ಭೀಮಾ ಕೋರೆಗಾಂವ್ ಘಟನೆಗೆ ಖಂಡನೆ, ಬಾಗಲಕೋಟೆ ಬಂದ್‌ಗೆ ಉತ್ತಮ ಪ್ರತಿಕ್ರಿಯೆ

ವಿಜಯಪುರದಲ್ಲಿ ನಡೆದ ಬಾಲಕಿ ಅತ್ಯಾಚಾರ, ಕೊಲೆ ಹಾಗೂ ಕೋರೆಗಾಂವ್ ದಲಿತರ ಮೇಲಿನ ಹಲ್ಲೆ ಖಂಡಿಸಿ ವಿವಿಧ ಸಂಘಟನೆಗಳು ಕರೆ ನೀಡಿದ್ದ ಬಾಗಲಕೋಟೆ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಲಾಯಿತು

ವಿಜಯಪುರದಲ್ಲಿ ನಡೆದ ಬಾಲಕಿ ಅತ್ಯಾಚಾರ, ಕೊಲೆ ಹಾಗೂ ಕೋರೆಗಾಂವ್ ನಲ್ಲಿನ ದಲಿತರ ಮೇಲಿನ ಹಲ್ಲೆ ಖಂಡಿಸಿ ವಿವಿಧ ಸಂಘಟನೆಗಳು ಶನಿವಾರ ಕರೆ ನೀಡಿದ್ದ ಬಾಗಲಕೋಟೆ ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಬಾಗಲಕೋಟೆ ನಗರದ ಬಸವೇಶ್ವರ ವೃತ್ತದಲ್ಲಿ ಸೇರಿದ ನೂರಾರು ಮಂದಿ ಪ್ರತಿಭಟನಾಕಾರರು ಟೈರ್‌ಗಳಿಗೆ ಬೆಂಕಿ ಹಚ್ಚಿ, ಘಟನೆ ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದರು. ಆದರೆ, ಬಂದ್ ಹಿನ್ನೆಲೆಯಲ್ಲಿ ಸರ್ಕಾರಿ ಬಸ್ ಸೇವೆ ಕೂಡ ಸ್ಥಗಿತಗೊಂಡಿದ್ದರಿಂದ ವಿದ್ಯಾರ್ಥಿಗಳು ಪರದಾಡುವಂತಾಯಿತು. ಬಂದ್ ಹಿನ್ನೆಲೆಯಲ್ಲಿ ನಗರದಲ್ಲಿ ಅಂಗಡಿಮುಗ್ಗಟ್ಟುಗಳು ಬಂದ್ ಆಗಿ, ವ್ಯಾಪಾರ ವಹಿವಾಟು ಸ್ಧಗಿತಗೊಂಡಿತ್ತು. ದಲಿತ ಸಂಘಟನೆಗಳು ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದವು.

ದೇಶಾದ್ಯಂತ ಬ್ಯಾಂಕ್ ನೌಕರರ ಮುಷ್ಕರ, ಬ್ಯಾಂಕ್ ಸೇವೆಯಲ್ಲಿ ವ್ಯತ್ಯಯ
ನಿವೃತ್ತಿ ವೇತನಕ್ಕೆ ಆಗ್ರಹಿಸಿ ಸೀಮೆಎಣ್ಣೆ ವಿತರಕರಿಂದ ಬೀದರ್‌ನಲ್ಲಿ ಹೋರಾಟ 
ಬಾಲಕಿ ಮೇಲಿನ ಅತ್ಯಾಚಾರ, ಕೊಲೆಗೆ ಖಂಡನೆ; ಬೀದರ್‌ನಲ್ಲಿ ಪ್ರತಿಭಟನೆ
Editor’s Pick More