ಭೀಮಾ ಕೋರೆಗಾಂವ್‌ ಗಲಭೆ ಖಂಡಿಸಿ ದಲಿತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ

ಭೀಮಾ ಕೋರೆಗಾಂವ್‌ನಲ್ಲಿ ದಲಿತರ ಮೇಲೆ ನಡೆದ ದಾಳಿಗೆ ಖಂಡನೆ ವ್ಯಕ್ತಪಡಿಸಿ ಹಾಗೂ ದೇಶಾದ್ಯಂತ ದಲಿತರ ಮೇಲೆ ನಡೆಯುತ್ತಿರುವ ಅತ್ಯಾಚಾರ, ಕೊಲೆ ಖಂಡಿಸಿ ಬೀದರ್‌ನಲ್ಲಿ ದಲಿತ ಸಂಘಟನೆಗಳ ಒಕ್ಕೂಟದಿಂದ ಗುರುವಾರ ಬೃಹತ್‌ ಪ್ರತಿಭಟನೆ ಮಾಡಲಾಯಿತು

ಮಹಾರಾಷ್ಟ್ರದ ಭೀಮಾ ಕೋರೆಗಾಂವ್‌ ವಿಜಯೋತ್ಸವ ಸಂದರ್ಭದಲ್ಲಿ ದಲಿತರ ಮೇಲೆ ನಡೆದ ದಾಳಿ ಖಂಡಿಸಿ ಹಾಗೂ ರಾಜ್ಯ ಸೇರಿ ದೇಶದ ವಿವಿಧೆಡೆ ದಲಿತರ ಮೇಲೆ ನಡೆಯುತ್ತಿರುವ ಅತ್ಯಾಚಾರ, ಕೊಲೆ, ಸಂವಿಧಾನದ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ಖಂಡಿಸಿ ಬೀದರ್‌ನಲ್ಲಿ ದಲಿತ ಸಂಘಟನೆಗಳ ಒಕ್ಕೂಟದಿಂದ ಗುರುವಾರ ಬೃಹತ್‌ ಪ್ರತಿಭಟನೆ ನಡೆಸಲಾಯಿತು.

ನಗರದ ಅಂಬೇಡ್ಕರ್‌ ವೃತ್ತದಿಂದ ಡಿ ಸಿ ಕಚೇರಿಯವರೆಗೆ ಪ್ರತಿಭಟನೆ ನಡೆಸಿದ ದಲಿತ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಡಿ ಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಮನವಿ ಪತ್ರ ಪಡೆಯಲು ಹೆಚ್ಚುವರಿ ಡಿ ಸಿ ಷಣ್ಮುಖ ಅವರು ಸ್ಥಳಕ್ಕೆ ಆಗಮಿಸಿದರೂ ಜಿಲ್ಲಾಧಿಕಾರಿ ಕೈಗೆ ಮಾತ್ರ ಮನವಿ ಪತ್ರ ನೀಡುವುದಾಗಿ ಪ್ರತಿಭಟನಾಕಾರರು ಪಟ್ಟು ಹಿಡಿದರು.

ರಾಷ್ಟ್ರಪತಿಗಳಿಗೆ ಬರೆದ ಮನವಿ ಪತ್ರದಲ್ಲಿ "ಭೀಮಾ ಕೋರೆಗಾಂವ್‌ ವಿಜೋತ್ಸವದಲ್ಲಿ ದಲಿತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿರುವುದನ್ನು ಸಹಿಸದವರು ದಾಳಿ ಮಾಡಿ, ಒಬ್ಬರ ಸಾವಿಗೂ ಕಾರಣರಾಗಿದ್ದಾರೆ. ಮಹಾರಾಷ್ಟ್ರದ ಮುಖ್ಯಮಂತ್ರಿ ಫಡ್ನವೀಸ್‌ ಅವರ ಕುಮ್ಮಕ್ಕಿನಿಂದ ಈ ಘಟನೆ ನಡೆದಿದೆ, ಇನ್ನು ದೇಶದಾದ್ಯಂತ ದಲಿತರ ಮೇಲೆ ನಿರಂತರ ಶೋಷಣೆ ನಡೆಯುತ್ತಿದೆ. ಇದನ್ನು ತಡೆಗಟ್ಟಬೇಕು ಮತ್ತು ಸಂವಿಧಾನ ಬದಲಿಕೆ ಹೇಳಿಕೆ ನೀಡಿದ ಸಚಿವ ಅನಂತ್‌ಕುಮಾರ್‌ ಹೆಗಡೆ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು,” ಎಂದು ಮನವಿ ಮಾಡಿ ಪತ್ರ ಬರೆಯಲಾಗಿದೆ.

ದೇಶಾದ್ಯಂತ ಬ್ಯಾಂಕ್ ನೌಕರರ ಮುಷ್ಕರ, ಬ್ಯಾಂಕ್ ಸೇವೆಯಲ್ಲಿ ವ್ಯತ್ಯಯ
ನಿವೃತ್ತಿ ವೇತನಕ್ಕೆ ಆಗ್ರಹಿಸಿ ಸೀಮೆಎಣ್ಣೆ ವಿತರಕರಿಂದ ಬೀದರ್‌ನಲ್ಲಿ ಹೋರಾಟ 
ಬಾಲಕಿ ಮೇಲಿನ ಅತ್ಯಾಚಾರ, ಕೊಲೆಗೆ ಖಂಡನೆ; ಬೀದರ್‌ನಲ್ಲಿ ಪ್ರತಿಭಟನೆ
Editor’s Pick More