ವೃದ್ಧಾಪ್ಯ ಪಿಂಚಣಿ ಏರಿಕೆಗೆ ಒತ್ತಾಯಿಸಿ ದೆಹಲಿಯಲ್ಲಿ ಹಿರಿಯರ ಪ್ರತಿಭಟನೆ

ಸಾರ್ವತ್ರಿಕ ಪಿಂಚಣಿ ಯೋಜನೆಗೆ ಒತ್ತಾಯಿಸಿ 16ಕ್ಕೂ ಹೆಚ್ಚು ರಾಜ್ಯಗಳಿಂದ ಆಗಮಿಸಿದ್ದ 10,000ಕ್ಕೂ ಹೆಚ್ಚು ಹಿರಿಯ ನಾಗರಿಕರು ದೆಹಲಿಯಲ್ಲಿ ಪ್ರತಿಭಟಿಸಿದರು. ಕನಿಷ್ಠ ವೇತನದ ಶೇ.50ರಷ್ಟು ಪಿಂಚಣಿಯನ್ನು ನೀಡುವಂತೆ ಪ್ರತಿಭಟನಾಕಾರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು

ಸಾರ್ವತ್ರಿಕ ಪಿಂಚಣಿ ಯೋಜನೆಗೆ ಒತ್ತಾಯಿಸಿ ದೇಶದ 16ಕ್ಕೂ ಹೆಚ್ಚು ರಾಜ್ಯಗಳಿಂದ ಆಗಮಿಸಿದ್ದ 10,000ಕ್ಕೂ ಹೆಚ್ಚು ಹಿರಿಯ ನಾಗರಿಕರು ರಾಜಧಾನಿ ದೆಹಲಿಯಲ್ಲಿಂದು ಪ್ರತಿಭಟನೆ ನಡೆಸಿದರು. ಕನಿಷ್ಠ ವೇತನದ ಶೇ.50ರಷ್ಟು ಪಿಂಚಣಿಯನ್ನು ನೀಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

ವೃದ್ಧಾಪ್ಯದ ಪಿಂಚಣಿ ಯೋಜನೆಗಾಗಿ 2006ರ ಬಜೆಟ್‌ನಲ್ಲಿ ಕೇಂದ್ರ ಸರ್ಕಾರ 1,100 ಕೋಟಿ ರುಪಾಯಿ ಬಿಡುಗಡೆ ಮಾಡಿತ್ತು. ಅಂದಿನಿಂದ ದೇಶದ ಪ್ರತಿ ಹಿರಿಯ ನಾಗರಿಕರಿಗೆ ಮಾಸಿಕ 200 ರು. ಪಿಂಚಣಿ ದೊರೆಯುತ್ತಿದ್ದು, 11 ವರ್ಷಗಳಿಂದ ಯಾವ ಏರಿಕೆಯೂ ಕಂಡಿಲ್ಲ. ಈ ವರ್ಷದ ಬಜೆಟ್‌ನಲ್ಲಿ ಕೇಂದ್ರ ಸರ್ಕಾರ ವೃದ್ಧಾಪ್ಯದ ಪಿಂಚಣಿಗಾಗಿ 6,564 ಕೋಟಿ ರು. ಮೀಸಲಿರಿಸಿದೆಯಾದರೂ ವೃದ್ಧರಿಗೆ ಬರುವ ಮಾಸಿಕ ವೇತನದಲ್ಲಿ ಯಾವ ಬದಲಾವಣೆಗಳೂ ಆಗಿಲ್ಲ. ಬಿಹಾರ, ಗೋವಾ, ತಮಿಳುನಾಡಿನ ರಾಜ್ಯ ಸರ್ಕಾರಗಳೇ ಕೇಂದ್ರ ಸರ್ಕಾರಕ್ಕಿಂತ ಹೆಚ್ಚು ಮಾಸಿಕ ಪಿಂಚಣಿ ನೀಡುತ್ತಿದ್ದು, ಕೇಂದ್ರ ಸರ್ಕಾರವೂ ಮಾಸಿಕ ಪಿಂಚಣಿಯನ್ನು 2,500 ಸಾವಿರ ರು.ಗಳಿಗೆ ಹೆಚ್ಚಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.

ದೇಶಾದ್ಯಂತ ಬ್ಯಾಂಕ್ ನೌಕರರ ಮುಷ್ಕರ, ಬ್ಯಾಂಕ್ ಸೇವೆಯಲ್ಲಿ ವ್ಯತ್ಯಯ
ನಿವೃತ್ತಿ ವೇತನಕ್ಕೆ ಆಗ್ರಹಿಸಿ ಸೀಮೆಎಣ್ಣೆ ವಿತರಕರಿಂದ ಬೀದರ್‌ನಲ್ಲಿ ಹೋರಾಟ 
ಬಾಲಕಿ ಮೇಲಿನ ಅತ್ಯಾಚಾರ, ಕೊಲೆಗೆ ಖಂಡನೆ; ಬೀದರ್‌ನಲ್ಲಿ ಪ್ರತಿಭಟನೆ
Editor’s Pick More