ವಿಡಿಯೋ | ಬೀದರ್‌ನಲ್ಲಿ ಜನಧ್ವನಿ ಮೂಲಕ ಚುನಾವಣಾ ಪ್ರಚಾರಕ್ಕೆ ಕಾಂಗ್ರೆಸ್ ಸಿದ್ಧ

ದಿನೇಶ್‌ ಗುಂಡೂರಾವ್‌ ಹಾಗೂ ಈಶ್ವರ್ ಖಂಡ್ರೆ ಅವರು ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಪಕ್ಷದ ವತಿಯಿಂದ ಆಯೋಜಿಸಲಾಗಿರುವ ಜನಧ್ವನಿ ಹಾಗೂ ಅಭಿನಂದನಾ ಕಾರ್ಯದಲ್ಲಿ ಪಾಲ್ಗೊಳ್ಳಲಿದ್ದಾರೆ

ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹಾಗೂ ಕಾರ್ಯಧ್ಯಕ್ಷ ಈಶ್ವರ್ ಖಂಡ್ರೆ ಅವರು ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಬೀದರ್ನ ನೆಹರೂ ಕ್ರೀಡಾಂಗಣದಲ್ಲಿ ಸೋಮವಾರ (ಆ.13) ಆಯೋಜಿಸಲಾಗಿರುವ ಜನಧ್ವನಿ ಹಾಗೂ ಕೆಪಿಸಿಸಿ ಅಭಿನಂದನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಸೋಮವಾರ ಚಾಲನೆ ನೀಡಲಿದೆ. ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹಾಗೂ ಕಾರ್ಯಧ್ಯಕ್ಷ ಈಶ್ವರ್ ಖಂಡ್ರೆ ಅವರು ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಪಕ್ಷದ ವತಿಯಿಂದ ಆಯೋಜಿಸಲಾಗಿರುವ ಜನಧ್ವನಿ ಹಾಗೂ ಅಭಿನಂದನಾ ಕಾರ್ಯದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಸಂಬಂಧ ನಗರದಲ್ಲಿ ಭರದಿಂದ ಸಿದ್ಧತೆ ನಡೆದಿದೆ.

ಈಗಾಗಲೇ ಕೆಪಿಸಿಸಿ ವತಿಯಿಂದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಒಂದು ಸುತ್ತಿನ ಚರ್ಚೆ ನಡೆದಿದೆ ಎನ್ನಲಾಗಿದೆ. ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ ಎಂದು ಕೆಪಿಸಿಸಿ ಮೂಲಗಳು ತಿಳಿಸಿವೆ, ಕಾಂಗ್ರೆಸ್‌-ಜೆಡಿಎಸ್‌ ಒಟ್ಟಾಗಿ ಲೋಕಸಭಾ ಚುನಾವಣೆ ಎದುರಿಸುವ ಸಾಧ್ಯತೆ ಇರುವುದರಿಂದ ಕೆಲವು ಸ್ಥಾನಗಳನ್ನು ಜೆಡಿಎಸ್‌ಗೆ ಬಿಟ್ಟುಕೊಡಬೇಕಾಗಲಿದೆ. ಈ ವಿಚಾರದ ಕುರಿತು ರಾಹುಲ್‌ ರಾಜ್ಯ ಭೇಟಿಯ ಸಂದರ್ಭದಲ್ಲಿ ಚರ್ಚೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ : ಅಳೆದು ತೂಗಿ ರಚಿಸಿದ ರಾಹುಲ್ ನೇತೃತ್ವದ ಸಿಡಬ್ಲ್ಯುಸಿ ಸಾರಿರುವ ಸಂದೇಶವೇನು?

ಬಿಜೆಪಿಯು ರಾಜ್ಯಧ್ಯಕ್ಷ ಬಿ ಎಸ್‌ ಯಡಿಯೂರಪ್ಪ ನೇತೃತ್ವದಲ್ಲಿ ಪ್ರವಾಸ ಆರಂಭಿಸಿದೆ. ಶಾಸಕರಾದ ಕೆ ಎಸ್‌ ಈಶ್ವರಪ್ಪ ಹಾಗೂ ಜಗದೀಶ್‌ ಶೆಟ್ಟರ್‌ ನೇತೃತ್ವದ ತಂಡಗಳೂ ಈಗಾಗಲೇ ವಿವಿಧ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿವೆ. ಆದರೆ, ಬಿಜೆಪಿಯ ರಾಷ್ಟ್ರೀಯ ನಾಯಕರು ಈ ಸಂಬಂಧ ಅಖಾಡಕ್ಕೆ ಇಳಿದಿಲ್ಲ. ಕಳೆದ ತಿಂಗಳು ಪ್ರಧಾನ ನರೇಂದ್ರ ಮೋದಿ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಕಾರ್ಯಕ್ರಮ ಆಯೋಜಿಸುವ ಚರ್ಚೆಯಾಗಿದ್ದವು. ಅಲ್ಲದೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ಜುಲೈ ಕೊನೆಯ ವಾರದಲ್ಲಿ ರಾಜ್ಯ ಭೇಟಿ ಕೈಗೊಳ್ಳುತ್ತಾರೆ ಎನ್ನಲಾಗಿತ್ತು. ಈ ಎಲ್ಲ ಬೆಳವಣಿಗೆಗಳ ನಡುವೆ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರ ರಾಜ್ಯ ಪ್ರವಾಸವು ಕುತೂಹಲ ಮೂಡಿಸಿದೆ.

ಚಾಣಕ್ಯಪುರಿ | ದೇವೇಗೌಡ ಮತ್ತು ಸಿದ್ದರಾಮಯ್ಯ ಗುರು-ಶಿಷ್ಯರಲ್ಲ!
ಕೋರ್ಟ್‌ ಕದನ ಗೆದ್ದ ತಮಿಳುನಾಡು ಸಿಎಂ ಪಳನಿಸ್ವಾಮಿ ಮುಂದಿರುವ ಸವಾಲುಗಳೇನು?
ದಕ್ಷಿಣದಲ್ಲಿ ಬಿಜೆಪಿಗೆ ಬಾಗಿಲು ಮುಚ್ಚುವ ಗೌಡರ ಹೇಳಿಕೆ ನೆನಪಿಸಿದ ಕಹಿಸತ್ಯ
Editor’s Pick More