಾಪ್ ವಿಡಿಯೋ ಪೋಸ್ಟ್ ಮಾಡಿ, ಪೇಚಿಗೆ ಸಿಲುಕಿದ ಮಾಜಿ ಸಂಸದೆ ರಮ್ಯಾ
ರಾಹುಲ್‌ ಗಾಂಧಿಗೆ ಆರೆಸ್ಸೆಸ್ ಕಾರ್ಯಕ್ರಮದ ಆಹ್ವಾನ ಬಂದಿದೆ ಎಂಬ ಸುದ್ದಿ ನಿಜವೇ?
Editor’s Pick More