ಸತೀಶ್ ಜಾರಕಿಹೊಳಿ ಕೈತಪ್ಪಿದ ಸಚಿವ ಸ್ಥಾನ; ಬೆಂಬಲಿಗರಿಂದ ಪ್ರತಿಭಟನೆ

ಶಾಸಕ ಸತೀಶ್ ಜಾರಕಿಹೊಳಿಗೆ ಸಚಿವ ಸ್ಥಾನ ಕೈತಪ್ಪಿದ್ದರಿಂದ ಆಕ್ರೋಶಗೊಂಡಿರುವ ಕಾರ್ಯಕರ್ತರು ಚಿಕ್ಕೋಡಿ ಹಾಗೂ ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದರು. ಜಾರಕಿಹೊಳಿಗೆ ಸಚಿವ ಸ್ಥಾನ ನೀಡದೆ ದಲಿತರಿಗೆ ಅನ್ಯಾಯ ಎಸಗಲಾಗುತ್ತಿದೆ ಎಂದು ದೂರಿ, ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು

ಶಾಸಕ ಸತೀಶ್ ಜಾರಕಿಹೊಳಿಗೆ ಸಚಿವ ಸ್ಥಾನ ಕೈ ತಪ್ಪಿದ್ದರಿಂದ ಆಕ್ರೋಶಗೊಂಡಿರುವ ಕಾರ್ಯಕರ್ತರು ಚಿಕ್ಕೋಡಿಯಲ್ಲಿ ಪ್ರತಿಭಟನೆ ನಡೆಸಿದರು. ಸ್ವಕ್ಷೇತ್ರ ಯಮಕನಮರಡಿಯಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿ 4ನ್ನು ತಡೆದು ಪ್ರತಿಭಟನೆ ನಡೆಸಲು ಮುಂದಾದರು. ಇದಕ್ಕೆ ಪೊಲೀಸರು ಅಡ್ಡಪಡಿಸಿದ್ದರಿಂದ, ಟೈರ್‌ಗೆ ಬೆಂಕಿ ಹಚ್ಚಿ ಘೋಷಣೆಗಳನ್ನು ಕೂಗಿದರು. ಏಳು ಜನ ಜಿಲ್ಲಾ ಪಂಚಾಯತ್ ಮತ್ತು 33 ತಾಲೂಕು ಪಂಚಾಯತ್ ಸದಸ್ಯರಿಂದ ರಾಜಿನಾಮೆ ಕೊಡಿಸುವುದಾಗಿ ಕಾರ್ಯಕರ್ತರು ಎಚ್ಚರಿಕೆ ನೀಡಿದರು.

ಇನ್ನೊಂದೆಡೆ, ಮೈಸೂರಿನಲ್ಲೂ ಸತೀಶ್ ಜಾರಕಿಹೊಳಿ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಜಾರಕಿಹೊಳಿ ಅಭಿಮಾನಿಗಳ ಸಂಘದ ಅಧ್ಯಕ್ಷ ರವಿಕುಮಾರ್ ನೇತೃತ್ವದಲ್ಲಿ ಮೈಸೂರಿನ ಪುರಭವನದ ಬಳಿಯ ಅಂಬೇಡ್ಕರ್ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದ ಮಾನವ ಬಂಧುತ್ವ ವೇದಿಕೆ ಮತ್ತು ದಲಿತ ಸಂಘಟನೆಗಳ ಒಕ್ಕೂಟಗಳು, ಜಾರಕಿಹೊಳಿಗೆ ಸಚಿವ ಸ್ಥಾನ ನೀಡದೆ ದಲಿತರಿಗೆ ಅವಮಾನ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದೇಶಾದ್ಯಂತ ಬ್ಯಾಂಕ್ ನೌಕರರ ಮುಷ್ಕರ, ಬ್ಯಾಂಕ್ ಸೇವೆಯಲ್ಲಿ ವ್ಯತ್ಯಯ
ನಿವೃತ್ತಿ ವೇತನಕ್ಕೆ ಆಗ್ರಹಿಸಿ ಸೀಮೆಎಣ್ಣೆ ವಿತರಕರಿಂದ ಬೀದರ್‌ನಲ್ಲಿ ಹೋರಾಟ 
ಬಾಲಕಿ ಮೇಲಿನ ಅತ್ಯಾಚಾರ, ಕೊಲೆಗೆ ಖಂಡನೆ; ಬೀದರ್‌ನಲ್ಲಿ ಪ್ರತಿಭಟನೆ
Editor’s Pick More