ಏಷ್ಯಾ ಕಪ್ ಭಾರತ ತಂಡದಲ್ಲಿ ಕನ್ನಡಿಗರಾದ ಮನೀಶ್, ರಾಹುಲ್‌ಗೆ ಸ್ಥಾನ

ಏಷ್ಯಾ ಕಪ್ ಕ್ರಿಕೆಟ್ ಪಂದ್ಯಾವಳಿಗೆ ನಿರೀಕ್ಷೆಯಂತೆಯೇ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ. ರೋಹಿತ್ ಶರ್ಮಾ ಮುನ್ನಡೆಸಲಿರುವ ಭಾರತ ತಂಡದಲ್ಲಿ ಕೆ ಎಲ್ ರಾಹುಲ್ ಮತ್ತು ಮನೀಶ್ ಪಾಂಡೆ ಸ್ಥಾನ ಪಡೆದಿದ್ದಾರೆ. ೨೦ರ ಹರೆಯದ ರಾಜಸ್ಥಾನದ ಎಡಗೈ ವೇಗಿ ಖಲೀಲ್‌ಗೆ ಸ್ಥಾನ ಸಿಕ್ಕಿದೆ

ಚತುಷ್ಕೋನ ಸರಣಿಯಲ್ಲಿ ಭಾರತ ಬಿ ತಂಡಕ್ಕೆ ಚಾಂಪಿಯನ್ ಪಟ್ಟ ತಂದಿತ್ತ ಕನ್ನಡಿಗ ಮನೀಶ್ ಪಾಂಡೆ ಜತೆಗೆ ಅಂಬಟಿ ರಾಯುಡು ಮತ್ತು ಕೇದಾರ್ ಜಾಧವ್ ಭಾರತ ಏಕದಿನ ತಂಡಕ್ಕೆ ವಾಪಸಾಗಿದ್ದಾರೆ. ಶನಿವಾರ (ಸೆ.೧) ಮುಂಬೈನಲ್ಲಿ ಸಭೆ ಸೇರಿದ್ದ ಭಾರತೀಯ ಕ್ರಿಕೆಟ್ ಆಯ್ಕೆಸಮಿತಿ, ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲು ತೀರ್ಮಾನಿಸಿತು.

ಕೊಹ್ಲಿಯ ಅನುಪಸ್ಥಿತಿಯಲ್ಲಿ ತಂಡವನ್ನು ಮುಂಬೈ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಮುನ್ನಡೆಸಲಿದ್ದು, ಅವರಿಗೆ ನೆರವಾಗಿ ಶಿಖರ್ ಧವನ್‌ಗೆ ಉಪನಾಯಕತ್ವ ವಹಿಸಲಾಗಿದೆ. ಇನ್ನು ಮಾಜಿ ನಾಯಕ ಎಂ ಎಸ್ ಧೋನಿ ತಂಡಕ್ಕೆ ಮರಳಿದ್ದು, ರೋಹಿತ್ ಮತ್ತು ಧವನ್‌ಗೆ ಸೂಕ್ತ ಸಲಹೆಗಳನ್ನು ನೀಡಿ ತಂಡದ ಯಶಸ್ಸಿಗೆ ಶ್ರಮಿಸಲಿದ್ದಾರೆ.

ತಂಡದಲ್ಲಿ ಸ್ಥಾನ ಪಡೆದ ಹೊಸಮುಖ ರಾಜಸ್ತಾನದ ೧೯ ವರ್ಷದೊಳಗಿನ ವೇಗಿ ಖಲೀಲ್ ಅಹಮದ್. ಕಳೆದ ವರ್ಷ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ (ಐಪಿಎಲ್) ಸನ್‌ರೈಸರ್ಸ್ ಹೈದರಾಬಾದ್ ಪರ ಆಡಿದ್ದ ಖಲೀಲ್‌ಗೆ ಮೊದಲ ಬಾರಿಗೆ ತಂಡದಲ್ಲಿ ಸ್ಥಾನ ಕಲ್ಪಿಸಲಾಗಿದೆ. ಸೆಪ್ಟೆಂಬರ್ ೧೫ರಿಂದ ದುಬೈನಲ್ಲಿ ಶುರುವಾಗಲಿರುವ ಏಷ್ಯಾ ಕಪ್ ಪಂದ್ಯಾವಳಿಯಲ್ಲಿ ಸೆ. ೧೯ರಂದು ಪಾಕಿಸ್ತಾನ ವಿರುದ್ಧ ಸೆಣಸಲಿದ್ದು, ಅದಕ್ಕೂ ಮುನ್ನ ಸೆ.೧೮ರಂದು ಅರ್ಹತಾ ತಂಡದೊಟ್ಟಿಗೆ ಮೊದಲ ಪಂದ್ಯವನ್ನಾಡಲಿದೆ.

ಇದನ್ನೂ ಓದಿ : ಇಂಡೋ-ಪಾಕ್ ಏಷ್ಯಾ ಕಪ್ ಕ್ರಿಕೆಟ್ | ಸೆಪ್ಟೆಂಬರ್ ೧೯ಕ್ಕೆ ಕದನ ಕೌತುಕ

ಪ್ರಕಟಿತ ತಂಡ ಇಂತಿದೆ

ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್ (ಉಪನಾಯಕ), ಕೆ ಎಲ್ ರಾಹುಲ್, ಅಂಬಟಿ ರಾಯುಡು, ಮನೀಶ್ ಪಾಂಡೆ, ಕೇದಾರ್ ಜಾಧವ್, ಎಂ ಎಸ್ ಧೋನಿ (ವಿಕೆಟ್‌ಕೀಪರ್), ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ಕುಲದೀಪ್ ಯಾದವ್, ಯಜುವೇಂದ್ರ ಚಾಹಲ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಜಸ್ಪ್ರೀತ್ ಬುಮ್ರಾ, ಶಾರ್ದೂಲ್ ಠಾಕೂರ್ ಹಾಗೂ ಖಲೀಲ್ ಅಹಮದ್.

ತಿರುವನಂತಪುರದಲ್ಲಿ ಸರಣಿ ಕೈವಶಕ್ಕೆ ಸಜ್ಜಾದ ಭಾರತ, ಎಲ್ಲರ ಗಮನ ಧೋನಿಯತ್ತ
ಗಂಡು ಮಗುವಿನ ಸಂಭ್ರಮದಲ್ಲಿ ಸಾನಿಯಾ ಮಿರ್ಜಾ ಹಾಗೂ ಶೋಯೆಬ್ ದಂಪತಿ
ಕೊಹ್ಲಿ ಕಟ್ಟಿಹಾಕಿದ ಕೆರಿಬಿಯನ್ನರನ್ನು ಕಾಡಿದ ರೋಹಿತ್-ಅಂಬಟಿ ಬೊಂಬಾಟ್ ಶತಕ
Editor’s Pick More