ಭೂಮಿ ಪರಿಹಾರಕ್ಕಾಗಿ ಆಗ್ರಹಿಸಿ ಬೀದರ್‌ನ ಕಾರಂಜಾ ಸಂತ್ರಸ್ತರ ಪ್ರತಿಭಟನೆ

ಹದಿನಾರು ಸಾವಿರಕ್ಕೂ ಅಧಿಕ ಎಕರೆ ಫಲವತ್ತಾದ ಭೂಮಿ ಕಳೆದುಕೊಂಡ ಬೀದರ್ ಕಾರಂಜಾ ಸಂತ್ರಸ್ತರು ಸಮಾನ ಪರಿಹಾರಕ್ಕಾಗಿ ಆಗ್ರಹಿಸಿ ಕಳೆದ ಮೂರು ದಿನಗಳಿಂದ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಬೇಡಿಕೆಗೆ ಸರ್ಕಾರ ಸ್ಪಂದಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ

ಹದಿನಾರು ಸಾವಿರಕ್ಕೂ ಅಧಿಕ ಎಕರೆ ಫಲವತ್ತಾದ ಭೂಮಿ ಕಳೆದುಕೊಂಡ ಬೀದರ್ ಕಾರಂಜಾ ಸಂತ್ರಸ್ತರು ಪರಿಹಾರಕ್ಕಾಗಿ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮೂರು ದಿನಗಳಿಂದ ನಡೆಸುತ್ತಿರುವ ಪ್ರತಿಭಟನಾನಿರತರು, ತಮಗೆ ನ್ಯಾಯ ಒದಗಿಸಿಕೊಡುವಂತೆ ಆಗ್ರಹಿಸುತ್ತಿದ್ದಾರೆ.

ಬೀದರ್‌ನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಗ್ರಾಮಸ್ಥರು ಆಹೋರಾತ್ರಿ ಧರಣಿ ನಡೆಸುತ್ತಿದ್ದರೂ, ಜಿಲ್ಲೆಯ ಒಬ್ಬ ಜನಪ್ರತಿನಿಧಿಯೂ ಪ್ರತಿಭಟನಾ ಸ್ಥಳಕ್ಕೆ ಬಾರದಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಕಾರಾಂಜ ಜಲಾಶಯ ನಿರ್ಮಾಣಕ್ಕಾಗಿ ಸರ್ಕಾರ 28ಕ್ಕೂ ಅಧಿಕ ಗ್ರಾಮದ ರೈತರಿಂದ ಭೂಮಿಯನ್ನು ವಶಕ್ಕೆ ಪಡೆದುಕೊಂಡಿದೆ. ಆದರೆ ರೈತರಿಗೆ ಸಮರ್ಪಕ ಪರಿಹಾರ ಮಾತ್ರ ನೀಡಿಲ್ಲ. ಇದರಿಂದ ಬೇಸತ್ತಿರುವ ರೈತರು, ಕಳೆದ ಮೂರು ದಿನಗಳಿಂದ ಬೀದರ್ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಆಹೋರಾತ್ರಿ ಪ್ರತಿಭಟನೆ ನಡೆಸಿ, ಕೂಡಲೇ ನ್ಯಾಯಾಲಯದ ಅದೇಶದಂತೆ ಸರ್ಕಾರ ನಮಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಕಾರಂಜಾ ಜಲಾಶಯ ನಿರ್ಮಾಣಕ್ಕಾಗಿ ರೈತರಿಂದ ಕೃಷಿಭೂಮಿಯನ್ನು ವಶಪಡಿಸಿಕೊಂಡಿರುವ ಸರ್ಕಾರ, ಅವೈಜ್ಞಾನಿಕವಾಗಿ ಪರಿಹಾರ ನೀಡಿತ್ತು. ನ್ಯಾಯಾಲಯದ ಮೊರೆಹೋದ ರೈತರಿಗೆ ಪ್ರತಿ ಎಕರೆಗೆ 10 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ಕೋರ್ಟ್ ಆದೇಶ ನೀಡಿತ್ತು. ಹೀಗಾಗಿ, ಕೋರ್ಟ್ ಮೊರೆಹೋಗದ ರೈತರಿಗೂ ಸರ್ಕಾರ ಸಮಾನ ಪರಿಹಾರ ನೀಡಬೇಕು ಎಂಬುದು ಪ್ರತಿಭಟನಾನಿರತರ ಆಗ್ರಹ. ಈ ವೇಳೆ ಮಾತನಾಡಿದ ಪ್ರತಿಭಟನಾನಿರತರು, ಸರ್ಕಾರ ನಮ್ಮ ಬೇಡಿಕೆಗೆ ಸ್ಪಂದಿಸದೆ ಇದ್ದಲ್ಲಿ, ನಾವು ಕಾರಂಜಾ ಜಲಾಶಯಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

ದೇಶಾದ್ಯಂತ ಬ್ಯಾಂಕ್ ನೌಕರರ ಮುಷ್ಕರ, ಬ್ಯಾಂಕ್ ಸೇವೆಯಲ್ಲಿ ವ್ಯತ್ಯಯ
ನಿವೃತ್ತಿ ವೇತನಕ್ಕೆ ಆಗ್ರಹಿಸಿ ಸೀಮೆಎಣ್ಣೆ ವಿತರಕರಿಂದ ಬೀದರ್‌ನಲ್ಲಿ ಹೋರಾಟ 
ಬಾಲಕಿ ಮೇಲಿನ ಅತ್ಯಾಚಾರ, ಕೊಲೆಗೆ ಖಂಡನೆ; ಬೀದರ್‌ನಲ್ಲಿ ಪ್ರತಿಭಟನೆ
Editor’s Pick More