ಟಿಕೆಟ್ ಹಂಚಿಕೆ; ಶ್ರೀರಾಮುಲು ವಿರುದ್ಧ ತಿಪ್ಪೇಸ್ವಾಮಿ ಬೆಂಬಲಿಗರ ಆಕ್ರೋಶ

ತಿಪ್ಪೇಸ್ವಾಮಿಗೆ ಟಿಕೆಟ್ ಕೊಡಿಸುವುದಾಗಿ ನಂಬಿಸಿ, ಇದೀಗ ತಾವೇ ಮೊಳಕಾಲ್ಮೂರು ಕ್ಷೇತ್ರದಿಂದ ಸ್ಪರ್ಧೆಗೆ ಮುಂದಾಗಿರುವ ಶ್ರೀರಾಮುಲು ನಡೆ, ತಿಪ್ಪೇಸ್ವಾಮಿ ಬೆಂಬಲಿಗರ ಆಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿ ರಾಮುಲಿನ ಬಳ್ಳಾರಿ ನಿವಾಸದ ಮುಂದೆ ಪ್ರತಿಭಟನೆ ನಡೆಸಲು ಬೆಂಬಲಿಗರು ನಿರ್ಧರಿಸಿದ್ದಾರೆ

ಮೊಳಕಾಲ್ಮೂರು ಶಾಸಕ ತಿಪ್ಪೇಸ್ವಾಮಿ ಗೆ ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ತಿಪ್ಪೇಸ್ವಾಮಿ ಬೆಂಬಲಿಗರು ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಬಳ್ಳಾರಿಗೆ ತೆರಳಿ ಶ್ರೀರಾಮುಲು ನಿವಾಸದ ಮುಂದೆ ಪ್ರತಿಭಟನೆಗೆ ಮುಂದಾಗಿರುವ ನೂರಾರು ಮಂದಿ ತಿಪ್ಪೇಸ್ವಾಮಿ ಬೆಂಬಲಿಗರು, ಬುಧವಾರ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಟಿಕೆಟ್ ಕೊಡಿಸುವುದಾಗಿ ಭರವಸೆ ಕೊಟ್ಟು ಇದೀಗ ಶ್ರೀರಾಮುಲು ಮಾತು ತಪ್ಪಿದ್ದಾರೆ ಎಂದು ತಿಪ್ಪೇಸ್ವಾಮಿ ಹಾಗೂ ಬೆಂಬಲಿಗರು ದೂರಿದರು.

ತಿಪ್ಪೇಸ್ವಾಮಿಗೆ ಟಿಕೆಟ್ ಕೊಡಿಸುವುದಾಗಿ ಹೇಳಿದ್ದ ಶ್ರೀರಾಮುಲು, ಇದೀಗ ತಾನೇ ಮೊಳಕಾಲ್ಮೂರು ಕ್ಷೇತ್ರದಿಂದ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿರುವುದು, ತಿಪ್ಪೇಸ್ವಾಮಿ ಬೆಂಬಲಿಗರ ಆಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿ ಬಳ್ಳಾರಿಯ ಶ್ರೀರಾಮುಲು ನಿವಾಸದ ಮುಂದೆ ಪ್ರತಿಭಟನೆಗೆ ಮುಂದಾಗಿರುವ ತಿಪ್ಪೇಸ್ವಾಮಿ ಬೆಂಬಲಿಗರು, 30ಕ್ಕೂ ಹೆಚ್ಚು ಬಸ್ ಗಳಲ್ಲಿ ಬಳ್ಳಾರಿಗೆ ತೆರಳುತ್ತಿದ್ದಾರೆ.

ಒಂದು ವೇಳೆ ತಿಪ್ಪೇಸ್ವಾಮಿಗೆ ಟಿಕೆಟ್ ನೀಡದೆ ಹೋದರೆ ಶ್ರೀರಾಮುಲುಗೆ ಮೊಳಕಾಲ್ಮೂರು ಕ್ಷೇತ್ರದ ಒಳಗೆ ಪ್ರವೇಶಿಸಲು ಬಿಡುವುದಿಲ್ಲ ಎಂದು ತಿಪ್ಪೇಸ್ವಾಮಿ ಬೆಂಬಲಿಗರು ಎಚ್ಚರಿಕೆ ನೀಡಿದ್ದಾರೆ.

ದೇಶಾದ್ಯಂತ ಬ್ಯಾಂಕ್ ನೌಕರರ ಮುಷ್ಕರ, ಬ್ಯಾಂಕ್ ಸೇವೆಯಲ್ಲಿ ವ್ಯತ್ಯಯ
ನಿವೃತ್ತಿ ವೇತನಕ್ಕೆ ಆಗ್ರಹಿಸಿ ಸೀಮೆಎಣ್ಣೆ ವಿತರಕರಿಂದ ಬೀದರ್‌ನಲ್ಲಿ ಹೋರಾಟ 
ಬಾಲಕಿ ಮೇಲಿನ ಅತ್ಯಾಚಾರ, ಕೊಲೆಗೆ ಖಂಡನೆ; ಬೀದರ್‌ನಲ್ಲಿ ಪ್ರತಿಭಟನೆ
Editor’s Pick More