ಕಾಂಗ್ರೆಸ್‌ ಒಡೆದು ಆಳುವ ನೀತಿ ಪ್ರದರ್ಶಿಸುತ್ತಿದೆ: ಅಮಿತ್ ಶಾ ಆರೋಪ

ಕಾಂಗ್ರೆಸ್ ಸರ್ಕಾರ ಒಡೆದು ಆಳುವ ನೀತಿಯನ್ನು ಪ್ರದರ್ಶಿಸುತ್ತಿದೆ ಎಂದು ಆರೋಪಿಸಿ, ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ಗುರುವಾರ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ನಡೆಸಿದರು

ಕಾಂಗ್ರೆಸ್ ಸರ್ಕಾರ ಒಡೆದು ಆಳುವ ನೀತಿಯನ್ನು ಪ್ರದರ್ಶಿಸುತ್ತಿದೆ ಎಂದು ಆರೋಪಿಸಿ, ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ಗುರುವಾರ ಧಾರವಾಡದಲ್ಲಿ ಪ್ರತಿಭಟನೆ ನಡೆಸಿದರು.

ಧಾರವಾಡ ಜಿಲ್ಲಾಧಿಕಾರಿ ಕಚೇರಿ ಧರಣಿ ಕುಳಿತ ಬಿಜೆಪಿ ಮುಖಂಡರು, ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. “ದೇಶದಲ್ಲಿ ಜಾತಿ ಜಾತಿಗಳ ನಡುವೆ ಕಲಹ ಹುಟ್ಟಿಸಿ ಅಧಿಕಾರ ನಡೆಸುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ,” ಎಂದು ಇದೇ ವೇಳೆ ಅಮಿತ್ ಶಾ ಆರೋಪಿಸಿದರು.

“ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ಜನ ವಿಶ್ವಾಸ ಇಟ್ಟುಕೊಂಡಿದ್ದಾರೆ. 2014ರಲ್ಲಿ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬಂತು. ಈ ಬಾರಿ ಕರ್ನಾಟಕ ಚುನಾವಣೆಯಲ್ಲೂ ಜನ ಬಿಜೆಪಿಯನ್ನೇ ಬೆಂಬಲಿಸುತ್ತಾರೆ,” ಎಂದು ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದರು.

“ರಾಜ್ಯದಲ್ಲಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ 40 ಲಕ್ಷದ ವಾಚ್ ಕಟ್ಟಿಕೊಂಡು ತಿರುಗಾಡುತ್ತಿದ್ದಾರೆ. ಜನರ ಸಮಸ್ಯೆ ಇತ್ಯರ್ಥವಾಗಬೇಕು ಎಂದರೆ ದಯವಿಟ್ಟು ಬಿಜೆಪಿಯನ್ನು ಗೆಲ್ಲಿಸಿ,” ಎಂದು ಅಮಿತ್ ಶಾ ಮನವಿ ಮಾಡಿದರು.

ಇದೇ ವೇಳೆ, ಅಮಿತ್ ಶಾ ಅವರ ವಿರುದ್ಧ ಘೋಷಣೆ ಕೂಗಿದ ಸಮತಾ ಸೇನೆ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಲು ಯತ್ನಿಸಿದರು. ಕೋಮುವಾದಿ ಅಮಿತ್ ಶಾಗೆ ಧಿಕ್ಕಾರ ಎಂದು ಕಾರ್ಯಕರ್ತರು ಘೋಷಣೆಗಳನ್ನು ಕೂಗಿದರು. ಹೀಗಾಗಿ ಪೊಲೀಸರು ಕೆಲವರನ್ನು ವಶಕ್ಕೆ ಪಡೆದರು.

ದೇಶಾದ್ಯಂತ ಬ್ಯಾಂಕ್ ನೌಕರರ ಮುಷ್ಕರ, ಬ್ಯಾಂಕ್ ಸೇವೆಯಲ್ಲಿ ವ್ಯತ್ಯಯ
ನಿವೃತ್ತಿ ವೇತನಕ್ಕೆ ಆಗ್ರಹಿಸಿ ಸೀಮೆಎಣ್ಣೆ ವಿತರಕರಿಂದ ಬೀದರ್‌ನಲ್ಲಿ ಹೋರಾಟ 
ಬಾಲಕಿ ಮೇಲಿನ ಅತ್ಯಾಚಾರ, ಕೊಲೆಗೆ ಖಂಡನೆ; ಬೀದರ್‌ನಲ್ಲಿ ಪ್ರತಿಭಟನೆ
Editor’s Pick More