ವಿಡಿಯೋ | 20 ದಿನದಿಂದ ಸಿಗದ ಕುಡಿಯುವ ನೀರು, ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ

ಕುಡಿಯುವ ನೀರಿಗಾಗಿ ಆಗ್ರಹಿಸಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ ಘಟನೆ ಗದಗ ಜಿಲ್ಲೆ ರೋಣ ಪಟ್ಟಣದ ಜಕ್ಕಲಿ ಕ್ರಾಸ್ ಬಳಿ ನಡೆದಿದೆ. ಪಟ್ಟಣದಲ್ಲಿ ಹಲವು ದಿನಗಳಿಂದ ನೀರಿನ ಗಂಭೀರ ಸಮಸ್ಯೆ ಎದುರಾದರೂ ಪುರಸಭೆ ಈ ಕುರಿತು ಸಂಪೂರ್ಣ ನಿರ್ಲಕ್ಷ್ಯ ತೋರಿದೆ ಎನ್ನುವ ಆರೋಪ ಸ್ಥಳೀಯರದ್ದು

ಕುಡಿಯುವ ನೀರಿಗಾಗಿ ಆಗ್ರಹಿಸಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ ಘಟನೆ ಗದಗ ಜಿಲ್ಲೆ ರೋಣ ಪಟ್ಟಣದ ಜಕ್ಕಲಿ ಕ್ರಾಸ್ ಬಳಿ ನಡೆದಿದೆ. ಈಗಾಗಲೇ ಪಟ್ಟಣದಲ್ಲಿ ಹಲವು ದಿನಗಳಿಂದ ನೀರಿನ ಗಂಭೀರ ಸಮಸ್ಯೆ ಎದುರಾಗಿದೆ. ಆದರೂ ನೀರಿನ ಬವಣೆ ನೀಗಿಸುವಲ್ಲಿ ಸ್ಥಳೀಯ ಪುರಸಭೆ ನಿರ್ಲಕ್ಷ್ಯ ತೋರಿದೆ ಎನ್ನುವ ಆರೋಪ ಸ್ಥಳೀಯರದ್ದು. ಹೀಗಾಗಿ, ಪುರಸಭೆ ವಿರುದ್ಧ ಆಕ್ರೋಶಗೊಂಡ ಪ್ರತಿಭಟನಾಕಾರರು, ಗದಗ-ರೋಣ ಹೆದ್ದಾರಿ ತಡೆದು ಪ್ರತಿಭಟಿಸಿದರು.

ಕಳೆದ ೨೦ ದಿನಗಳಿಂದ ಕುಡಿಯಲು ನೀರು ಪೂರೈಸದ ಪುರಸಭೆಯ ಅಧಿಕಾರಿಗಳ ವಿರುದ್ಧ ಹಿಡಿಶಾಪ ಹಾಕಿದರು. ಜೊತೆಗೆ, ಪುರಸಭೆಯ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಎರಡು ಗಂಟೆಗಳ ಕಾಲ ಹೆದ್ದಾರಿ ತಡೆದ ಪರಿಣಾಮ ವಾಹನ ಸಂಚಾರ ಅಸ್ತವ್ಯಸ್ತವಾಗಿ, ಪ್ರಯಾಣಿಕರು ಪರದಾಡುವಂತಾಯಿತು.

ದೇಶಾದ್ಯಂತ ಬ್ಯಾಂಕ್ ನೌಕರರ ಮುಷ್ಕರ, ಬ್ಯಾಂಕ್ ಸೇವೆಯಲ್ಲಿ ವ್ಯತ್ಯಯ
ನಿವೃತ್ತಿ ವೇತನಕ್ಕೆ ಆಗ್ರಹಿಸಿ ಸೀಮೆಎಣ್ಣೆ ವಿತರಕರಿಂದ ಬೀದರ್‌ನಲ್ಲಿ ಹೋರಾಟ 
ಬಾಲಕಿ ಮೇಲಿನ ಅತ್ಯಾಚಾರ, ಕೊಲೆಗೆ ಖಂಡನೆ; ಬೀದರ್‌ನಲ್ಲಿ ಪ್ರತಿಭಟನೆ
Editor’s Pick More