ಕಟುವಾ, ಉನ್ನಾವ್ ಅತ್ಯಾಚಾರ ಪ್ರಕರಣಕ್ಕೆ ಖಂಡನೆ; ದೇಶಾದ್ಯಂತ ಪ್ರತಿಭಟನೆ

ದೇಶದಲ್ಲಿ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳನ್ನು ಖಂಡಿಸಿ ದೆಹಲಿ, ಮುಂಬೈ, ಬೆಂಗಳೂರು ಸೇರಿದಂತೆ ದೇಶದ ವಿವಿಧೆಡೆ ನಾಗರಿಕರು ಭಾನುವಾರ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು

ದೇಶದಲ್ಲಿ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳನ್ನು ಖಂಡಿಸಿ ಹಾಗೂ ಸರ್ಕಾರಗಳು ಶೀಘ್ರ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ದೆಹಲಿ, ಮುಂಬೈ, ಬೆಂಗಳೂರು ಸೇರಿದಂತೆ ದೇಶದ ವಿವಿಧೆಡೆ ನಾಗರಿಕರು ಭಾನುವಾರ ಪ್ರತಿಭಟನೆ ನಡೆಸಿದರು.

ಕಟುವಾ ಹಾಗೂ ಉನ್ನಾವ್ ಅತ್ಯಾಚಾರ ಪ್ರಕರಣವನ್ನು ಖಂಡಿಸಿದ ಪ್ರತಿಭಟನಾಕಾರರು, ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದರು. ಬೆಂಗಳೂರಿನ ರಿಚ್‌ಮಂಡ್ ರಸ್ತೆಯಲ್ಲಿ ಜಮಾಯಿಸಿದ ನೂರಾರು ಮಂದಿ, “ದೇಶದಲ್ಲಿ ಅಮಾನವೀಯ ಕೃತ್ಯ ನಡೆಯುತ್ತಿದ್ದರೂ ಕೇಂದ್ರ ಸರ್ಕಾರ ಮೌನನೀತಿ ಅನುಸರಿಸುತ್ತಿದೆ,” ಎಂದು ದೂರಿದರು. ಪ್ರತಿಭಟನಾ ಮೆರವಣಿಗೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದರು.

ಇನ್ನು, ಅತ್ಯಾಚಾರ ಪ್ರಕರಣಗಳನ್ನು ಖಂಡಿಸಿ ತಿರುವನಂತಪುರಂ ಹಾಗೂ ಬೋಪಾಲ್‌ನಲ್ಲೂ ನಾಗರಿಕರು ಪ್ರತಿಭಟನೆ ನಡೆಸಿದರು. ದೆಹಲಿಯಲ್ಲಿ 'Not in My Name' ಬ್ಯಾನರ್‌ಗಳನ್ನು ಪ್ರದರ್ಶಿಸಿ, “ನನ್ನ ದೇಹದಿಂದ ಜಾತಿಯನ್ನು ಹೊರಗಿಡಿ,” ಎಂಬ ಘೋಷಣೆಗಳನ್ನು ಕೂಗಿದರು.

ಜಮ್ಮುವಿನ ಅಲೆಮಾರಿ ಜನಾಂಗದ ಎಂಟು ವರ್ಷದ ಬಾಲಕಿಯೊಬ್ಬಳನ್ನು ಅಪಹರಿಸಿದ್ದ ಗುಂಪೊಂದು, ಆಕೆಯನ್ನು ದೇವಾಲಯದಲ್ಲಿ ಕೂಡಿ ಹಾಕಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿ ಕೊಲೆಗೈದಿತ್ತು. ಇನ್ನೊಂದೆಡೆ, ಉತ್ತರ ಪ್ರದೇಶದ ಉನ್ನಾವ್‌ದಲ್ಲಿ ಅಪ್ರಾಪ್ತೆಯೊಬ್ಬಳ ಮೇಲೆ ಅತ್ಯಾಚಾರ ನಡೆದಿದ್ದು, ಸ್ಥಳೀಯ ಬಿಜೆಪಿ ಶಾಸಕ ಆರೋಪಿಯಾಗಿದ್ದಾನೆ. ಪ್ರತಿಭಟಿಸುತ್ತಿದ್ದ ಯುವತಿಯ ತಂದೆಯನ್ನು ಪೊಲೀಸರು ಬಂಧಿಸಿದ ನಂತರ, ಅವರು ನ್ಯಾಯಾಂಗ ಬಂಧನದಲ್ಲಿ ಇರುವಾಗಲೇ ಸಾವನ್ನಪ್ಪಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ದೇಶಾದ್ಯಂತ ಬ್ಯಾಂಕ್ ನೌಕರರ ಮುಷ್ಕರ, ಬ್ಯಾಂಕ್ ಸೇವೆಯಲ್ಲಿ ವ್ಯತ್ಯಯ
ನಿವೃತ್ತಿ ವೇತನಕ್ಕೆ ಆಗ್ರಹಿಸಿ ಸೀಮೆಎಣ್ಣೆ ವಿತರಕರಿಂದ ಬೀದರ್‌ನಲ್ಲಿ ಹೋರಾಟ 
ಬಾಲಕಿ ಮೇಲಿನ ಅತ್ಯಾಚಾರ, ಕೊಲೆಗೆ ಖಂಡನೆ; ಬೀದರ್‌ನಲ್ಲಿ ಪ್ರತಿಭಟನೆ
Editor’s Pick More