ಶಿವರಾಮ ಕಾರಂತರ ಬದುಕು ಕಟ್ಟಿಕೊಟ್ಟ 20 ನಿಮಿಷಗಳ ಸಾಕ್ಷ್ಯಚಿತ್ರ

‘ಕಡಲತೀರದ ಭಾರ್ಗವ’ ಎಂದೇ ಖ್ಯಾತರಾದ ಶಿವರಾಮ ಕಾರಂತರು ಹುಟ್ಟಿದ್ದು 1902ರ ಅಕ್ಟೋಬರ್ 10ರಂದು. ಸಾಹಿತ್ಯ ಮಾತ್ರವಲ್ಲದೆ ಇತರ ಸಾಂಸ್ಕೃತಿಕ ಕ್ಷೇತ್ರದಲ್ಲೂ ಸಾಧನೆ ಮಾಡಿರುವ ಕಾರಂತರ ಬದುಕಿನ ಕುರಿತಂತೆ ಕರ್ನಾಟಕ ವಾರ್ತಾ ಇಲಾಖೆ ನಿರ್ಮಿಸಿರುವ ಸಾಕ್ಷ್ಯಚಿತ್ರವಿದು

ಜ್ಞಾನಪೀಠ ಪುರಸ್ಕೃತ ಶಿವರಾಮ ಕಾರಂತರು 1902ರ ಅಕ್ಟೋಬರ್ 10ರಂದು ಉಡುಪಿ ಜಿಲ್ಲೆಯ ಕೋಟದಲ್ಲಿ ಜನಿಸಿದರು. 'ಕಡಲತೀರದ ಭಾರ್ಗವ' ಎಂದೇ ಖ್ಯಾತರಾಗಿದ್ದ ಕಾರಂತರು, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರೂ ಹೌದು. ‘ಚೋಮನ ದುಡಿ’, ‘ನಾವು ಕಟ್ಟಿದ ಸ್ವರ್ಗ’, ‘ಬೆಟ್ಟದ ಜೀವ’, ‘ಮರಳಿ ಮಣ್ಣಿಗೆ’, ‘ಮೂಕಜ್ಜಿಯ ಕನಸುಗಳು’, ‘ಸರಸಮ್ಮನ ಸಮಾಧಿ’ ಸೇರಿದಂತೆ 427ಕ್ಕೂ ಅಧಿಕ ಪುಸ್ತಕಗಳನ್ನು ಬರೆದರು. ಸಾಹಿತ್ಯ ಮಾತ್ರವಲ್ಲದೆ ಇತರ ಸಾಂಸ್ಕೃತಿಕ ಕ್ಷೇತ್ರದಲ್ಲೂ ಸಾಧನೆ ಮಾಡಿದ್ದು ಕಾರಂತರ ವಿಶೇಷ.

ಕರ್ನಾಟಕದ ಪ್ರಮುಖ ಕಲೆಯಾದ ಯಕ್ಷಗಾನದ ಉಳಿವಿಗೆ ಪ್ರಯತ್ನಿಸಿ, ಅದರಲ್ಲಿ ಹಲವು ಪ್ರಯೋಗಗಳನ್ನು ಮಾಡಿದರು. ನಿರಂತರ ಪ್ರಯೋಗಶೀಲರಾಗಿದ್ದ ಅವರು, ಕನ್ನಡ ಚಿತ್ರರಂಗದಲ್ಲಿ ತಮ್ಮ ಪ್ರಯೋಗ ಆರಂಭ ಮಾಡಿದ್ದು ಮೂಕಿ ಚಿತ್ರ ನಿರ್ಮಾಣಕ್ಕೆ ಕೈಹಾಕುವ ಮೂಲಕ. ಹರಿಜನರ ಬದುಕನ್ನು ಆಧರಿಸಿದ್ದ ‘ಡೊಮಿಂಗೋ’ (1930) ಚಿತ್ರವನ್ನು ತಾವೇ ಚಿತ್ರೀಕರಿಸಿ, ಅಭಿನಯಿಸಿ ನಿರ್ದೇಶಿಸಿದ್ದರು. ನಂತರ ‘ಭೂತರಾಜ್ಯ’ (1931) ಎಂಬ ಮೂಕಿ ಚಿತ್ರಗಳನ್ನು ಸಹ ನಿರ್ಮಿಸಿದರು. ಕಾರಂತರಿಗೆ ಜ್ಞಾನಪೀಠ, ಪದ್ಮಭೂಷಣ, ಪಂಪ ಪ್ರಶಸ್ತಿ, ನಾಡೋಜ ಪುರಸ್ಕಾರ, ಎಂಟು ವಿಶ್ವವಿದ್ಯಾಲಯಗಳ ಗೌರವ ಡಾಕ್ಟರೇಟ್‌ ಪುರಸ್ಕಾರ ಸಿಕ್ಕಿದೆ. ಕಾರಂತರ ಹುಟ್ಟುಹಬ್ಬದ ನೆಪದಲ್ಲಿ ಅವರ ಕುರಿತ ಸಾಕ್ಷ್ಯಚಿತ್ರ ಇಲ್ಲಿದೆ.

ಜನುಮದಿನ | ಸರೋದ್‌ ಮಾಂತ್ರಿಕ ಪಂಡಿತ್‌ ರಾಜೀವ ತಾರಾನಾಥ
ವಿಡಿಯೋ | ಅರ್ಥಶಾಸ್ತ್ರಜ್ಞೆ ಗೀತಾ ಸಾಧನೆಯ ಪಥ ತೆರೆದಿಟ್ಟ ತಂದೆ ಗೋಪಿನಾಥ್‌
ಇಲ್ಲಿದೆ ನೋಡಿ, ಮಹಾತ್ಮ ಗಾಂಧಿ ಮೊತ್ತ ಮೊದಲ ವಿಡಿಯೋ ಸಂದರ್ಶನ
Editor’s Pick More