ಅಧಿಕಾರಿಗಳ ಮುಷ್ಕರ; ಕ್ರಮಕ್ಕೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ಕೇಜ್ರಿವಾಲ್

ಐಎಎಸ್ ಅಧಿಕಾರಿಗಳ ಮುಷ್ಕರದಿಂದಾಗಿ ದೆಹಲಿ ಇಕ್ಕಟ್ಟಿಗೆ ಸಿಲುಕಿದೆ. ಲೆಪ್ಟಿನೆಂಟ್ ಗವರ್ನರ್ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಪ್ರತಿಭಟನೆಯಿಂದ ಸರ್ಕಾರಿ ಕೆಲಸಗಳು ಬಾಕಿಯಾಗಿದ್ದು, ಕೂಡಲೇ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಸಿಎಂ ಕೇಜ್ರಿವಾಲ್ ಪ್ರಧಾನಿಗೆ ಪತ್ರ ಬರೆದಿದ್ದಾರೆ

ಮುಷ್ಕರನಿರತ ಐಎಎಸ್ ಅಧಿಕಾರಿಗಳು ಕೆಲಸಕ್ಕೆ ಹಾಜರಾಗಲು ಸೂಚಿಸಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಐಎಎಸ್ ಅಧಿಕಾರಿಗಳ ಮುಷ್ಕರದಿಂದಾಗಿ ದೆಹಲಿ ಇಕ್ಕಟ್ಟಿಗೆ ಸಿಲುಕಿದ್ದು, ಲೆಪ್ಟಿನೆಂಟ್ ಗವರ್ನರ್ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಕಳೆದ ನಾಲ್ಕು ತಿಂಗಳಿಂದ ಅಧಿಕಾರಿಗಳು ಪ್ರತಿಭಟನೆ ನಡೆಸುತ್ತಿದ್ದು, ಸರ್ಕಾರಿ ಕೆಲಸಗಳು ಬಾಕಿ ಉಳಿದಿದೆ. ಈ ಕೂಡಲೇ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಪತ್ರ ಬರೆದಿದ್ದಾರೆ. ಕಳೆದ ಮೂರು ತಿಂಗಳಿನಿಂದ ಐಎಎಸ್ ಅಧಿಕಾರಿಗಳು ಹಾಗೂ ಸಚಿವರ ನಡುವೆ ಯಾವುದೇ ಸಭೆ ನಡೆದಿಲ್ಲ.

ಐಎಎಸ್ ಅಧಿಕಾರಿಗಳ ಪ್ರತಿಭಟನೆಯಿಂದಾಗಿ ಸರ್ಕಾರದ ಹಲವು ಅಭಿವೃದ್ಧಿ ಯೋಜನೆಗಳು ಸ್ಥಗಿತಗೊಂಡಿವೆ. ಕೇಂದ್ರ ಸರ್ಕಾರ ಅಥವಾ ಲೆಫ್ಟಿನೆಂಟ್ ಗವರ್ನರ್ ಮಾತ್ರ ಪ್ರತಿಭಟನೆಗೆ ಅಂತ್ಯಗೊಳಿಸಲು ಸಾಧ್ಯ ಎಂದು ಪತ್ರದಲ್ಲಿ ಕೇಜ್ರಿವಾಲ್ ವಿವರಿಸಿದ್ದಾರೆ.

ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಹಾಗೂ ಅವರ ಸಂಪುಟ ಸಹೋದ್ಯೋಗಿಗಳು ಲೆಫ್ಟಿನೆಂಟ್ ಗವರ್ನರ್ ಬೈಜಾಲ್ ಅವರ ಕಚೇರಿ ಮುಂದೆ ಧರಣಿ, ಪ್ರತಿಭಟನೆ ಮುಂದುವರಿಸಿದ್ದಾರೆ. ಶೀಘ್ರವೇ ಸಮಸ್ಯೆ ಇತ್ಯರ್ಥಗೊಳಿಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಟ್ವೀಟ್ ಮಾಡಿದ್ದಾರೆ.

ದೇಶಾದ್ಯಂತ ಬ್ಯಾಂಕ್ ನೌಕರರ ಮುಷ್ಕರ, ಬ್ಯಾಂಕ್ ಸೇವೆಯಲ್ಲಿ ವ್ಯತ್ಯಯ
ನಿವೃತ್ತಿ ವೇತನಕ್ಕೆ ಆಗ್ರಹಿಸಿ ಸೀಮೆಎಣ್ಣೆ ವಿತರಕರಿಂದ ಬೀದರ್‌ನಲ್ಲಿ ಹೋರಾಟ 
ಬಾಲಕಿ ಮೇಲಿನ ಅತ್ಯಾಚಾರ, ಕೊಲೆಗೆ ಖಂಡನೆ; ಬೀದರ್‌ನಲ್ಲಿ ಪ್ರತಿಭಟನೆ
Editor’s Pick More