ಕಲಬುರ್ಗಿ ಹತ್ಯೆ ಹಿಂದಿನ ಸಂಘಟನೆ ಹೆಸರು ಬಹಿರಂಗಕ್ಕೆ ಆಗ್ರಹಿಸಿ ಗದಗದಲ್ಲಿ ಪ್ರತಿಭಟನೆ

ಸಂಶೋಧಕ ಕಲಬುರ್ಗಿ ಅವರ ಹತ್ಯೆಯಾಗಿ ಮೂರು ವರ್ಷವಾಗಿದ್ದು, ಕೂಡಲೇ ಹತ್ಯೆಗೆ ಕಾರಣವಾದ ಸಂಘಟನೆಯ ಹೆಸರನ್ನು ಬಹಿರಂಗಪಡಿಸಬೇಕು ಎಂದು ಆಗ್ರಹಿಸಿ ಗದಗದ ಗಾಂಧಿ ವೃತ್ತದ ಬಳಿ ಮಾನವ ಸರಪಳಿ ನಿರ್ಮಿಸಿದ ಪ್ರಗತಿಪರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು

ಸಂಶೋಧಕ ಎಂ ಎಂ ಕಲಬುರ್ಗಿ ಹತ್ಯೆಯಾಗಿ ಮೂರು ವರ್ಷವಾಗಿದ್ದು, ಹತ್ಯೆಗೆ ಕಾರಣವಾದ ಸಂಘಟನೆಯ ಹೆಸರನ್ನು ಕೂಡಲೇ ಬಹಿರಂಗಪಡಿಸಬೇಕು ಎಂದು ಆಗ್ರಹಿಸಿ ಗದದದಲ್ಲಿ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಗದಗದ ತೋಂಟದಾರ್ಯ ಮಠದಿಂದ ಗಾಂಧಿ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು, ಗಾಂಧಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿದರು. “ಕಲಬುರ್ಗಿ ಕೊಲೆ ಹಿಂದೆ ಯಾವ ಸಂಘಟನೆ ಕೈವಾಡ ಇದೆ ಎಂಬುದನ್ನು ಕೂಡಲೇ ಬಹಿರಂಗಪಡಿಸಬೇಕು. ಅಂತಹ ಸಂಘಟನೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು,” ಎಂದು ಪ್ರತಿಭಟನಾನಿರತರು ಆಗ್ರಹಿಸಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಭಿನ್ನತೆಗೆ ಮಹತ್ವವಿದೆ. ಆದರೆ, ನಂಬಿಕೆಗಳಿಗೆ ಭಿನ್ನವಾಗಿ ಮಾತನಾಡಿದ್ದಕ್ಕೆ ಕೊಲೆಗಳಾಗಿರುವುದು ದುರಂತ ಎಂದ ಪ್ರತಿಭಟನಾಕಾರರು, ಮಾನವ ಹಕ್ಕುಗಳ ಹೋರಾಟಗಾರರ ಬಂಧನದ ಕ್ರಮವನ್ನು ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಪ್ರತಿಭಟನೆಯಲ್ಲಿ ಗದುಗಿನ ತೋಂಟದ ಸಿದ್ಧಲಿಂಗ ಶ್ರೀಗಳು, ಚಿಂತಕರು, ಬರಹಗಾರರು, ಪ್ರಗತಿಪರ ಹೋರಾಟಗಾರರು, ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡರು.

ದೇಶಾದ್ಯಂತ ಬ್ಯಾಂಕ್ ನೌಕರರ ಮುಷ್ಕರ, ಬ್ಯಾಂಕ್ ಸೇವೆಯಲ್ಲಿ ವ್ಯತ್ಯಯ
ನಿವೃತ್ತಿ ವೇತನಕ್ಕೆ ಆಗ್ರಹಿಸಿ ಸೀಮೆಎಣ್ಣೆ ವಿತರಕರಿಂದ ಬೀದರ್‌ನಲ್ಲಿ ಹೋರಾಟ 
ಬಾಲಕಿ ಮೇಲಿನ ಅತ್ಯಾಚಾರ, ಕೊಲೆಗೆ ಖಂಡನೆ; ಬೀದರ್‌ನಲ್ಲಿ ಪ್ರತಿಭಟನೆ
Editor’s Pick More