ಬಿಜೆಪಿ ಜನಮಾನಸದಲ್ಲಿ ನೆಲೆಯೂರಿದೆ ಎಂಬುದು ಸಾಬೀತು: ಸದಾನಂದ ಗೌಡ

ದೇಶದ ಉದ್ದಗಲಕ್ಕೂ ಭಾರತೀಯ ಜನತಾ ಪಕ್ಷ ಜನಮಾನಸದಲ್ಲಿ ನೆಲೆಯೂರಿದೆ ಎಂಬುದನ್ನು ಕರ್ನಾಟಕ ಚುನಾವಣಾ ಫಲಿತಾಂಶ ಸ್ಪಷ್ಟಪಡಿಸಿದೆ. ನಮ್ಮ ಮುಂದಿನ ಗುರಿ ದಕ್ಷಿಣ ಭಾರತದ ಇನ್ನುಳಿದ ಮೂರು ರಾಜ್ಯಗಳನ್ನು ಗೆಲ್ಲುವುದಷ್ಟೇ ಎಂದು ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ತಿಳಿಸಿದ್ದಾರೆ

ದೇಶದ ಉದ್ದಗಲಕ್ಕೂ ಭಾರತೀಯ ಜನತಾ ಪಕ್ಷ ಜನಮಾನಸದಲ್ಲಿ ನೆಲೆಯೂರಿದೆ ಎಂಬುದನ್ನು ಕರ್ನಾಟಕ ಚುನಾವಣಾ ಫಲಿತಾಂಶ ದೃಢಪಡಿಸಿದೆ. ನಮ್ಮ ಮುಂದಿನ ಗುರಿ ದಕ್ಷಿಣ ಭಾರತದ ಇನ್ನುಳಿದ ಮೂರು ರಾಜ್ಯಗಳನ್ನು ಗೆಲ್ಲುವುದಷ್ಟೇ ಎಂದು ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ತಿಳಿಸಿದ್ದಾರೆ

ಮಂಗಳವಾರ (ಮೇ ೧೫) ಪ್ರಕಟವಾದ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶವು ಬಿಜೆಪಿ ಸರಳ ಬಹುಮತದತ್ತ ಮುನ್ನುಗ್ಗುತ್ತಿದೆ ಎಂಬ ಆಶಾವಾದವನ್ನು ಬಿತ್ತುತ್ತಿದ್ದಾಗ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, "ಸಿದ್ದರಾಮಯ್ಯ ಅವರ ಆಡಳಿತ ವೈಫಲ್ಯಕ್ಕೆ ರಾಜ್ಯದ ಜನತೆ ತಕ್ಕ ಶಾಸ್ತಿ ಮಾಡಿದೆ. ಚುನಾವಣಾ ಫಲಿತಾಂಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಪ್ರಭಾವ ಕೆಲಸ ಮಾಡಿದೆ ಎಂಬುದು ಋಜುವಾಗಿದೆ. ಎಲ್ಲರೂ ಅತಂತ್ರ ವಿಧಾನಸಭೆ ನಿರ್ಮಾಣವಾಗುತ್ತದೆ ಎಂದೇ ವ್ಯಾಖ್ಯಾನಿಸಿದ್ದರು. ಆದರೆ, ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂಬ ನಮ್ಮೆಲ್ಲರ ವಿಶ್ವಾಸ ಹುಸಿಯಾಗಲಿಲ್ಲ,'' ಎಂದೇ ಹರ್ಷ ವ್ಯಕ್ತಪಡಿಸಿದರು.

ಇದನ್ನೂ ಓದಿ : ಕರ್ನಾಟಕ ವಿಧಾನಸಭಾ ಚುನಾವಣೆಯ ಮತಗಟ್ಟೆ ಸಮೀಕ್ಷೆಗಳು ಹೇಳುವುದೇನು?

ಕಾಂಗ್ರೆಸ್ ಮುಕ್ತ ರಾಷ್ಟ್ರದ ಗುರಿ: ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಕರ್ನಾಟಕದಲ್ಲಿ ಮತ್ತೆ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರುತ್ತಿರುವುದು ಸಂತಸದ ವಿಚಾರ. ಈಗಾಗಲೇ ೨೧ ರಾಜ್ಯಗಳಲ್ಲಿ ಬಿಜೆಪಿ ಸರ್ಕಾರವಿದ್ದು, ಕರ್ನಾಟಕ ೨೨ನೇ ರಾಜ್ಯವಾಗಿದೆ. ಸದ್ಯದ ನಮ್ಮ ಗುರಿ ಆಂಧ್ರಪ್ರದೇಶ, ತಮಿಳುನಾಡು ಹಾಗೂ ಕೇರಳ. ಆ ಮೂಲಕ ದಕ್ಷಿಣ ಭಾರತವನ್ನೂ ಬಿಜೆಪಿಮಯವಾಗಿಸಲು ಮುಂದಿನ ದಿನಗಳಲ್ಲಿ ಶ್ರಮಿಸಲಾಗುತ್ತದೆ. ಒಟ್ಟಾರೆ, ಇಡೀ ರಾಷ್ಟ್ರವನ್ನು ಕಾಂಗ್ರೆಸ್ ಮುಕ್ತವಾಗಿಸುವುದೇ ನಮ್ಮ ಮುಂದಿರುವ ಗುರಿ ಎಂತಲೂ ಸದಾನಂದ ಗೌಡ ಹೇಳಿದರು.

ಚಾಣಕ್ಯಪುರಿ | ದೇವೇಗೌಡ ಮತ್ತು ಸಿದ್ದರಾಮಯ್ಯ ಗುರು-ಶಿಷ್ಯರಲ್ಲ!
ಕೋರ್ಟ್‌ ಕದನ ಗೆದ್ದ ತಮಿಳುನಾಡು ಸಿಎಂ ಪಳನಿಸ್ವಾಮಿ ಮುಂದಿರುವ ಸವಾಲುಗಳೇನು?
ದಕ್ಷಿಣದಲ್ಲಿ ಬಿಜೆಪಿಗೆ ಬಾಗಿಲು ಮುಚ್ಚುವ ಗೌಡರ ಹೇಳಿಕೆ ನೆನಪಿಸಿದ ಕಹಿಸತ್ಯ
Editor’s Pick More