ಪ್ರತಿಭಟನಾನಿರತರ ಕೈಯಲ್ಲಿ ಲಾಠಿ ಪ್ರತ್ಯಕ್ಷ, ಉಡುಪಿ ಪೊಲೀಸರು ಗಲಿಬಿಲಿ

ರಫೇಲ್ ಯುದ್ಧ ವಿಮಾನ ಖರೀದಿ ಹಗರಣವನ್ನು ಖಂಡಿಸಿ ಉಡುಪಿಯಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಹಮ್ಮಿಕೊಂಡಿದ್ದರು. ಈ ವೇಳೆ, ಇದ್ದಕ್ಕಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಕೈಯಲ್ಲಿ ಲಾಠಿ ಹಿಡಿದು ಪ್ರತಿಭಟನೆ ನಡೆಸಿದ್ದರಿಂದ ಒಂದು ಕ್ಷಣ ಪೊಲೀಸರೇ ಗಲಿಬಿಲಿಗೊಂಡರು

ರೆಫೇಲ್ ಯುದ್ಧ ವಿಮಾನ ಹಗರಣ ಖಂಡಿಸಿ ಉಡುಪಿಯಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಲಾಠಿ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು. ಇದ್ದಕ್ಕಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಕೈಯಲ್ಲಿ ಲಾಠಿ ಹಿಡಿದು ಪ್ರತಿಭಟನೆ ನಡೆಸಿದ್ದರಿಂದ ಒಂದು ಕ್ಷಣ ಪೊಲೀಸರೇ ಗಲಿಬಿಲಿಗೊಂಡರು.

ರಫೇಲ್ ಯುದ್ಧವಿಮಾನ ಹಗರಣ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗುತ್ತ, ಮಣಿಪಾಲದ ಟೈಗರ್ ಸರ್ಕಲ್ ಸಮೀಪದಿಂದ ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿ ಕಚೇರಿವರೆಗೆ ಸಾಗಿದರು. ಈ ವೇಳೆ, ಇದ್ದಕ್ಕಿದ್ದಂತೆ ಮೋದಿ ವಿರುದ್ದ ಘೋಷಣೆ ಕೂಗಿದ ಕಾರ್ಯಕರ್ತರು ಲಾಠಿ ಬೀಸುತ್ತ ಪಾದಯಾತ್ರೆ ನಡೆಸಿದರು. ಅನುಮತಿ ಇಲ್ಲದೆ ಪ್ರತಿಭಟನೆಯಲ್ಲಿ ಸಾಮೂಹಿಕ ಲಾಠಿ ಪ್ರದರ್ಶನ ಮಾಡಿದ್ದರಿಂದ ಪೊಲೀಸರಿಗೂ ತಕ್ಷಣ ಏನು ಮಾಡಬೇಕೆಂದೇ ತೋಚಲಿಲ್ಲ. ಬಳಿಕ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದರು.

ದೇಶಾದ್ಯಂತ ಬ್ಯಾಂಕ್ ನೌಕರರ ಮುಷ್ಕರ, ಬ್ಯಾಂಕ್ ಸೇವೆಯಲ್ಲಿ ವ್ಯತ್ಯಯ
ನಿವೃತ್ತಿ ವೇತನಕ್ಕೆ ಆಗ್ರಹಿಸಿ ಸೀಮೆಎಣ್ಣೆ ವಿತರಕರಿಂದ ಬೀದರ್‌ನಲ್ಲಿ ಹೋರಾಟ 
ಬಾಲಕಿ ಮೇಲಿನ ಅತ್ಯಾಚಾರ, ಕೊಲೆಗೆ ಖಂಡನೆ; ಬೀದರ್‌ನಲ್ಲಿ ಪ್ರತಿಭಟನೆ
Editor’s Pick More