ಬ್ರಿಮ್ಸ್ ಭ್ರಷ್ಟಾಚಾರ; ಸಿಬಿಐ ತನಿಖೆಗೆ ಆಗ್ರಹಿಸಿ ಬೀದರ್‌ನಲ್ಲಿ ಬಿಜೆಪಿ ಪ್ರತಿಭಟನೆ

ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ ನಡೆದ ಭ್ರಷ್ಟಾಚಾರದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಹಾಗೂ ರೈತರ ಜೀವನಾಡಿ ಆಗಿರುವ ಬಿ ಎಸ್ ಎಸ್ ಕೆ ಸಕ್ಕರೆ ಕಾರ್ಖಾನೆಯನ್ನು ಪುನಃ ಆರಂಭಿಸಬೇಕೆಂದು ಆಗ್ರಹಿಸಿ ಬೀದರ್‌ನಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು

ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ ನಡೆದ ಭ್ರಷ್ಟಾಚಾರದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಹಾಗೂ ರೈತರ ಜೀವನಾಡಿ ಬಿ ಎಸ್ ಎಸ್ ಕೆ ಸಕ್ಕರೆ ಕಾರ್ಖಾನೆ ಪುನರಾಂಭಿಸಬೇಕೆಂದು ಆಗ್ರಹಿಸಿ ಬೀದರ್ ನಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಬೀದರ್‌ನ ಜಿಲ್ಲಾಧಿಕಾರಿ ಕಚೇರಿ ಮುಂದೆ ಕುಳಿತ ಬೀದರ್ ಸಂಸದ ಭಗವಂತ ಖೂಬಾ ಹಾಗೂ ಜಿಲ್ಲಾ ಬಿಜೆಪಿ ಮುಖಂಡರು, “ಜಿಲ್ಲೆಯ ಜನರ ಜೀವ ಉಳಿಸಬೇಕಾದ ಬ್ರಿಮ್ಸ್ ಆಸ್ಪತ್ರೆ ಬರೀ ಲೂಟಿ, ಅಕ್ರಮ ಭ್ರಷ್ಟಾಚಾರದಿಂದಲೇ ಹೆಸರಾಗಿದೆ. ಹೀಗಾಗಿ, ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು,” ಎಂದು ಆಗ್ರಹಿಸಿದರು.

ಇದೇ ವೇಳೆ, ಗಡಿ ಜಿಲ್ಲೆಯ ರೈತರ ಜೀವನಾಡಿಯಾಗಿರುವ ಬಿ ಎಸ್ ಎಸ್ ಕೆ ಸಕ್ಕರೆ ಕಾರ್ಖಾನೆ, ರಾಜಕೀಯ ಕಾರಣದಿಂದ ಬಂದ್ ಆಗಿದ್ದು, ಕೂಡಲೇ ಅದನ್ನು ಪುನರ್ ಅರಂಭಿಸಬೇಕು ಎಂದು ಪ್ರತಿಭಟನಾನಿರತರು ಒತ್ತಾಯಿಸಿದರು.

ಸರ್ಕಾರ ಕೂಡಲೇ ಬ್ರಿಮ್ಸ್ ಅಕ್ರಮವನ್ನು ಸಿಬಿಐಗೆ ವಹಿಸಬೇಕು ಮತ್ತು ಸಕ್ಕರೆ ಕಾರ್ಖಾನೆಯನ್ನು ಪುನರ್ ಆರಂಭಿಸದಿದ್ದರೆ ನಮ್ಮ ಹೋರಾಟ ಉಗ್ರ ಸ್ವರೂಪ ಪಡೆಯುತ್ತದೆ ಎಂದು ಬಿಜೆಪಿ ಮುಖಂಡ ಸೂರ್ಯಕಾಂತ ನಾಗಮಾರಪಳ್ಳಿ ಎಚ್ಚರಿಕೆ ನೀಡಿದ್ದಾರೆ.

ದೇಶಾದ್ಯಂತ ಬ್ಯಾಂಕ್ ನೌಕರರ ಮುಷ್ಕರ, ಬ್ಯಾಂಕ್ ಸೇವೆಯಲ್ಲಿ ವ್ಯತ್ಯಯ
ನಿವೃತ್ತಿ ವೇತನಕ್ಕೆ ಆಗ್ರಹಿಸಿ ಸೀಮೆಎಣ್ಣೆ ವಿತರಕರಿಂದ ಬೀದರ್‌ನಲ್ಲಿ ಹೋರಾಟ 
ಬಾಲಕಿ ಮೇಲಿನ ಅತ್ಯಾಚಾರ, ಕೊಲೆಗೆ ಖಂಡನೆ; ಬೀದರ್‌ನಲ್ಲಿ ಪ್ರತಿಭಟನೆ
Editor’s Pick More