ವಿಡಿಯೋ| ಉನ್ನಾವೊ, ಕಟುವಾ ಅನ್ಯಾಯ ಖಂಡಿಸಿ ಕಾಂಗ್ರೆಸ್‌ ಮೊಂಬತ್ತಿ ಮೆರವಣಿಗೆ

ಉನ್ನಾವೊ, ಕಟುವಾ ಅತ್ಯಾಚಾರ ಪ್ರಕರಣ ಖಂಡಿಸಿ ಬಿಜೆಪಿ ವಿರುದ್ಧ ರಾಷ್ಟ್ರಾದ್ಯಂತ ಪ್ರತಿಭಟನೆ ಸ್ಫೋಟಿಸಿದೆ. ಈ ಹಿನ್ನೆಲೆಯಲ್ಲಿ, ಮಹಿಳಾ ಸುರಕ್ಷತೆಗೆ ಆಗ್ರಹಿಸಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ದೆಹಲಿಯಲ್ಲಿ ಮಧ್ಯರಾತ್ರಿ ಕರೆ ಕೊಟ್ಟಿದ್ದ ಮೊಂಬತ್ತು ಮೆರವಣಿಗೆಯಲ್ಲಿ ಸಾವಿರಾರು ಮಂದಿ ಪಾಲ್ಗೊಂಡಿದ್ದರು

ಉನ್ನಾವೊ ಹಾಗೂ ಕಟುವಾ ಅತ್ಯಾಚಾರ ಪ್ರಕರಣಗಳನ್ನು ಖಂಡಿಸಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮುಂದಾಳತ್ವದಲ್ಲಿ ಗುರುವಾರ ಮಧ್ಯರಾತ್ರಿ ಇಂಡಿಯಾ ಗೇಟ್ ಬಳಿ ಮೊಂಬತ್ತಿ ಮೆರವಣಿಗೆ ನಡೆಸಲಾಯಿತು.

ಸಾರ್ವಜನಿಕರ ಜೊತೆಗೆ ಪ್ರಿಯಾಂಕಾ ಹಾಗೂ ಪತಿ ರಾಬರ್ಟ್ ವಾದ್ರಾ, ಕಾಂಗ್ರೆಸ್ ಮುಖಂಡರು, ಪಕ್ಷದ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಈ ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಕೇಂದ್ರ ಸರಕಾರ ಹಾಗೂ ಉತ್ತರ ಪ್ರದೇಶ ಹಾಗೂ ಜಮ್ಮು-ಕಾಶ್ಮೀರದ ರಾಜ್ಯ ಸರಕಾರಗಳ ವಿರುದ್ದ ಘೋಷಣೆ ಕೂಗಿದರು.

ಜನುಮದಿನ | ಸರೋದ್‌ ಮಾಂತ್ರಿಕ ಪಂಡಿತ್‌ ರಾಜೀವ ತಾರಾನಾಥ
ವಿಡಿಯೋ | ಅರ್ಥಶಾಸ್ತ್ರಜ್ಞೆ ಗೀತಾ ಸಾಧನೆಯ ಪಥ ತೆರೆದಿಟ್ಟ ತಂದೆ ಗೋಪಿನಾಥ್‌
ಇಲ್ಲಿದೆ ನೋಡಿ, ಮಹಾತ್ಮ ಗಾಂಧಿ ಮೊತ್ತ ಮೊದಲ ವಿಡಿಯೋ ಸಂದರ್ಶನ
Editor’s Pick More