ಕೆಲ ಕ್ಷೇತ್ರಗಳಲ್ಲಿ ಪರಾಭವಗೊಂಡರೂ ಪ್ರಬಲ ಪೈಪೋಟಿ ನೀಡಿದ ಪಕ್ಷೇತರರು

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್‌ಪಿ ಅಭ್ಯರ್ಥಿ ಎನ್ ಮಹೇಶ್‌ ಹಾಗೂ ಕೆಪಿಜೆಪಿ ಅಭ್ಯರ್ಥಿ ಆರ್‌ ಶಂಕರ್‌ ಅವರು ಜಯಗಳಿಸಿದ್ದಾರೆ. ಇನ್ನುಳಿದ ಕ್ಷೇತ್ರಗಳಲ್ಲಿ ಸಣ್ಣ ಪಕ್ಷಗಳ ಅಭ್ಯರ್ಥಿಗಳು ಹಾಗೂ ಪಕ್ಷೇತರರು ಸೋತಿದ್ದರೂ, ಕೆಲ ಕ್ಷೇತ್ರಗಳಲ್ಲಿ ದೊಡ್ಡ ಪಕ್ಷಗಳ ಅಭ್ಯರ್ಥಿಗಳಿಗೆ ಪ್ರಬಲ ಸ್ಪರ್ಧೆ ಒಡ್ಡಿದ್ದಾರೆ

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕೊಳ್ಳೇಗಾಲ ಕ್ಷೇತ್ರದಿಂದ ಬಿಎಸ್‌ಪಿ ಅಭ್ಯರ್ಥಿ ಎನ್ ಮಹೇಶ್‌ ಹಾಗೂ ರಾಣೇಬೆನ್ನೂರು ಕ್ಷೇತ್ರದಿಂದ ಕೆಪಿಜೆಪಿ ಅಭ್ಯರ್ಥಿ ಆರ್‌ ಶಂಕರ್‌ ಅವರು ಜಯಗಳಿಸಿದ್ದಾರೆ. ಇನ್ನುಳಿದ ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಸಣ್ಣ ಪಕ್ಷಗಳ ಅಭ್ಯರ್ಥಿಗಳು ಹಾಗೂ ಪಕ್ಷೇತರರು ಪರಾಭವಗೊಂಡಿದ್ದರೂ, ಕೆಲ ಕ್ಷೇತ್ರಗಳಲ್ಲಿ ದೊಡ್ಡ ಪಕ್ಷಗಳ ಅಭ್ಯರ್ಥಿಗಳಿಗೆ ಪೈಪೋಟಿ ನೀಡಿದ್ದು ಕಂಡುಬಂದಿದೆ. ಇಂತಹ ಅಭ್ಯರ್ಥಿಗಳ ವಿವರ ಈ ಕೆಳಗಿನಂತಿದೆ.

ಕೊಳ್ಳೇಗಾಲ: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಮೀಸಲು ಕ್ಷೇತ್ರದಲ್ಲಿ ಬಿಎಸ್‌ಪಿ ಅಭ್ಯರ್ಥಿ ಎನ್ ಮಹೇಶ್‌ ಅವರು 71, 792 ಗಳಿಸುವ ಮೂಲಕ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಇವರ ವಿರುದ್ಧ ಕಣಕ್ಕಿಳಿದಿದ್ದ ಕಾಂಗ್ರೆಸ್‌ನ ಎ ಆರ್‌ ಕೃಷ್ಣಮೂರ್ತಿ ಅವರು 19, 454 ಮತಗಳಿಂದ ಪರಾಭವಗೊಂಡಿದ್ದಾರೆ. ಬಿಜೆಪಿಯ ಜಿ ಎನ್ ನಂಜುಂಡಸ್ವಾಮಿ ಮೂರನೇ ಸ್ಥಾನದಲ್ಲಿದ್ದಾರೆ.

ರಾಣಿಬೆನ್ನೂರು: ಹಾವೇರಿ ಜಿಲ್ಲೆಯ ರಾಣಿಬೆನ್ನೂರು ಕ್ಷೇತ್ರದಲ್ಲಿ ಕೆಪಿಜೆಪಿಯಿಂದ ಕಣಕ್ಕಿಳಿದಿದ್ದ ಆರ್‌ ಶಂಕರ್‌ 63, 910 ಮತಗಳನ್ನು ಗಳಿಸುವ ಮೂಲಕ ಇದೇ ಮೊದಲ ಬಾರಿಗೆ ವಿಧಾನಸಭೆ ಪ್ರವೇಶ ಪಡೆದಿದ್ದಾರೆ. ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಕೆ ಬಿ ಕೋಳಿವಾಡ ಅವರು 59572 ಮತಗಳನ್ನು ತಮ್ಮದಾಗಿಸಿಕೊಂಡು ಪರಾಭವಗೊಂಡಿದ್ದಾರೆ.

ಬಾಗೇಪಲ್ಲಿ: ಕೋಲಾರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದಲ್ಲಿ ಸಿಪಿಎಂನ ಜಿ ವಿ ಶ್ರೀರಾಮರೆಡ್ಡಿ ಅವರು 51, 697 ಮತಗಳನ್ನು ಗಳಿಸುವ ಮೂಲಕ ಎರಡನೇ ಸ್ಥಾನದಲ್ಲಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಎಸ್‌ ಎನ್ ಸುಬ್ಬಾರೆಡ್ಡಿ ಅವರು 65, 710 ಮತಗಳನ್ನು ಪಡೆದು ಈ ಕ್ಷೇತ್ರದಲ್ಲಿ ಜಯಗಳಿಸಿದ್ದಾರೆ. ಇವರ ವಿರುದ್ದ ಸ್ಪರ್ಧಿಸಿದ್ದ ಜೆಡಿಎಸ್‌ನ ಸಿ ಆರ್‌ ಮನೋಹರ್‌ ಅವರು 38, 302 ಮತಗಳನ್ನು ಗಳಿಸುವ ಮೂಲಕ ಮೂರನೇ ಸ್ಥಾನದಲ್ಲಿದ್ದಾರೆ.

ತರೀಕೆರೆ: ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಕ್ಷೇತ್ರದಲ್ಲಿ ಪಕ್ಷೇತರರಾಗಿ ಕಣಕ್ಕಿಳಿದಿದ್ದ ಬಿ ಎಚ್ ಶ್ರೀನಿವಾಸ್‌ ಅವರು 33, 253 ಮತಗಳನ್ನು ಪಡೆಯುವ ಮೂಲಕ ಎರಡನೇ ಸ್ಥಾನದಲ್ಲಿದ್ದಾರೆ. ಇವರ ವಿರುದ್ದ ಸ್ಪರ್ಧಿಸಿದ್ದ ಬಿಜೆಪಿಯ ಡಿ ಎಸ್‌ ಸುರೇಶ್‌ ಅವರು 44, 940 ಮತಗಳನ್ನು ಪಡೆದುಕೊಂಡಿದ್ದಾರೆ. ಈ ಕ್ಷೇತ್ರದ ಮತ್ತೊಂದು ವಿಶೇಷವೆಂದರೆ, ಮೂರನೇ ಸ್ಥಾನದಲ್ಲಿರುವ ಪಕ್ಷೇತರ ಅಭ್ಯರ್ಥಿ ಎಚ್‌ ಎಂ ಗೋಪಿಕೃಷ್ಣ ಅವರು 29,663 ಮತಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

ಮಾನ್ವಿ: ರಾಯಚೂರು ಜಿಲ್ಲೆಯ ಮಾನ್ವಿ(ಮೀಸಲು) ಕ್ಷೇತ್ರದಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿದ ತನುಶ್ರೀ ಮೇತ್ರೆ ಅವರು 37, 733 ಮತಗಳನ್ನು ಗಳಿಸುವ ಮೂಲಕ ಎರಡನೇ ಸ್ಥಾನದಲ್ಲಿದ್ದಾರೆ. ಇವರ ಕಣಕ್ಕಿಳಿದಿದ್ದ ಜೆಡಿಎಸ್‌ನ ರಾಜಾ ವೆಂಕಟಪ್ಪ ನಾಯಕ ಅವರು 15, 815 ಮತಗಳ ಅಂತರದಲ್ಲಿ ಜಯಸಾಧಿಸಿದ್ದಾರೆ. ಬಿಜೆಪಿಯ ಶರಣಯ್ಯ ನಾಯಕ ಗುಡದಿನ್ನಿ ಅವರು ಮೂರನೇ ಸ್ಥಾನದಲ್ಲಿದ್ದಾರೆ.

ಹೂವಿನ ಹಡಗಲಿ: ಬಳ್ಳಾರಿ ಜಿಲ್ಲೆಯ ಹೂವಿನ ಹಡಗಲಿ (ಮೀಸಲು) ಕ್ಷೇತ್ರದಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿದ ಒ. ಗಂಗಪ್ಪನವರು 44,919 ಮತಗಳನ್ನು ಪಡೆದು ಎರಡನೇ ಸ್ಥಾನದಲ್ಲಿದ್ದಾರೆ. ಇವರ ವಿರುದ್ಧ ಸ್ಪರ್ಧಿಸಿದ್ದ ಕಾಂಗ್ರೆಸ್‌ನ ಪಿ ಟಿ ಪರಮೇಶ್ವರ ನಾಯ್ಕ ಅವರು 54, 097 ಮತಗಳನ್ನು ಗಳಿಸುವ ಮೂಲಕ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿಯ ಚಂದ್ರಾ ನಾಯಕ್ ಅವರು ಮೂರನೇ ಸ್ಥಾನದಲ್ಲಿದ್ದಾರೆ.

ಇದನ್ನೂ ಓದಿ : ಕರ್ನಾಟಕ ಚುನಾವಣೆ ಕಲಿಸಿದ ಪಾಠ; ಬಿಜೆಪಿ ಓಟಕ್ಕೆ ವಿರೋಧಿಗಳ ಒಗಟ್ಟೇ ಲಗಾಮು

ಬೈಲಹೊಂಗಲ: ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕ್ಷೇತ್ರದಲ್ಲಿ ಪಕ್ಷೇತರರಾಗಿ ಕಣಕ್ಕಿಳಿದಿದ್ದ ಜಗದೀಶ ಮೆಟಗುಡ್ಡ ಅವರು 41, 918 ಮತಗಳನ್ನು ಗಳಿಸುವ ಮೂಲಕ ಎರಡನೇ ಸ್ಥಾನದಲ್ಲಿದ್ದಾರೆ. ಈ ಕ್ಷೇತ್ರದಿಂದ ಮಹಾಂತೇಶ್‌ ಕೌಜಲಗಿ ಅವರು 47 040 ಮತಗಳನ್ನು ತಮ್ಮದಾಗಿಸಿಕೊಳ್ಳವ ಮೂಲಕ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಜೆಡಿಎಸ್‌ನ ವಿಶ್ವನಾಥ ಪಾಟೀಲ್‌ ಮೂರನೇ ಸ್ಥಾನದಲ್ಲಿದ್ದಾರೆ.

ಸವದತ್ತಿ ಎಲ್ಲಮ್ಮ: ಬೆಳಗಾವಿ ಜಿಲ್ಲೆಯ ಸವದತ್ತಿ ಎಲ್ಲಮ್ಮ ಕ್ಷೇತ್ರದಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿರುವ ಆನಂದ್‌ ಛೋಪ್ರಾ ಅವರು 56 189 ಮತಗಳನ್ನು ಗಳಿಸಿ ಎರಡನೇ ಸ್ಥಾನದಲ್ಲಿದ್ದಾರೆ. ಈ ಕ್ಷೇತ್ರದಿಂದ ಕಣಕ್ಕಿಳಿದಿರುವ ಬಿಜೆಪಿಯ ಆನಂದ ಮಾಮನಿ 62 480 ಮತಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಕಾಂಗ್ರೆಸ್‌ನ ವಿಶ್ವಾಸ್‌ ವೈದ್ಯ ಅವರು ಮೂರನೇ ಸ್ಥಾನದಲ್ಲಿದ್ದಾರೆ.

ಚಾಣಕ್ಯಪುರಿ | ದೇವೇಗೌಡ ಮತ್ತು ಸಿದ್ದರಾಮಯ್ಯ ಗುರು-ಶಿಷ್ಯರಲ್ಲ!
ಕೋರ್ಟ್‌ ಕದನ ಗೆದ್ದ ತಮಿಳುನಾಡು ಸಿಎಂ ಪಳನಿಸ್ವಾಮಿ ಮುಂದಿರುವ ಸವಾಲುಗಳೇನು?
ದಕ್ಷಿಣದಲ್ಲಿ ಬಿಜೆಪಿಗೆ ಬಾಗಿಲು ಮುಚ್ಚುವ ಗೌಡರ ಹೇಳಿಕೆ ನೆನಪಿಸಿದ ಕಹಿಸತ್ಯ
Editor’s Pick More