ಲಾಠಿಚಾರ್ಜ್ ಖಂಡಿಸಿ ಬೆಳಗಾವಿಯಲ್ಲಿ ಮುಸ್ಲಿಂ ಸಂಘಟನೆಗಳ ಪ್ರತಿಭಟನೆ

ಬೆಳಗಾವಿ ಜಿಲ್ಲೆಯ ರಾಯಭಾಗ ಪಟ್ಟಣದಲ್ಲಿ ಮುಸ್ಲಿಮರ ಮೇಲೆ ನಡೆದ ಲಾಟಿ ಚಾರ್ಜ್ ಖಂಡಿಸಿ ಬುಧವಾರ ಚಿಕ್ಕೋಡಿಯಲ್ಲಿ ಮುಸ್ಲಿಂ ಸಮುದಾಯದವರು ಪ್ರತಿಭಟನೆ ನಡೆಸಿದರು. ಮಹಿಳೆಯ ಸಂಶಯಾಸ್ಪದ ಸಾವನ್ನು ಖಂಡಿಸಿ ಪ್ರತಿಭಟನೆ ನಡೆಯುತ್ತಿದ್ದ ವೇಳೆ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಟಿ ಚಾರ್ಜ್ ನಡೆಸಿದ್ದರು

ಬೆಳಗಾವಿ ಜಿಲ್ಲೆಯ ರಾಯಭಾಗ ಪಟ್ಟಣದಲ್ಲಿ ಮುಸ್ಲಿಮರ ಮೇಲೆ ನಡೆದ ಲಾಟಿ ಚಾರ್ಜ್ ಖಂಡಿಸಿ ಬುಧವಾರ ಚಿಕ್ಕೋಡಿಯಲ್ಲಿ ಮುಸ್ಲಿಂ ಸಮುದಾಯದವರು ಪ್ರತಿಭಟನೆ ನಡೆಸಿದರು. ನಂದಿಕುರಳಿ ಗ್ರಾಮದಲ್ಲಿ ಸಂಶಯಾಸ್ಪದವಾಗಿ ಮಹಿಳೆ ಸಾವನಪ್ಪಿದ್ದಳು. ಮಹಿಳೆ ಸಂಶಯಾಸ್ಪದ ಸಾವು ಖಂಡಿಸಿ ರಾಯಭಾಗ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲು ಕೆಲವರು ಮುಂದಾದರು. ಈ ಸಂದರ್ಭ ಕಿಡಿಗೆಡಿಗಳು ಬಸ್ ಮೇಲೆ ಕಲ್ಲು ತೂರಾಟ ನಡೆಸಿ ಬಸ್ ನಿಲ್ದಾಣದ ಪಿಠೋಪಕರನಗಳನ್ನ ಧ್ವಂಸ ಮಾಡಿದ್ದರು. ಪರಿಸ್ಥಿತಿಯನ್ನ ನಿಯಂತ್ರಿಸಲು ಪೊಲೀಸರು ಲಾಟಿ ಚಾರ್ಜ್ ನಡೆಸಿದ್ದರು.

ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು 35 ಕ್ಕೂ ಹೆಚ್ಚು ಜನರನ್ನ ಬಂಧಿಸಿ ಪ್ರಕರಣ ದಾಖಲಿಸಿದ್ದರು. ಆದರೆ ಪೊಲೀಸರು ಅಮಾಯಕರನ್ನ ಬಂಧಿಸಿ ಜೈಲಿಗೆ ಹಾಕಿದ್ದಾರೆ ಎಂದು ಮುಸ್ಲಿಂ ಸಂಘಟನೆಯವರು ಆರೋಪ. ಅಮಾಯಕರನ್ನು ಕೂಡಲೇ ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ರಂಜಾನ್ ಹಬ್ಬವನ್ನ ನಾವು ಆಚರಣೆ ಮಾಡಲ್ಲ ಎಂದು ಪ್ರತಿಭಟನಾನಿರತರು ಎಚ್ಚರಿಸಿದರು. ಅಲ್ಲದೆ ಹಬ್ಬದ ದಿನದಂದು ಕಪ್ಪು ಬಟ್ಟೆ ಧರಿಸಿ ಮತ್ತೆ ಪ್ರತಿಭಟನೆ ನಡೆಸುತ್ತೇವೆ ಎಂದು ಪ್ರತಿಭಟನಾನಿರತರು ತಹಶೀಲ್ದಾರ್ ಗೆ ದೂರು ಸಲ್ಲಿಸಿದರು.

ದೇಶಾದ್ಯಂತ ಬ್ಯಾಂಕ್ ನೌಕರರ ಮುಷ್ಕರ, ಬ್ಯಾಂಕ್ ಸೇವೆಯಲ್ಲಿ ವ್ಯತ್ಯಯ
ನಿವೃತ್ತಿ ವೇತನಕ್ಕೆ ಆಗ್ರಹಿಸಿ ಸೀಮೆಎಣ್ಣೆ ವಿತರಕರಿಂದ ಬೀದರ್‌ನಲ್ಲಿ ಹೋರಾಟ 
ಬಾಲಕಿ ಮೇಲಿನ ಅತ್ಯಾಚಾರ, ಕೊಲೆಗೆ ಖಂಡನೆ; ಬೀದರ್‌ನಲ್ಲಿ ಪ್ರತಿಭಟನೆ
Editor’s Pick More