ವಿದ್ಯಾರ್ಥಿಗಳನ್ನು ಹೊರಹಾಕಿದ ಶಾಲೆ ವಿರುದ್ಧ ವಿಧಾನಸೌಧ ಮುಂಭಾಗ ಪ್ರತಿಭಟನೆ

ಹೊಸಪೇಟೆಯ ದೀಪಾಯನ ಶಾಲೆಯ ಆಡಳಿತ ಮಂಡಳಿಯು ತನ್ನ ಮೂವರು ಮಕ್ಕಳನ್ನು ಒಂದು ವರ್ಷದಿಂದ ಶಾಲೆಯಿಂದ ಹೊರಹಾಕಿದೆ ಎಂದು ಆರೋಪಿಸಿ ವ್ಯಕ್ತಿಯೊಬ್ಬ ಮೂವರು ಮಕ್ಕಳೊಂದಿಗೆ ವಿಧಾನಸೌಧದ ಮುಂಭಾಗ ಪ್ರತಿಭಟನೆ ನಡೆಸಿದರು. ಈ ಘಟನೆ ಕುರಿತ ಹಿನ್ನೋಟ ಇಲ್ಲಿದೆ

ಹೊಸಪೇಟೆಯ ದೀಪಾಯನ ಶಾಲೆಯ ಆಡಳಿತ ಮಂಡಳಿ ತನ್ನ ಮೂವರು ಮಕ್ಕಳನ್ನು ಒಂದು ವರ್ಷದಿಂದ ಶಾಲೆಯಿಂದ ಹೊರಹಾಕಿದೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರು ಮೂವರು ಮಕ್ಕಳೊಂದಿಗೆ ವಿಧಾನಸೌಧದ ಮುಂಭಾಗ ಪ್ರತಿಭಟನೆ ನಡೆಸಿದರು.

“ಹೊಸಪೇಟೆಯ ಪ್ರತಿಷ್ಠಿತ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ ಹರ್ಷಿತಾ, 8ನೇ ತರಗತಿಯಲ್ಲಿ ಓದುತ್ತಿರುವ ಅನನ್ಯ, 2ನೇ ತರಗತಿಯಲ್ಲಿ ಓದುತ್ತಿದ್ದ ಪರಶುಪಾಣಿಯನ್ನು ಶಾಲಾ ಆಡಳಿತ ಮಂಡಳಿ ಏಕಾಏಕಿ ಶಾಲೆಯಿಂದ ತೆಗೆದುಹಾಕಿದ್ದು, ಕಳೆದ ಒಂದು ವರ್ಷದಿಂದ ನನ್ನ ಮಕ್ಕಳು ಮನೆಯಲ್ಲೇ ಇದ್ದಾರೆ. ಕಳೆದ ಮಾರ್ಚ್‌ನಲ್ಲಿ ಪರೀಕ್ಷೆ ಬರೆಯಲಷ್ಟೇ ಮಕ್ಕಳಿಗೆ ಅನುಮತಿ ನೀಡಲಾಗಿತ್ತು. ನನ್ನ ಮಕ್ಕಳ ವರ್ಗಾವಣೆ ಪತ್ರವನ್ನು ನಾನು ಕೇಳದೆ ಇದ್ದರೂ ಶಾಲಾ ಆಡಳಿತ ಮಂಡಳಿ ನನಗೆ ಪೋಸ್ಟ್ ಮೂಲಕ ಕಳುಹಿಸಿದೆ. ಹೀಗಾಗಿ ಕೂಡಲೇ ಶಾಲಾ ಆಡಳಿತ ಮಂಡಳಿ ವಿರುದ್ಧ ಕ್ರಮ ಕೈಗೊಳ್ಳಬೇಕು,” ಎಂದು ಆಗ್ರಹಿಸಿರುವ ಪೋಷಕರು, ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಿಗೆ ಮನವಿ ಮಾಡಿದ್ದಾರೆ.

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಕಾರ್ಯದರ್ಶಿ ಶಾಲಿನಿ ರಜನೀಶ್ ಪ್ರತಿಭಟನಾನಿರತರೊಂದಿಗೆ ಮಾತನಾಡಿ, ಘಟನೆಯ ಕುರಿತಂತೆ ಪರಿಶೀಲಿಸುವುದಾಗಿ ಭರವಸೆ ನೀಡಿದರು.

ದೇಶಾದ್ಯಂತ ಬ್ಯಾಂಕ್ ನೌಕರರ ಮುಷ್ಕರ, ಬ್ಯಾಂಕ್ ಸೇವೆಯಲ್ಲಿ ವ್ಯತ್ಯಯ
ನಿವೃತ್ತಿ ವೇತನಕ್ಕೆ ಆಗ್ರಹಿಸಿ ಸೀಮೆಎಣ್ಣೆ ವಿತರಕರಿಂದ ಬೀದರ್‌ನಲ್ಲಿ ಹೋರಾಟ 
ಬಾಲಕಿ ಮೇಲಿನ ಅತ್ಯಾಚಾರ, ಕೊಲೆಗೆ ಖಂಡನೆ; ಬೀದರ್‌ನಲ್ಲಿ ಪ್ರತಿಭಟನೆ
Editor’s Pick More