ಬಾಲಕಿ ಮೇಲಿನ ಅತ್ಯಾಚಾರ, ಕೊಲೆಗೆ ಖಂಡನೆ; ಬೀದರ್‌ನಲ್ಲಿ ಪ್ರತಿಭಟನೆ

ವಿಜಯಪುರದಲ್ಲಿ ನಡೆದ ದಲಿತ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಖಂಡಿಸಿ ಬೀದರ್‌ನಲ್ಲಿ ದಲಿತ ಸಂಘರ್ಷ ಸಮಿತಿಯ ಮುಖಂಡರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ನಗರದ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ನೂರಾರು ಮಂದಿ ರಸ್ತೆ ತಡೆ ನಡೆಸಿದರು

ವಿಜಯಪುರದಲ್ಲಿ ನಡೆದ ದಲಿತ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಖಂಡಿಸಿ ಬೀದರ್‌ನಲ್ಲಿ ದಲಿತ ಸಂಘರ್ಷ ಸಮಿತಿಯ ಮುಖಂಡರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ನಗರದ ಅಂಬೇಡ್ಕರ್ ವೃತ್ತದ ಬಳಿಗೆ ಜಮಾಯಿಸಿದ ನೂರಾರು ಮಂದಿ ಮಹಿಳೆಯರು, ಮಕ್ಕಳು ಹಾಗೂ ದಲಿತ ಸಮುದಾಯದ ಮುಖಂಡರು, ರಸ್ತೆ ತಡೆ ನಡೆಸಿದರು.

ಕೇಂದ್ರ ದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಸರ್ಕಾರಕ್ಕೆ ಹಿಂದುಳಿದವರ ಬಗ್ಗೆ ಕಾಳಜಿ ಇದ್ದರೆ, ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಕಾಮಾಂಧರನ್ನು ಕೂಡಲೇ ಗಲ್ಲಿಗೇರಿಸಬೇಕು ಎಂದು ಪ್ರತಿಭಟನಾನಿರತರು ಆಗ್ರಹಿಸಿದರು. ಇದೇ ವೇಳೆ ಪ್ರಧಾನಿಗೆ ಪತ್ರವನ್ನೂ ಬರೆಯಲಾಯಿತು.

ಇದೇ ವೇಳೆ ಸಂವಿಧಾನ ಬದಲಾವಣೆ ಕುರಿತು ಹೇಳಿಕೆ ನೀಡಿದ್ದ ಸಚಿವ ಅನಂತಕುಮಾರ ಹೆಗಡೆ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ಆಗ್ರಹಿಸಿದ ಪ್ರತಿಭಟನಾಕಾರರು, ಅನಂತ್ ಕುಮಾರ್ ಹೆಗಡೆ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಅನಂತ್ ಕುಮಾರ್ ಹೆಗಡೆ ಅವರನ್ನು ಸಚಿವ ಸಂಪುಟದಿಂದ ಕೈಬಿಡುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ನಿವೃತ್ತಿ ವೇತನಕ್ಕೆ ಆಗ್ರಹಿಸಿ ಸೀಮೆಎಣ್ಣೆ ವಿತರಕರಿಂದ ಬೀದರ್‌ನಲ್ಲಿ ಹೋರಾಟ 
ಅನಂತ್ ಕುಮಾರ್ ಹೆಗಡೆ ರಾಜಿನಾಮೆಗೆ ಆಗ್ರಹಿಸಿ ಬೀದರ್‌ನಲ್ಲಿ ಪ್ರತಿಭಟನೆ
ವಿಜಯಪುರದ ಬಾಲಕಿ ಮೇಲಿನ ಅತ್ಯಾಚಾರ, ಕೊಲೆ ಖಂಡಿಸಿ ಕಲಬುರ್ಗಿ ಬಂದ್ 
Editor’s Pick More