ಶಾಸಕ ಎಚ್ ಕೆ ಪಾಟೀಲ್‌ಗೆ ಸಚಿವ ಸ್ಥಾನಕ್ಕೆ ಆಗ್ರಹಿಸಿ ‘ರಾಜಿನಾಮೆ ಪ್ರತಿಭಟನೆ’

ಶಾಸಕ ಎಚ್ ಕೆ ಪಾಟೀಲ್ ಅವರಿಗೆ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯಲ್ಲಿ ರಾಜಿನಾಮೆ ಪರ್ವ ಆರಂಭವಾಗಿದೆ. ಕಾಂಗ್ರೆಸ್‌ನಿಂದ ಚುನಾಯಿತರಾದ ಜನಪ್ರತಿನಿಧಿಗಳು, ಪಕ್ಷದ ಪದಾಧಿಕಾರಿಗಳು ಹೈಕಮಾಂಡ್ ಧೋರಣೆ ಖಂಡಿಸಿ ತಮ್ಮ ಹುದ್ದೆಗೆ ರಾಜಿನಾಮೆ ಸಲ್ಲಿಸುತ್ತಿದ್ದಾರೆ

ಶಾಸಕ ಎಚ್ ಕೆ ಪಾಟೀಲ್ ಅವರಿಗೆ ಸಂಪುಟದಲ್ಲಿ ಸ್ಥಾನಮಾನ ಸಿಗದ ಹಿನ್ನೆಲೆ ಇಂದಿನಿಂದ ಗದಗ ಜಿಲ್ಲೆಯಲ್ಲಿ ರಾಜಿನಾಮೆ ಪರ್ವ ಆರಂಭವಾಗಿದೆ. ಕಾಂಗ್ರೆಸ್ ಜನಪ್ರತಿನಿಧಿಗಳು ಹಾಗೂ ಪಕ್ಷದ ಪದಾಧಿಕಾರಿಗಳು ಹೈಕಮಾಂಡ್ ಧೋರಣೆ ಖಂಡಿಸಿ ತಮ್ಮ ಹುದ್ದೆಗೆ ರಾಜಿನಾಮೆ ಸಲ್ಲಿಸಿದರು. ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ, ಗ್ರಾಮ ಪಂಚಾಯತಿಗೆ ಆಯ್ಕೆಯಾದ ಜನಪ್ರತಿನಿಧಿಗಳು ರಾಜಿನಾಮೆ ಸಲ್ಲಿಸಿದರು. ಇನ್ನು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ ಎಸ್ ಗಡ್ಡದ್ದೇವರಮಠ ಸೇರಿದಂತೆ ಪಕ್ಷದ ಜಿಲ್ಲಾ ಹಾಗೂ ತಾಲೂಕು, ಹೋಬಳಿ ಮಟ್ಟದ ಎಲ್ಲ ಪದಾಧಿಕಾರಿಗಳು ತಮ್ಮ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸುವ ಮೂಲಕ ಹೈಕಮಾಂಡ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಜಿಲ್ಲೆಯ ಚುನಾಯಿತ ಜನಪ್ರತಿನಿಧಿಗಳು ಹಾಗೂ ಪಕ್ಷದ ಪದಾಧಿಕಾರಿಗಳು ಸೇರಿ 200ಕ್ಕೂ ಹೆಚ್ಚು ಜನರು ಭಾನುವಾರ ರಾಜಿನಾಮೆ ಸಲ್ಲಿಸಿದರು. ಸಂಗ್ರಹವಾದ ರಾಜಿನಾಮೆ ಪತ್ರಗಳನ್ನು ಸೋಮುವಾರ ಕೆಪಿಸಿಸಿ ಕಚೇರಿಗೆ ತೆರಳಿ ಜಿ ಪರಮೇಶ್ವರ್ ಅವರಿಗೆ ಸಲ್ಲಿಸಲು ತೀರ್ಮಾನಿಸಲಾಯಿತು. ಹೈಕಮಾಂಡ್ ನಿರ್ಧಾರ ಜಿಲ್ಲೆಯ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಪಕ್ಷದ ಒಬ್ಬ ಪ್ರಭಾವಿ ನಾಯಕನಿಗೆ ಸ್ಥಾನಮಾನ ಸಿಗದಿರೋದು ಎಷ್ಟು ಸರಿ? ಕೂಡಲೇ ಸಚಿವ ಸ್ಥಾನ ಸಿಗದಿದ್ದರೆ ಉಗ್ರ ಪ್ರತಿಭಟನೆ ಮಾಡುವ ಎಚ್ಚರಿಕೆ ಜಿಲ್ಲೆಯ ಜನರದ್ದು.

ಪ್ರತಿಭಟನೆ ವೇಳೆ ಕಾಂಗ್ರೆಸ್ ಕಾರ್ಯಕರ್ತ ಅಮರೇಶ್ ಟ್ಯಾಂಕ್ ಏರಿ ಬೀಳಲು ಯತ್ನಿಸಿದ ಘಟನೆ ನಡೆಯಿತು. ಈ ವೇಳೆ ಅಮರೇಶ್‌ನನ್ನು ತಡೆದು ಮನವೊಲಿಸಿ ಕೆಳಗಿಳಿಸುವಲ್ಲಿ ಪೊಲೀಸರು ಯಶಸ್ವಿಯಾದರು. ನಂತರ ಗಾಂಧಿ ವೃತ್ತದಲ್ಲಿ ಟೈರ್‌ಗೆ ಬೆಂಕಿ ಹಚ್ಚುವ ವೇಳೆ ಗುಪ್ತಚರ ಇಲಾಖೆ ಸಿಬ್ಬಂದಿ ಮೈಗೆ ಬೆಂಕಿ ತಗುಲಿದ ಪ್ರಸಂಗ ನಡೆಯಿತು.

ದೇಶಾದ್ಯಂತ ಬ್ಯಾಂಕ್ ನೌಕರರ ಮುಷ್ಕರ, ಬ್ಯಾಂಕ್ ಸೇವೆಯಲ್ಲಿ ವ್ಯತ್ಯಯ
ನಿವೃತ್ತಿ ವೇತನಕ್ಕೆ ಆಗ್ರಹಿಸಿ ಸೀಮೆಎಣ್ಣೆ ವಿತರಕರಿಂದ ಬೀದರ್‌ನಲ್ಲಿ ಹೋರಾಟ 
ಬಾಲಕಿ ಮೇಲಿನ ಅತ್ಯಾಚಾರ, ಕೊಲೆಗೆ ಖಂಡನೆ; ಬೀದರ್‌ನಲ್ಲಿ ಪ್ರತಿಭಟನೆ
Editor’s Pick More