ಕನಿಷ್ಠ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಲಕ್ಷಾಂತರ ನಾಗರಿಕರಿಂದ ಪ್ರತಿಭಟನೆ

ಕನಿಷ್ಠ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಸ್ಟ್ರೇಲಿಯಾ ಮೇಲ್ಬೋರ್ನ್‌ನಲ್ಲಿ ಪ್ರತಿಭಟನೆ ನಡೆಯಿತು. ಟ್ರೇಡ್ ಹಾಲ್‌ನಲ್ಲಿ ಸೇರಿದ ಲಕ್ಷಾಂತರ ನಾಗರಿಕರು ರ‍್ಯಾಲಿ ನಡೆಸಿ ಪ್ರತಿಭಟಿಸಿದರು. ಸಂಚಾರ ಅಸ್ತವ್ಯಸ್ಥಗೊಂಡು, ಪ್ರಯಾಣಿಕರು ಪರದಾಡುವಂತಾಯಿತು

ಕನಿಷ್ಠ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಮೇಲ್ಬೋರ್ನ್‌ನಲ್ಲಿ ಲಕ್ಷಾಂತರ ನಾಗರಿಕರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರಿಂದ, ಸಂಚಾರ ಅಸ್ತವ್ಯಸ್ಥಗೊಂಡು, ಪ್ರಯಾಣಿಕರು ಪರದಾಡುವಂತಾಯಿತು.

ಟ್ರೇಡ್ ಹಾಲ್ ನಲ್ಲಿ ಸೇರಿದ ಲಕ್ಷಾಂತರ ನಾಗರಿಕರು, ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಸಿ, ಕನಿಷ್ಠ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಬೃಹತ್ ಪ್ರತಿಭಟನೆಯಿಂದಾಗಿ ಸಂಚಾರ ಅಸ್ತವ್ಯಸ್ಥವಾಗಿದ್ದು, ಪೊಲೀಸರು ಕೂಡ ಕೆಲವೆಡೆ ರಸ್ತೆ ಸಂಚಾರ ಬಂದ್ ಮಾಡಿ ಪರ್ಯಾಯ ವ್ಯವಸ್ಥೆ ಕಲ್ಪಿಸಿದರು.

ಈ ಕುರಿತಂತೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಆಸ್ಟ್ರೇಲಿಯನ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ಸ್ ಕಾರ್ಯದರ್ಶಿ ಸ್ಯಾಲಿ ಮೆಕ್ಮನಸ್, “ವೇತನ ಹೆಚ್ಚಳ, ಕೆಲಸ ಮಾಡುವ ವಾತಾವರಣದ ಸುಧಾರಣೆ, ಹಾಗೂ ದಂಡ ವಿಧಿಸುವ ಕ್ರಮವನ್ನು ಕೈಬಿಡಬೇಕು ಎಂಬುದು ಪ್ರತಿಭಟನಾಕಾರರ ಆಗ್ರಹ” ಎಂದು ವಿವರಿಸಿದರು.

ಸರ್ಕಾರ ಜಾರಿಗೆ ತಂದಿರುವ ತೆರಿಗೆ ನೀತಿಯಿಂದಾಗಿ ಜನಸಾಮಾನ್ಯರು ಪರದಾಡುವಂತಾಗಿದ್ದು, ಇದೊಂದು ಸರಿಯಾದ ತೆರಿಗೆ ನೀತಿಯಲ್ಲ ಎಂದು ಪ್ರತಿಭಟನಾಕಾರರು ದೂರಿದರು. ದಶಕಗಳಲ್ಲೇ ಆಸ್ಟ್ರೇಲಿಯಾದಲ್ಲಿ ನಡೆದ ಬಹುದೊಡ್ಡ ಪ್ರತಿಭಟನೆ ಇದಾಗಿದೆ ಎನ್ನಲಾಗಿದೆ.

ದೇಶಾದ್ಯಂತ ಬ್ಯಾಂಕ್ ನೌಕರರ ಮುಷ್ಕರ, ಬ್ಯಾಂಕ್ ಸೇವೆಯಲ್ಲಿ ವ್ಯತ್ಯಯ
ನಿವೃತ್ತಿ ವೇತನಕ್ಕೆ ಆಗ್ರಹಿಸಿ ಸೀಮೆಎಣ್ಣೆ ವಿತರಕರಿಂದ ಬೀದರ್‌ನಲ್ಲಿ ಹೋರಾಟ 
ಬಾಲಕಿ ಮೇಲಿನ ಅತ್ಯಾಚಾರ, ಕೊಲೆಗೆ ಖಂಡನೆ; ಬೀದರ್‌ನಲ್ಲಿ ಪ್ರತಿಭಟನೆ
Editor’s Pick More