ವಿಡಿಯೋ | ಸಿಎಂ ತೆರಳುತ್ತಿದ್ದ ಕಾರನ್ನು ಅಡ್ಡಗಟ್ಟಿದ ಬಿಜೆಪಿ ಕಾರ್ಯಕರ್ತರು

ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲು ಶಿವಮೊಗ್ಗಕ್ಕೆ ಭೇಟಿ ನೀಡಿದ್ದ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಕಾರ್ಯಕರ್ತರು ತಡೆಯೊಡ್ಡಲು ಪ್ರಯತ್ನಿಸಿದರು. ನಗರದ ಕುವೆಂಪು ರಸ್ತೆಯಲ್ಲಿ ತೆರಳುತ್ತಿದ್ದ ವೇಳೆ ಕಾರಿನೆಡೆಗೆ ನುಗ್ಗಿದ ಕಾರ್ಯಕರ್ತರು, ಕಪ್ಪು ಬಾವುಟ ಪ್ರದರ್ಶಿಸಿ ಘೋಷಣೆ ಕೂಗಿದರು

ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲು ಶನಿವಾರ ಶಿವಮೊಗ್ಗಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಕಾರ್ಯಕರ್ತರು ಕಪ್ಪುಪಟ್ಟಿ ಪ್ರದರ್ಶಿಸಿದ ಘಟನೆ ನಡೆಯಿತು. ಪೊಲೀಸ್ ಭದ್ರತೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು, ನಗರದ ಕುವೆಂಪು ರಸ್ತೆಯಲ್ಲಿ ತೆರಳುತ್ತಿದ್ದ ವೇಳೆ ಏಕಾಏಕಿ ಕಾರಿನೆಡೆಗೆ ನುಗ್ಗಿದ ಬಿಜೆಪಿ ಕಾರ್ಯಕರ್ತರು, ಕಪ್ಪು ಬಾವುಟ ಪ್ರದರ್ಶಿಸಿ ಘೋಷಣೆ ಕೂಗಿದರು. ಇದರಿಂದ ಕೆಲಕಾಲ ಆತಂಕದ ಪರಿಸ್ಥಿತಿ ನಿರ್ಮಾಣವಾಗಿತ್ತು.

ತಕ್ಷಣವೇ ಕಾರನ್ನು ನಿಲ್ಲಿಸಿದ ಬೆಂಗಾವಲು ಪಡೆ ಪೊಲೀಸರು, ರಸ್ತೆಗೆ ನುಗ್ಗಿದ್ದ ಬಿಜೆಪಿ ಕಾರ್ಯಕರ್ತರ ಮನವೊಲಿಸಲು ಯತ್ನಿಸಿದರೂ ಕಾರ್ಯಕರ್ತರು 'ಹಿಂದೂ ವಿರೋಧಿ ಸರ್ಕಾರ' ಎಂದು ಘೋಷಣೆ ಕೂಗಲು ಆರಂಭಿಸಿದರು. ನಂತರ ಪೊಲೀಸರು 20ಕ್ಕೂ ಹೆಚ್ಚು ಮಂದಿ ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದರು.

ದೇಶಾದ್ಯಂತ ಬ್ಯಾಂಕ್ ನೌಕರರ ಮುಷ್ಕರ, ಬ್ಯಾಂಕ್ ಸೇವೆಯಲ್ಲಿ ವ್ಯತ್ಯಯ
ನಿವೃತ್ತಿ ವೇತನಕ್ಕೆ ಆಗ್ರಹಿಸಿ ಸೀಮೆಎಣ್ಣೆ ವಿತರಕರಿಂದ ಬೀದರ್‌ನಲ್ಲಿ ಹೋರಾಟ 
ಬಾಲಕಿ ಮೇಲಿನ ಅತ್ಯಾಚಾರ, ಕೊಲೆಗೆ ಖಂಡನೆ; ಬೀದರ್‌ನಲ್ಲಿ ಪ್ರತಿಭಟನೆ
Editor’s Pick More