ಸಂಕಲನ| ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಕವರೇಜ್

ಜಯನಗರ ವಿಧಾನಸಭಾ ಕ್ಷೇತ್ರ ಚುನಾವಣೆಯ ಕುರಿತಂತೆ ‘ದಿ ಸ್ಟೇಟ್’ ಮಾಡಿದ ಕವರೇಜ್ ಇಲ್ಲಿದೆ. ಗೆಲುವು ಸಾಧಿಸಿದ ಸೌಮ್ಯರೆಡ್ಡಿ, ಠೇವಣಿ ಕಳೆದುಕೊಂಡ ರವಿಕೃಷ್ಣಾರೆಡ್ಡಿ, ಅಕಾಲಿಕವಾಗಿ ಸಾವನಪ್ಪಿದ ವಿಜಯ್ ಕುಮಾರ್, ಚುನಾವಣೆಗೂ ಮುನ್ನ ‘ದಿ ಸ್ಟೇಟ್’ ಜೊತೆಗೆ ಹಲವು ವಿಚಾರಗಳನ್ನು ಹಂಚಿಕೊಂಡಿದ್ದರು

ಬಿಜೆಪಿಯ ಬಿಎನ್ ವಿಜಯಕುಮಾರ್ ನಿಧನದಿಂದ ಮುಂದೂಡಲ್ಪಟ್ಟಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ನ ಸೌಮ್ಯ ರೆಡ್ಡಿ 2,889 ಮತಗಳಿಂದ ಜಯಗಳಿಸಿದ್ದಾರೆ. ಪಕ್ಷೇತರ ಅಭ್ಯರ್ಥಿ ರವಿಕೃಷ್ಣಾ ರೆಡ್ಡಿ ಠೇವಣಿ ಕಳೆದುಕೊಂಡಿದ್ದಾರೆ

ಬಿಜೆಪಿ ಅಭ್ಯರ್ಥಿ ನಿಧನದಿಂದ ಮುಂದೂಡಲ್ಪಟ್ಟಿದ್ದ ಬೆಂಗಳೂರಿನ ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಸೋಮವಾರ ಚುನಾವಣೆ ನಡೆದಿದ್ದು, ಶೇಕಡಾ 55ರಷ್ಟು ಮತದಾನವಾಗಿದೆ. ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿಗಳು, ರವಿಕೃಷ್ಣಾ ರೆಡ್ಡಿ ಸೇರಿದಂತೆ 19 ಮಂದಿ ಸ್ಪರ್ಧೆ ಮಾಡಿದ್ದರು

ಜಯನಗರದಲ್ಲಿ ಜೆಡಿಎಸ್ ಅಭ್ಯರ್ಥಿ ಹಿಂದೆ ಸರಿಸಿ ಬಿಜೆಪಿ ವಿರುದ್ಧದ ಹೋರಾಟವನ್ನು ಕಾಂಗ್ರೆಸ್ ಮತ್ತಷ್ಟು ರೋಚಕವಾಗಿಸಿದೆ. ಬಿಜೆಪಿಗೆ ಆಂತರಿಕ ಭಿನ್ನಮತದ ಆತಂಕ ಶುರುವಾಗಿದೆ. ಜೊತೆಗೆ , ಪಕ್ಷೇತರ ಅಭ್ಯರ್ಥಿ ರವಿಕೃಷ್ಣಾರೆಡ್ಡಿ ರಾಷ್ಟ್ರೀಯ ಪಕ್ಷಗಳಿಗೆ ಮರ್ಮಾಘಾತ ನೀಡುವ ಉಮೇದಿನಲ್ಲಿದ್ದಾರೆ.

"ಸರಸ್ವತಿ, ಗೌರಿ ಎಂಬೆಲ್ಲಾ ದೇವರಿರುವ ಈ ದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯಗಳನ್ನು ನೋಡಿದರೆ ಭಯವಾಗುತ್ತಿದೆ," ಎಂದು ಆತಂಕ ವ್ಯಕ್ತಪಡಿಸುತ್ತಾರೆ ಜಯನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ. ದ್ವೇಷ ರಾಜಕಾರಣ ಮತ್ತಿತರ ವಿಷಯಗಳ ಬಗ್ಗೆ ಅವರಿಲ್ಲಿ ಮಾತನಾಡಿದ್ದಾರೆ.

ಬೆಂಗಳೂರಿನ ಜಯನಗರದ ಬಿಜೆಪಿ ಶಾಸಕ ಹಾಗೂ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯೂ ಆಗಿದ್ದ ವಿಜಯ್ ಕುಮಾರ್ ಪ್ರಚಾರದ ವೇಳೆಯೆ ಕುಸಿದು ಬಿದ್ದು ಹೃದಯಾಘಾತದಿಂದ ನಿಧನರಾಗಿದ್ದರು. ಇದಕ್ಕೂ ಮುನ್ನ ಪ್ರಚಾರದಲ್ಲಿ ತೊಡಗಿದ್ದ ಅವರು ‘ದಿ ಸ್ಟೇಟ್’ ಜೊತೆಗೆ ಮಾತನಾಡಿ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದರು

ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆಯ ರಾಜ್ಯಧ್ಯಕ್ಷರಾಗಿರುವ ರವಿಕೃಷ್ಣಾ ರೆಡ್ಡಿ 2018ರ ವಿಧಾನಸಭಾ ಚುನಾವಣೆಯಲ್ಲಿ ಬೆಂಗಳೂರಿನ ಜಯನಗರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಗೆಲುವಿನ ಭರವಸೆಯಲ್ಲಿರುವ ಅವರು ದಿ ಸ್ಟೇಟ್ ಜೊತೆಗೆ ಮಾತನಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮುಂದಿರುವ ಅತಿದೊಡ್ಡ ಸವಾಲು ಯಾವುದು ಗೊತ್ತೇ?
ಸೂಪರ್ಟೆಕ್ ₹600 ಕೋಟಿ ಸಾಲ ಮರುಪಾವತಿ ವೈಫಲ್ಯ; ಕಾದಿದೆ ಮತ್ತಷ್ಟು ಸಂಕಷ್ಟ?
ನಿಫ್ಟಿ ಕಂಪನಿಗಳಲ್ಲಿ 588 ಲೈಂಗಿಕ ಕಿರುಕುಳ ಪ್ರಕರಣ; ಐಟಿಯಲ್ಲೇ ಹೆಚ್ಚು‍!
Editor’s Pick More