ಲೈವ್ ವಿತ್ ಸಂಧ್ಯಾ | ಮಾದರಿ ಕ್ಷೇತ್ರ ರೂಪಿಸುವೆ ಎಂದ ಜೇಡರಹಳ್ಳಿ ಕೃಷ್ಣಪ್ಪ

ಬಿಜೆಪಿ ವಶದಲ್ಲಿರುವ ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ತ್ರಿಕೋನ ಸ್ಪರ್ಧೆ. ಈ ಬಾರಿ ಗೆಲುವು ತನ್ನದೇ ಎನ್ನುತ್ತಿರುವ ಜೆಡಿಎಸ್ ಅಭ್ಯರ್ಥಿ ಜೇಡರಹಳ್ಳಿ ಕೃಷ್ಣಪ್ಪ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದು, ತಮ್ಮ ಸ್ಪರ್ಧೆ ಹಾಗೂ ಗೆಲುವಿನ ಕುರಿತಂತೆ ‘ದಿ ಸ್ಟೇಟ್’ ಜೊತೆ ಮಾತನಾಡಿದ್ದಾರೆ

ಬಿಜೆಪಿ ವಶದಲ್ಲಿರುವ ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ತ್ರಿಕೋನ ಸ್ಪರ್ಧೆ. ಈ ಬಾರಿ ಗೆಲುವು ತನ್ನದೇ ಎನ್ನುತ್ತಿರುವ ಜೆಡಿಎಸ್ ಅಭ್ಯರ್ಥಿ ಜೇಡರಹಳ್ಳಿ ಕೃಷ್ಣಪ್ಪ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಕ್ಷೇತ್ರದ ಕೆಲವೆಡೆ ಮೇಲ್ನೋಟಕ್ಕೆ ಕೃಷ್ಣಪ್ಪ ಅವರಿಗೆ ಒಂದು ಅವಕಾಶ ನೀಡಬೇಕು ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.

ರಾಜಾಜಿನಗರದಲ್ಲಿ ಸ್ಪರ್ಧಿಸುತ್ತಿರುವ ಬಗ್ಗೆ ‘ದಿ ಸ್ಟೇಟ್’ ಜೊತೆ ಮಾತನಾಡಿದ ಜೇಡರಹಳ್ಳಿ ಕೃಷ್ಣಪ್ಪ, “ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ಬಾಕಿ ಉಳಿದಿದ್ದು, ಹಾಲಿ ಶಾಸಕರು ಕಳೆದ 10 ವರ್ಷಗಳಿಂದ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ. ಈ ಭಾಗದ ಜನತೆ ನನ್ನನ್ನು ಆಶೀರ್ವದಿಸಿದರೆ ಇದನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸಲಾಗುವುದು,” ಎಂದು ಭರವಸೆ ನೀಡಿದ್ದಾರೆ.

ಇದನ್ನೂ ಓದಿ : ಲೈವ್ ವಿತ್ ಸಂಧ್ಯಾ | ಹ್ಯಾಟ್ರಿಕ್ ವಿಜಯ ಸಾಧಿಸುವರೇ ಕೃಷ್ಣ ಬೈರೇ ಗೌಡ?

ಕಾಂಗ್ರೆಸ್ ಅಭ್ಯರ್ಥಿ ಪದ್ಮಾವತಿ ಕೂಡ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದು, ಇವರಿಗೆ ಸಾಥ್ ನೀಡಿರುವ ಕೆಲ ಯುವಕರ ತಂಡ, ಪದ್ಮಾವತಿ ಅವರಿಗೆ ಈ ಬಾರಿ ಕ್ಷೇತ್ರದ ಜನತೆ ಅವಕಾಶ ನೀಡಬೇಕು ಎಂದು ಮನವಿ ಮಾಡುತ್ತಿದೆ.

ಚಾಣಕ್ಯಪುರಿ | ದೇವೇಗೌಡ ಮತ್ತು ಸಿದ್ದರಾಮಯ್ಯ ಗುರು-ಶಿಷ್ಯರಲ್ಲ!
ಕೋರ್ಟ್‌ ಕದನ ಗೆದ್ದ ತಮಿಳುನಾಡು ಸಿಎಂ ಪಳನಿಸ್ವಾಮಿ ಮುಂದಿರುವ ಸವಾಲುಗಳೇನು?
ದಕ್ಷಿಣದಲ್ಲಿ ಬಿಜೆಪಿಗೆ ಬಾಗಿಲು ಮುಚ್ಚುವ ಗೌಡರ ಹೇಳಿಕೆ ನೆನಪಿಸಿದ ಕಹಿಸತ್ಯ
Editor’s Pick More