ಪಾಕ್‌ ಚುನಾವಣೆ ಬಹುತೇಕ ಶಾಂತಿಯುತ; ಬಲೂಚಿಸ್ತಾನದಲ್ಲಿ ಬಾಂಬ್‌ ಸ್ಫೋಟ

ಬಲೂಚಿಸಸ್ತಾನದಲ್ಲಿ ಹಿಂಸಾಚಾರ  ಹೊರತುಪಡಿಸಿ ಪಾಕಿಸ್ತಾನದ ೨೭೨ ಸ್ಥಾನಗಳಿಗೆ ಬುಧವಾರ ಚುನಾವಣೆ ನಡೆದಿದ್ದು, ಮತದಾನ ಶಾಂತಿಯುತವಾಗಿತ್ತು. ಗುರುವಾರ ಬೆಳಿಗ್ಗೆ ಫಲಿತಾಂಶ ಹೊರಬೀಳಲಿದೆ. ಇಮ್ರಾನ್‌ ಖಾನ್‌ ನೇತೃತ್ವದ ಪಿಟಿಐ ಪಾಕ್‌ ಚುಕ್ಕಾಣಿ ಹಿಡಿಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ 

ಬಲೂಚಿಸ್ತಾನದ ಕ್ವೆಟ್ಟಾದಲ್ಲಿ ಬಾಂಬ್‌ ದಾಳಿ ಹೊರತುಪಡಿಸಿ ಪಾಕಿಸ್ತಾನ ಸಾರ್ವತ್ರಿಕ ಚುನಾವಣೆ ಬುಧವಾರ ಬಹುತೇಕ ಶಾಂತಿಯುತವಾಗಿ ನಡೆದಿದ್ದು, ಮತ ಎಣಿಕೆ ಆರಂಭವಾಗಿದೆ. ಕ್ವೆಟ್ಟಾದಲ್ಲಿ ನಡೆದ ಬಾಂಬ್‌ ದಾಳಿಯಲ್ಲಿ ೩೦ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ. ಸಂಸತ್‌ನ 272 ಸ್ಥಾನಗಳಿಗೆ ಮತದಾನ ನಡೆದಿದ್ದು, ೧೩೭ ಸ್ಥಾನ ಗೆಲ್ಲಲಿರುವ ಪಕ್ಷ ಪಾಕಿಸ್ತಾನದ ಚುಕ್ಕಾಣಿ ಹಿಡಿಯಲಿದೆ.

ಮಾಜಿ ಪ್ರಧಾನಿ ನವಾಜ್‌ ಷರೀಫ್‌ ಅವರ ಪಾಕಿಸ್ತಾನ್ ಮುಸ್ಲಿಂ ಲೀಗ್ (ನವಾಜ್ ಷರೀಫ್) -ಪಿಎಂಎಲ್‌ಎನ್, ಮಾಜಿ ಕ್ರಿಕೆಟ್ ತಾರೆ ಇಮ್ರಾನ್ ಖಾನ್ ನೇತೃತ್ವದ ಪಾಕಿಸ್ತಾನ್ ತೆಹರೀಕ್ ಎ ಇನ್ಸಾಫ್ (ಪಿಟಿಐ) ಹಾಗೂ ಮಾಜಿ ಪ್ರಧಾನಿ ಬೆನಜೀರ್‌ ಭುಟ್ಟೊ ಅವರ ಪುತ್ರ ಬಿಲ್ವಾಲಾ ಭುಟ್ಟೊ ನೇತೃತ್ವದ ಪಾಕಿಸ್ತಾನ್ ಪೀಪಲ್ಸ್‌ ಪಾರ್ಟಿ (ಪಿಪಿಪಿ) ನಡುವೆ ತೀವ್ರ ಹಣಾಹಣಿ ಏರ್ಪಟ್ಟಿದೆ.

ಭ್ರಷ್ಟಾಚಾರ ಆರೋಪದಲ್ಲಿ ನವಾಜ್‌ ಷರೀಫ್‌ ಜೈಲು ಪಾಲಾಗಿದ್ದು, ಸಾರ್ವತ್ರಿಕ ಚುನಾವಣಾ ಫಲಿತಾಂಶವು ಅವರ ರಾಜಕೀಯ ಭವಿಷ್ಯ ನಿರ್ಧರಿಸಲಿದೆ. ಸೇನಾ ಬೆಂಬಲ ಇಮ್ರಾನ್‌ ನೇತೃತ್ವದ ಪಿಟಿಐಗೆ ದೊರೆಯತಿದ್ದು, ಹಲವು ಸಮೀಕ್ಷೆಗಳು ಅವರೇ ಅಧಿಕಾರ ಹಿಡಿಯುವ ಸಾಧ್ಯತೆ ಇದೆ ಎಂದು ಭವಿಷ್ಯ ನುಡಿದಿವೆ. ೨೭೨ ಸ್ಥಾನಗಳ ಹೊರತಾಗಿ ೬೦ ಸ್ಥಾನ ಮಹಿಳೆಯರಿಗೆ ಹಾಗೂ ೧೦ ಸ್ಥಾನಗಳು ಅಲ್ಪಸಂಖ್ಯಾತರಿಗೆ ಮೀಸಲಾಗಿವೆ. ಪಾಕ್‌ ಚುನಾವಣೆಗೆ ಸಂಬಂಧಿಸಿದಂತೆ ಪ್ರಮುಖ ಅಂಶಗಳು ಇಂತಿವೆ.

ಇದನ್ನೂ ಓದಿ : ಪಾಕಿಸ್ತಾನ ಚುನಾವಣೆಯಲ್ಲಿ ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಪಕ್ಷದ ಮೇಲುಗೈ?
  • ಪಾಕ್ ಸಂಸತ್‌ನ ೨೭೨ ಸ್ಥಾನಗಳಿಗೆ ನಡೆದಿರುವ ಚುನಾವಣೆಯಲ್ಲಿ ಇಮ್ರಾನ್‌ ಖಾನ್‌, ನವಾಜ್‌ ಷರೀಫ್‌ ಹಾಗೂ ಬಿಲ್ವಾಲಾ ಭುಟ್ಟೊ ಅವರ ಪಕ್ಷಗಳು ಸೇರಿದಂತೆ ೩೦ಕ್ಕೂ ಹೆಚ್ಚು ಪಕ್ಷಗಳ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಪಂಜಾಬ್‌, ಸಿಂಧ್‌, ಬಲೋಚಿಸ್ತಾನ ಮತ್ತು ಖೈಬರ್‌-ಪಖ್ತುಂಖ್ವಾ ಒಳಗೊಂಡ ನಾಲ್ಕು ಪ್ರಾಂತ್ಯಗಳ ೫೭೭ ಸ್ಥಾನಗಳಿಗೂ ಚುನಾವಣೆ ನಡೆದಿದ್ದು, ೮,೩೯೬ ಅಭ್ಯರ್ಥಿಗಳು ಅದೃಷ್ಟ ಪರೀಕ್ಷೆಗೆ ಒಡ್ಡಿದ್ದಾರೆ.
  • ಮುಂಬೈ ಮೇಲಿನ ದಾಳಿಯ ಸಂಚುಕೋರ ಸಯೀದ್‌ ಹಫೀಜ್‌ ಪುತ್ರ ಹಾಗೂ ಅಳಿಯ ಸೇರಿದಂತೆ ೪೬೦ಕ್ಕೂ ಹೆಚ್ಚು ಉಗ್ರ ಸಂಘಟನೆಗಳ ಜೊತೆ ಗುರುತಿಸಿಕೊಂಡಿರುವ ಅಭಿಮಾನಿಗಳು ಚುನಾವಣಾ ಕಣದಲ್ಲಿದ್ದಾರೆ. ಇದು ಭಾರತದ ಆತಂಕಕ್ಕೆ ಕಾರಣವಾಗಿದೆ.
  • ಮತದಾನ ಗೌಪ್ಯತೆ ಉಲ್ಲಂಘಿಸಿದ್ದಕ್ಕೆ ಪಿಟಿಐ ಮುಖ್ಯಸ್ಥ ಇಮ್ರಾನ್‌ ಖಾನ್‌ಗೆ ಪಾಕಿಸ್ತಾನ ಚುನಾವಣಾ ಆಯೋಗ ನೋಟಿಸ್‌ ಜಾರಿಗೊಳಿಸಿದ್ದು, ಅವರ ಮತ ಅಸಿಂಧುವಾಗುವ ಸಾಧ್ಯತೆ ಇದೆ.
  • ಚುನಾವಣೆ ಹಿನ್ನೆಲೆಯಲ್ಲಿ ಮಾಧ್ಯಮಗಳ ಮೇಲೆ ವಿಪರೀತ ನಿರ್ಬಂಧ ಹೇರಲಾಗಿದ್ದು, ಇಮ್ರಾನ್‌ ಖಾನ್‌ಗೆ ಪಾಕಿಸ್ತಾನ ಬೆಂಬಲವಾಗಿ ನಿಂತಿದೆ ಎಂಬ ಆರೋಪ ಬಲವಾಗಿ ಕೇಳಿಬಂದಿದೆ.
ಶ್ರೀಲಂಕಾ ರಾಜಕೀಯ ಬಿಕ್ಕಟ್ಟು| ಪಕ್ಸೆ ಮತ್ತೆ ಪ್ರಧಾನಿ, ಭಾರತಕ್ಕೆ ಆಘಾತ
ಪತ್ರಕರ್ತ ಕಸೋಜಿ ಹತ್ಯೆ ಪೂರ್ವಯೋಜಿತ ಎಂದ ಟರ್ಕಿ ಅಧ್ಯಕ್ಷ ಎರ್ಡೋಗನ್
ಪತ್ರಕರ್ತ ಜಮಾಲ್ ಕಸ್ಸೋಜಿ ಹತ್ಯೆಯ ಹಿಂದೆ ಸೌದಿ ಅರೇಬಿಯಾ ದೊರೆ ಕುಟುಂಬ?
Editor’s Pick More