ಸಂಪುಟ ವಿಸ್ತರಣೆ, ನಿಗಮ ಮಂಡಳಿಗೆ ಅಧ್ಯಕ್ಷರ ನೇಮಕಕ್ಕೆ ಸಮನ್ವಯ ಸಮಿತಿ ಅಸ್ತು

ಎರಡು ತಿಂಗಳ ಬಳಿಕ ನಡೆದ ಸಮನ್ವಯ ಸಮಿತಿಯಲ್ಲಿ ಸಂಪುಟ ವಿಸ್ತರಣೆ ಹಾಗೂ ನಿಗಮ, ಮಂಡಳಿಗೆ ಅಧ್ಯಕ್ಷರ ನೇಮಕಕ್ಕೆ ಒಪ್ಪಿಗೆ ನೀಡಲಾಗಿದೆ. ಅನ್ನಭಾಗ್ಯ ಯೋಜನೆಯಡಿ ನೀಡಲಾಗುತ್ತಿದ್ದ ಅಕ್ಕಿ ವಿತರಣೆಯಲ್ಲಿ ಯಥಾಸ್ಥಿತಿ ಕಾಪಾಡುವಂತೆ ಕುಮಾರಸ್ವಾಮಿ ಅವರಿಗೆ ತಾಕೀತು ಮಾಡಲಾಗಿದೆ

ಬಹುನಿರೀಕ್ಷಿತ ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಾಗೂ ನಿಗಮ ಮತ್ತು ಮಂಡಳಿಗೆ ಅಧ್ಯಕ್ಷರ ನೇಮಕಕ್ಕೆ ಚಾಲನೆ, ಅನ್ನಭಾಗ್ಯ ಯೋಜನೆಯಡಿ ನೀಡಲಾಗುತ್ತಿರುವ ಅಕ್ಕಿಯನ್ನು ೫ಕ್ಕೆ ಬದಲಾಗಿ ೭ ಕೆ ಜಿ ನೀಡಲು ಸಿದ್ದರಾಮಯ್ಯ ನೇತೃತ್ವದಲ್ಲಿ ಶುಕ್ರವಾರ ನಡೆದ ಸಮನ್ವಯ ಸಮಿತಿಯು ಒಪ್ಪಿಗೆ ನೀಡಿದೆ. ಕಾಂಗ್ರೆಸ್‌ನಲ್ಲಿ ಹಲವು ಹಿರಿಯ ನಾಯಕರು ಸಂಪುಟ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ. ಸಿದ್ದರಾಮಯ್ಯ ಅವರು ಸೆಪ್ಟೆಂಬರ್ ೩ರಿಂದ ೧೦ ದಿನಗಳ ಕಾಲ ಯುರೋಪ್‌ ಪ್ರವಾಸ ಕೈಗೊಳ್ಳಲಿದ್ದಾರೆ. ಪ್ರವಾಸದಿಂದ ಮರಳಿದ ನಂತರ ಸಂಪುಟ ವಿಸ್ತರಣೆ ನಡೆಯಲಿದೆ. ಕಾಂಗ್ರೆಸ್‌ ಪಾಲಿನಲ್ಲಿ ಇನ್ನೂ ೬ ಸಚಿವ ಸ್ಥಾನ ಖಾಲಿ ಇದ್ದು, ಜೆಡಿಎಸ್‌ ಒಂದು ಸಚಿವ ಸ್ಥಾನವನ್ನು ಉಳಿಸಿಕೊಂಡಿದೆ.

ಎರಡು ತಿಂಗಳ ಬಳಿಕ ನಡೆದ ಸಮನ್ವಯ ಸಮಿತಿ ಸಭೆಯಲ್ಲಿ ಅಧಿಕಾರಿಗಳ ವರ್ಗಾವಣೆಗೆ ಸಂಬಂಧವೂ ಚರ್ಚೆ ನಡೆದಿದೆ. ಲೋಕೋಪಯೋಪಯೋಗಿ ಸಚಿವ ಎಚ್‌ ಡಿ ರೇವಣ್ಣ ಅವರು ತಮಗೆ ಸಂಬಂಧಪಡದ ಇಲಾಖೆಯಲ್ಲೂ ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂಬ ಆರೋಪದ ಹಿನ್ನೆಲೆಯುಲ್ಲಿ ಈ ಕುರಿತು ಚರ್ಚೆಯಾಗಿದೆ ಎನ್ನಲಾಗಿದೆ. ಅಧಿಕಾರಿಗಳ ವರ್ಗಾವಣೆ ಮಾಡುವ ಸಂದರ್ಭ ನಿರ್ಮಾಣವಾದರೆ ಸಂಬಂಧಪಟ್ಟ ಸಚಿವರ ಗಮನಕ್ಕೆ ತಂದೇ ವರ್ಗಾವಣೆ ಮಾಡಬೇಕು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಸಮಿತಿಯು ಎಚ್ಚರಿಸಿದೆ.

ಇದನ್ನೂ ಓದಿ : ಸಮ್ಮಿಶ್ರ ಸರ್ಕಾರ ಸುಭದ್ರಗೊಳಿಸಲು ಮೂರು ಸೂತ್ರ ಹೊಸೆದ ಸಮನ್ವಯ ಸಮಿತಿ

ಇನ್ನು, “ಅನ್ನಭಾಗ್ಯ ಯೋಜನೆಯಡಿ ನೀಡಲಾಗುವ ಅಕ್ಕಿ ಕಡಿತ ಮಾಡುವುದರಿಂದ ೨ ಸಾವಿರ ಕೋಟಿ ರುಪಾಯಿ ಉಳಿತಾಯವಾಗಲಿದೆ; ಇದನ್ನು ವಿವಿಧ ಕಾರ್ಯಕ್ರಮಗಳಿಗೆ ಬಳಸಬಹುದು,” ಎಂದು ಕುಮಾರಸ್ವಾಮಿ ಅವರು ಸಮಿತಿಯ ಸದಸ್ಯರ ಮನವೊಲಿಸಲು ಯತ್ನಿಸಿದ್ದಾರೆ. ಆದರೆ, ಯಾವುದೇ ಕಾರಣಕ್ಕೂ ಅಕ್ಕಿ ಕಡಿತ ನಿರ್ಣಯವನ್ನು ಒಪ್ಪಲಾಗದು ಎಂದು ಸಿದ್ದರಾಮಯ್ಯ ಸ್ಪಷ್ಟವಾಗಿ ಹೇಳಿದ್ದಾರೆ ಎಂದು ತಿಳಿದುಬಂದಿದೆ. ಸಭೆಯ ಬಳಿಕ ಮಾತನಾಡಿದ ಸಿದ್ದರಾಮಯ್ಯ, “ಸಮ್ಮಿಶ್ರ ಸರ್ಕಾರವು ಐದು ವರ್ಷ ಪೂರ್ಣಗೊಳಿಸಲಿದೆ. ನಾನು ಮತ್ತೆ ಮುಖ್ಯಮಂತ್ರಿಯಾಗುವ ವಿಚಾರವನ್ನು ಅನಗತ್ಯವಾಗಿ ವ್ಯಾಖ್ಯಾನಿಸಲಾಗುತ್ತಿದೆ. ಜನರ ಆಗ್ರಹಕ್ಕೆ ಪೂರಕವಾಗಿ ಮಾತನಾಡಿದ್ದು, ಅದಕ್ಕೆ ಅನಗತ್ಯ ಪ್ರಚಾರ ನೀಡುವ ಅಗತ್ಯವಿಲ್ಲ,” ಎಂದು ಹೇಳಿದ್ದಾರೆ.

ಚಾಣಕ್ಯಪುರಿ | ದೇವೇಗೌಡ ಮತ್ತು ಸಿದ್ದರಾಮಯ್ಯ ಗುರು-ಶಿಷ್ಯರಲ್ಲ!
ಕೋರ್ಟ್‌ ಕದನ ಗೆದ್ದ ತಮಿಳುನಾಡು ಸಿಎಂ ಪಳನಿಸ್ವಾಮಿ ಮುಂದಿರುವ ಸವಾಲುಗಳೇನು?
ದಕ್ಷಿಣದಲ್ಲಿ ಬಿಜೆಪಿಗೆ ಬಾಗಿಲು ಮುಚ್ಚುವ ಗೌಡರ ಹೇಳಿಕೆ ನೆನಪಿಸಿದ ಕಹಿಸತ್ಯ
Editor’s Pick More