ರಾಜ್ಯಪಾಲ ವಜುಬಾಯಿ ವಾಲ ನಡೆಗೆ ಖಂಡನೆ, ಕಾಂಗ್ರೆಸ್‌ನಿಂದ ಪ್ರತಿಭಟನೆ

ಬಿಎಸ್‌ವೈಗೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲು ಅನುಮತಿ ನೀಡಿದ ರಾಜ್ಯಪಾಲ ವಜುಬಾಯಿ ವಾಲಾ ಅವರ ಕ್ರಮವನ್ನು ಖಂಡಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿ, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು

ಬಹುಮತವಿಲ್ಲದಿದ್ದರೂ ಸರ್ಕಾರ ರಚನೆಗೆ ಬಿಜೆಪಿಗೆ ಅವಕಾಶ ಮಾಡಿಕೊಟ್ಟಿರುವ ರಾಜ್ಯಪಾಲರ ನಡೆಯನ್ನು ಖಂಡಿಸಿ ರಾಜ್ಯದ ವಿವಿಧೆಡೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಎಸ್‌ವೈಗೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲು ಅನುಮತಿ ನೀಡಿದ ರಾಜ್ಯಪಾಲ ವಜುಬಾಯಿ ವಾಲಾ ಅವರ ಕ್ರಮವನ್ನು ಖಂಡಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು.

ಚಿತ್ರದುರ್ಗದ ಕಾಂಗ್ರೆಸ್ ಕಚೇರಿ ಬಳಿ ಜಿಲ್ಲಾಧ್ಯಕ್ಷ ಪಾತ್ಯಾರಾಜನ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ರಾಜ್ಯಪಾಲರ ವಿರುದ್ಧ ದಿಕ್ಕಾರ ಕೂಗಿದರು. ಇದೇ ವೇಳೆ, ಬಿಜೆಪಿ ನಾಯಕರು ಸಂವಿಧಾನ ವಿರೋಧಿ ನಡೆ ಅನುಸರಿಸುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.

ಚಿಕ್ಕಬಳ್ಳಾಪುರದಲ್ಲೂ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಕೇಂದ್ರ ಸರ್ಕಾರ ಹಾಗೂ ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿದರು. ನಗರದ ಪಿಎಲ್‌ಡಿ ಬ್ಯಾಂಕ್ ಮುಂಭಾಗ ಪ್ರತಿಭಟನೆ ನಡೆಸಿದ ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್ ಘಟಕದ ಕಾರ್ಯಕರ್ತರು, ಕೇಂದ್ರ ಸರ್ಕಾರ ಸಂವಿಧಾನ ವಿರೋಧಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದೇಶಾದ್ಯಂತ ಬ್ಯಾಂಕ್ ನೌಕರರ ಮುಷ್ಕರ, ಬ್ಯಾಂಕ್ ಸೇವೆಯಲ್ಲಿ ವ್ಯತ್ಯಯ
ನಿವೃತ್ತಿ ವೇತನಕ್ಕೆ ಆಗ್ರಹಿಸಿ ಸೀಮೆಎಣ್ಣೆ ವಿತರಕರಿಂದ ಬೀದರ್‌ನಲ್ಲಿ ಹೋರಾಟ 
ಬಾಲಕಿ ಮೇಲಿನ ಅತ್ಯಾಚಾರ, ಕೊಲೆಗೆ ಖಂಡನೆ; ಬೀದರ್‌ನಲ್ಲಿ ಪ್ರತಿಭಟನೆ
Editor’s Pick More