ಕೊಪ್ಪಳದಲ್ಲಿ ರಾಹುಲ್ ಗಾಂಧಿಗೆ ಮಾದಿಗರ ಪ್ರತಿಭಟನೆಯ ಬಿಸಿ, ಒಳಮೀಸಲಿಗೆ ಆಗ್ರಹ

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜಿಲ್ಲಾ ಪ್ರವಾಸದ ವೇಳೆ ಎಜೆ ಸದಾಶಿವ ಆಯೋಗ ವರದಿಗೆ ಆಗ್ರಹಿಸಿ ಕೊಪ್ಪಳದಲ್ಲಿ ಮಾದಿಗ ಸಮುದಾಯದ ಯುವಕರು ಪ್ರತಿಭಟನೆ ನಡೆಸಿದ್ದರಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದರು

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜಿಲ್ಲಾ ಪ್ರವಾಸದ ವೇಳೆ ಎಜೆ ಸದಾಶಿವ ಆಯೋಗ ವರದಿಗೆ ಆಗ್ರಹಿಸಿ ಕೊಪ್ಪಳದಲ್ಲಿ ಮಾದಿಗ ಸಮುದಾಯದ ಯುವಕರು ಪ್ರತಿಭಟನೆ ನಡೆಸಿದರು.

ರಾಹುಲ್ ಗಾಂಧಿ ಕಾರ್ಯಕ್ರಮದ ವೇದಿಕೆ ಬಳಿ ಜಮಾಯಿಸಿದ ನೂರಾರು ಮಂದಿ ಮಾದಿಗ ಸಮುದಾಯದ ಯುvಕರು, ಒಳಮೀಸಲಾತಿಗೆ ಆಗ್ರಹಿಸಿ ಘೋಷಣೆಗಳನ್ನು ಕೂಗಿದರು. ಈ ವೇಳೆ ಆತಂಕದ ವಾತಾವರಣ ನಿರ್ಮಾಣವಾಯಿತು. ವೇದಿಕೆಯಲ್ಲಿ ಸಿಎಂ ಸಿದ್ದರಾಮಯ್ಯ, ಜಿ ಪರಮೇಶ್ವರ, ಮಲ್ಲಿಕಾರ್ಜುನ ಖರ್ಗೆ, ಡಿ ಕೆ ಶಿವಕುಮಾರ, ಕೆ ಸಿ ವೇಣುಗೋಪಾಲ ಸೇರಿದಂತೆ ಹಲವು ನಾಯಕರು ಕೂಡ ಉಪಸ್ಥಿತರಿದ್ದರು. ಕೂಡಲೇ ಮದ್ಯಪ್ರವೇಶಿಸಿದ ಪೊಲೀಸರು, ಪ್ರತಿಭಟನಾಕಾರರನ್ನು ಚದುರಿಸಿದರು.

ದೇಶಾದ್ಯಂತ ಬ್ಯಾಂಕ್ ನೌಕರರ ಮುಷ್ಕರ, ಬ್ಯಾಂಕ್ ಸೇವೆಯಲ್ಲಿ ವ್ಯತ್ಯಯ
ನಿವೃತ್ತಿ ವೇತನಕ್ಕೆ ಆಗ್ರಹಿಸಿ ಸೀಮೆಎಣ್ಣೆ ವಿತರಕರಿಂದ ಬೀದರ್‌ನಲ್ಲಿ ಹೋರಾಟ 
ಬಾಲಕಿ ಮೇಲಿನ ಅತ್ಯಾಚಾರ, ಕೊಲೆಗೆ ಖಂಡನೆ; ಬೀದರ್‌ನಲ್ಲಿ ಪ್ರತಿಭಟನೆ
Editor’s Pick More