ಮೀಸಲಾತಿಗೆ ವಿರೋಧ; ಒಡಿಶಾ, ಉ.ಪ್ರದೇಶದಲ್ಲಿ ಹಿಂಸಾರೂಪಕ್ಕೆ ತಿರುಗಿದ ಬಂದ್

ಶಿಕ್ಷಣ ಮತ್ತು ಉದ್ಯೋಗದಲ್ಲಿ ಜಾತಿ ಆಧಾರಿತ ಮೀಸಲಾತಿ ಕ್ರಮವನ್ನು ವಿರೋಧಿಸಿ ವಿವಿಧ ಸಂಘಟನೆಗಳು ಮಂಗಳವಾರ ನಡೆಸುತ್ತಿರುವ ಭಾರತ್ ಬಂದ್, ಬಿಹಾರ, ಒಡಿಶಾ ಮತ್ತು ಉತ್ತರ ಪ್ರದೇಶದಲ್ಲಿ ಹಿಂಸಾರೂಪಕ್ಕೆ ತಿರುಗಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ

ಶಿಕ್ಷಣ ಮತ್ತು ಉದ್ಯೋಗದಲ್ಲಿ ಜಾತಿ ಆಧಾರಿತ ಮೀಸಲಾತಿ ಕ್ರಮವನ್ನು ವಿರೋಧಿಸಿ ವಿವಿಧ ಸಂಘಟನೆಗಳು ಮಂಗಳವಾರ ನಡೆಸುತ್ತಿರುವ ಭಾರತ್ ಬಂದ್, ಒಡಿಶಾ, ಬಿಹಾರ ಮತ್ತು ಉತ್ತರ ಪ್ರದೇಶದಲ್ಲಿ ಹಿಂಸಾರೂಪಕ್ಕೆ ತಿರುಗಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ. ಬಿಹಾರದ ಅರ್ಹಾದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿದ ಪರಿಣಾಮ ಹಲವು ಮಂದಿ ಗಾಯಗೊಂಡಿದ್ದಾರೆ. ಅರ್ಹಾದಲ್ಲಿ ಪ್ರತಿಭಟನಕಾರರು ರೈಲುಗಳನ್ನು ತಡೆದ ಪರಿಣಾಮವಾಗಿ ರೈಲು ಓಡಾಟದಲ್ಲಿ ವ್ಯತ್ಯಯವಾಗಿದ್ದು, ಮತ್ತೆ ಕೆಲವೆಡೆ ಹಿಂಸಾರೂಪ ಪಡೆದಿದ್ದರಿಂದ ಹಲವು ಮಂದಿ ಗಾಯಗೊಂಡರು.

ಏಪ್ರಿಲ್ 2ರಂದು ದಲಿತ ಸಂಘಟನೆಗಳು ನಡೆಸಿದ ಪ್ರತಿಭಟನೆ ವೇಳೆ 8 ಮಂದಿ ಸಾವನಪ್ಪಿ, ಹಲವು ಮಂದಿ ಗಾಯಗೊಂಡಿದ್ದರಿಂದ ಈ ಬಾರಿ ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಬಿಗಿ ಬಂದೋಬಸ್ತ್ ಕೈಗೊಂಡಿದ್ದು, ರಾಜಸ್ಥಾನ, ಉತ್ತರ ಪ್ರದೇಶ, ಮಧ್ಯಪ್ರದೇಶದಲ್ಲಿ ಸೆಕ್ಷನ್ 144 ಹೇರಲಾಗಿತ್ತು. ಹಲವೆಡೆ ಇಂಟರ್ನೆಟ್ ಸೇವೆಗಳನ್ನು ಅಮಾನತುಗೊಳಿಸಲಾಗಿದೆ.

ಶಾಲಾ-ಕಾಲೇಜುಗಳಿಗೆ ರಜಾ ಘೋಷಿಸಲಾಗಿದ್ದು, ಕೆಲವೆಡೆ ವಾಹನಗಳಿಗೆ ಬೆಂಕಿ ಹಚ್ಚಿದ ಘಟನೆ ವರದಿಯಾಗಿದೆ. ಹೀಗಾಗಿ ಹಿಂಸಾಚಾರ ತೀವ್ರಗೊಳ್ಳುತ್ತಿರುವ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ ಕೈಗೊಳ್ಳುವಂತೆ ಕೇಂದ್ರ ಗೃಹ ಸಚಿವಾಲಯ ಕಟ್ಟುನಿಟ್ಟಿನ ಸೂಚನೆ ನೀಡಿದ್ದು, ಬಂದೋಬಸ್ತ್ ಹೆಚ್ಚಿಸಲಾಗಿದೆ.

ದೇಶಾದ್ಯಂತ ಬ್ಯಾಂಕ್ ನೌಕರರ ಮುಷ್ಕರ, ಬ್ಯಾಂಕ್ ಸೇವೆಯಲ್ಲಿ ವ್ಯತ್ಯಯ
ನಿವೃತ್ತಿ ವೇತನಕ್ಕೆ ಆಗ್ರಹಿಸಿ ಸೀಮೆಎಣ್ಣೆ ವಿತರಕರಿಂದ ಬೀದರ್‌ನಲ್ಲಿ ಹೋರಾಟ 
ಬಾಲಕಿ ಮೇಲಿನ ಅತ್ಯಾಚಾರ, ಕೊಲೆಗೆ ಖಂಡನೆ; ಬೀದರ್‌ನಲ್ಲಿ ಪ್ರತಿಭಟನೆ
Editor’s Pick More